Homeಮುಖಪುಟದೆಹಲಿ ಜನರ ಮಾತೃಭಾಷೆ ಕಲಿಸಲು ಮುಂದಾಗುವ ಮೂಲಕ ಮತ್ತೊಂದು ಜನಪರ ಹೆಜ್ಜೆಯಿಟ್ಟ ಆಪ್ ಸರ್ಕಾರ

ದೆಹಲಿ ಜನರ ಮಾತೃಭಾಷೆ ಕಲಿಸಲು ಮುಂದಾಗುವ ಮೂಲಕ ಮತ್ತೊಂದು ಜನಪರ ಹೆಜ್ಜೆಯಿಟ್ಟ ಆಪ್ ಸರ್ಕಾರ

- Advertisement -
- Advertisement -

ದೆಹಲಿಯ ಆಮ್ ಆದ್ಮಿ ಪಾರ್ಟಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಶಿಕ್ಷಣ ಕ್ಷೇತ್ರದಲ್ಲಿ ಮಾಡುತ್ತಿರುವ ಕ್ರಾಂತಿಕಾರಕ ಬದಲಾವಣೆ ಬಗ್ಗೆ ನಿಮಗೆಲ್ಲಾ ತಿಳಿದೇ ಇದೆ. ಇದೇ ನಿಟ್ಟಿನಲ್ಲಿ ದೆಹಲಿ ಸರ್ಕಾರವು ಹೊಸ ಯೋಜನೆಯೊಂದನ್ನು ಜಾರಿ ಮಾಡಲು ನಿರ್ಧರಿಸಿದೆ. ಏನದು ಹೊಸ ಯೋಜನೆ?

ದೆಹಲಿ ಶಾಲೆಗಳಲ್ಲಿ ಓದುತ್ತಿರುವ 8 ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮೈಥಿಲಿ ಭಾಷೆಯನ್ನು ಐಚ್ಚಿಕ ವಿಷಯವನ್ನಾಗಿ ಪರಿಚಯಿಸುವುದಾಗಿ ದೆಹಲಿ ಸರ್ಕಾರ ತಿಳಿಸಿದೆ.

‘ಪೂರ್ವಾಚಲೀಸ್’ ಎಂದೇ ಕರೆಯಲ್ಪಡುವ ಪೂರ್ವ ಉತ್ತರ ಪ್ರದೇಶ ಹಾಗೂ ಬಿಹಾರದಿಂದ ದೆಹಲಿಗೆ ವಲಸೆ ಬರುವ ಬಹುಪಾಲು ಜನರು ಮಾತನಾಡುವ ಭಾಷೆ ಮೈಥಿಲಿ ಮತ್ತು ಬೋಜ್ ಪುರಿಯಾಗಿದ್ದು, ದೆಹಲಿಗೆ ವಲಸೆ ಬಂದಿರುವ ಶೇ.40% ಜನರು ಈ ರಾಜ್ಯದವರೇ ಆಗಿದ್ದಾರೆ.

ಈಗಾಗಲೇ ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಮೈಥಿಲಿ ಭಾಷೆಯನ್ನು ಈ ವರ್ಷದಿಂದ ಐಚ್ಛಿಕ ವಿಷಯವನ್ನಾಗಿ ಸೇರಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ಹಾಗೆಯೇ ಆಧುನಿಕ ಭಾರತೀಯ ಭಾಷೆಗಳನ್ನು ವ್ಯಾಖ್ಯಾನಿಸುವ ಸಂವಿಧಾನದ 8ನೇ ಪರಿಚ್ಛೇದಕ್ಕೆ ಬೋಜ್ ಪುರಿ ಭಾಷೆಯನ್ನು ಸೇರಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಸರ್ಕಾರವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

‘8-12ನೇ ತರಗತಿವರೆಗಿನ ವಿದ್ಯಾರ್ಥಿಗಳು ಮೈಥಿಲಿ ಭಾಷೆಯನ್ನು ಒಂದು ವಿಷಯವನ್ನಾಗಿ ಕಲಿಯಲಿದ್ದಾರೆ. ದೆಹಲಿಯಲ್ಲಿ ವಾಸವಿರುವ ಮೈಥಿಲಿ ಭಾಷೆಯನ್ನು ಮಾತನಾಡಬಲ್ಲ ಸಾವಿರಾರು ವಿದ್ಯಾರ್ಥಿಗಳಿಗೆ ಮಾತೃಭಾಷೆಯನ್ನು ಒಂದು ವಿಷಯವನ್ನಾಗಿ  ಕಲಿಯಲು ಅವಕಾಶ ಸಿಗಲಿದೆ’ ಎಂದು ದೆಹಲಿ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿರುವ ಮನಿಷ್ ಸಿಸೋಡಿಯಾ ತಿಳಿಸಿದರು.

