Homeಮುಖಪುಟಮಹಾರಾಷ್ಟ್ರದಲ್ಲಿ ರೈಲು ಅಪಘಾತ: ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್‌ಪ್ರೆಸ್‌

ಮಹಾರಾಷ್ಟ್ರದಲ್ಲಿ ರೈಲು ಅಪಘಾತ: ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್‌ಪ್ರೆಸ್‌

- Advertisement -
- Advertisement -

ಮಹಾರಾಷ್ಟ್ರದ ರತ್ನಗಿರಿ ಸಮೀಪ ಇಂದು ಮುಂಜಾನೆ ರೈಲು ಅಪಘಾತವೊಂದು ನಡೆದಿದೆ. ದೆಹಲಿ-ಗೋವಾ  ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಮಹಾರಾಷ್ಟ್ರದ ರತ್ನಗಿರಿ ಸಮೀಪ ರೈಲು ಸುರಂಗದೊಳಗೆ ಹಳಿತಪ್ಪಿದೆ. ದೆಹಲಿಯ ಹಜರತ್ ನಿಜಾಮುದ್ದಿನ್‌ ನಿಲ್ಧಾಣದಿಂದ ಗೋವಾದ ಮಡಗಾಂವ್‌ಗೆ ಹೊರಟಿದ್ದ ದೆಹಲಿ ಗೋವಾ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಮುಂಜಾನೆ 4:15 ನಿಮಿಷದ ಹೊತ್ತಿಗೆ ಮುಂಬೈನಿಂದ 325 ಕಿಲೋ ಮೀಟರ್‌ ದೂರದಲ್ಲಿರುವ ಕರಬುಡೆ ಸುರಂಗದಲ್ಲಿ ಹಳಿ ತಪ್ಪಿದೆ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕೊಂಕಣ್ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆಯ ಕಾರಣದಿಂದ ಗುಡ್ಡವೊಂದು ಹಳಿಯ ಮೇಲೆ ಕುಸಿದ ಕಾರಣದಿಂದ ರೈಲು ಹಳಿ ಬಿಟ್ಟು ಚಲಿಸಿರುವುದು ರೈಲು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರೈಲಿನ ಮುಂದಗಡೆ ಚಕ್ರಗಳು ಹಳಿ ಬಿಟ್ಟು ಚಲಿಸಿದ್ದು ಅದೃಷ್ಟವಶಾತ್ ಹೆಚ್ಚಿನ ಅಪಾಯಗಳಿಲ್ಲದೇ ಪ್ರಯಾಣಿಕರು ಪಾರಾಗಿದ್ದಾರೆ

ಘಟನೆಯ ವಿಷಯ ತಿಳಿಯುತ್ತಿದ್ದಂತೆ ರೈಲ್ ಮೇಂಟೆನೆನ್ಸ್‌ ವೆಹಿಕಲ್ ಮತ್ತು ರೈಲ್ ಆಂಬುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿದ್ದು ತೆರವು ಕಾರ್ಯಾಚರಣೆಯಲ್ಲಿ ತೊಡಗಿವೆ. ಮುಂಬೈ ಸಮೀಪದ ರೋಹಾದಿಂದ ಮಂಗಳೂರಿನ ತೋಕುರ್ ವರೆಗಿನ 756 ಕಿಲೋ ಮೀಟರ್ ಮಾರ್ಗವನ್ನು ಕೊಂಕಣ್ ರೈಲ್ವೆ ನಿರ್ವಹಿಸುತ್ತಿದ್ದು ದೇಶದ ಅತ್ಯಂತ ದುರ್ಗಮ ಮಾರ್ಗಗಳಲ್ಲಿ ಕೊಂಕಣ್ ರೈಲ್ವೆ ಕೂಡ ಒಂದಾಗಿದೆ.


ಇದನ್ನೂ ಓದಿ : ‘ಯುದ್ಧವಿಲ್ಲದೆ ವಿಜಯವಿಲ್ಲ!’ – 8 ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...