ಮೈಥಿಲಿ ಭಾಷೆಯಂತೆ ಬೋಜ್ ಪುರಿ ಭಾಷೆಯನ್ನು ಪರಿಚ್ಛೇದಕ್ಕೆ ಸೇರಿಸಿದಲ್ಲಿ ಬೋಜ್ ಪುರಿ ಭಾಷೆಯನ್ನು ಐಚ್ಛಿಕ ವಿಷಯವನ್ನಾಗಿ ವಿದ್ಯಾರ್ಥಿಗಳು ಕಲಿಸಬಹುದು. ಹಾಗಾಗಿ ಸಂವಿಧಾನದ 8ನೇ  ಪರಿಚ್ಛೇದದಲ್ಲಿ ಬೋಜ್ ಪುರಿ ಭಾಷೆಯನ್ನು ಒಳಗೊಳ್ಳಬೇಕು ಎಂದು ಸರ್ಕಾರವು ಒತ್ತಾಯಿಸಿದೆ.

‘ಮೈಥಿಲಿ ಭಾಷೆಯಂತೆ ಬೋಜ್ ಪುರಿಯನ್ನು ಐಚ್ಛಿಕ ವಿಷಯವನ್ನಾಗಿ ಪರಿಚಯಿಸಬೇಕು ಎಂದುಕೊಂಡೆವು. ಆದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬೋಜ್ ಪುರಿಯನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಮೈಥಿಲಿ-ಬೋಜ್ ಪುರಿ ಅಕಾಡೆಮಿ ಆಫ್ ದೆಹಲಿ ಅಧ್ಯಕ್ಷನಾಗಿ ನಾನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಬೋಜ್ ಪುರಿಯನ್ನು ಸೇರಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ’ ಎಂದು ಸಿಸೋಡಿಯಾ ತಿಳಿಸಿದರು.

‘ಈಗಾಗಲೇ ಸರ್ಕಾರವು ಸಂಸ್ಕೃತವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋಚಿಂಗ್ ನೀಡುತ್ತಿದೆ. ಈ ಪ್ರಯೋಗದಲ್ಲಿ ನಾವು ಉತ್ತಮ ಫಲಿತಾಂಶ ಪಡೆದಿದ್ದೇವೆ. ಇದೇ  ನಿಟ್ಟಿನಲ್ಲಿ ಮೈಥಿಲಿ ಭಾಷೆಯನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ನಾಗರೀಕ ಸೇವಾ ಪರೀಕ್ಷೆ ಒಳಗೊಂಡಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸ್ಪರ್ಧಿಸುವ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ನೀಡಲು ಸರ್ಕಾರ ನಿರ್ಧರಿಸಿದೆ’ ಎಂದು ಮನೀಷ್ ಸಿಸೊಡಿಯಾ ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವು ಕಳ್ಳಸಾಗಣೆ ಆರೋಪ: ಮುಸ್ಲಿಮರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರು!

ಪೊಲೀಸರು ಬಿಡುಗಡೆ ಮಾಡುವ ವಿಡಿಯೊಗಳಲ್ಲಿ ಒಂದೇ ರೀತಿಯ ದೃಶ್ಯಗಳು ಮರುಕಳಿಸುತ್ತವೆ: ಕಾಲಿನ ಕೆಳಭಾಗಕ್ಕೆ ಗುಂಡೇಟು ತಗುಲಿದ ವ್ಯಕ್ತಿಯೊಬ್ಬರು ಕತ್ತಲಿನಲ್ಲಿ ಕುಂಟುತ್ತಾ ಸಾಗುತ್ತಿದ್ದರೆ, ಪೊಲೀಸರು ಅವರನ್ನು ಸುತ್ತುವರಿದು ಕರೆದೊಯ್ಯುತ್ತಾರೆ. ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ...

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ₹13.97 ಕೋಟಿ ಅನಧಿಕೃತ ವಹಿವಾಟು: ಎಫ್‌ಐಆರ್ ದಾಖಲು

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಜೊತೆಗಿನ ತನ್ನ ಸೆಟಲ್‌ಮೆಂಟ್ ಖಾತೆಯಿಂದ ರೂ 13.97 ಕೋಟಿ ಹಣವನ್ನು ಅನಧಿಕೃತವಾಗಿ ವರ್ಗಾಯಿಸಲಾಗಿದೆ (ಸೈಫನ್ ಮಾಡಲಾಗಿದೆ) ಎಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಸಿದೆ. ಹಿಂದುಸ್ತಾನ್ ಟೈಮ್ಸ್...

ಡಿ.ಕೆ ಶಿವಕುಮಾರ್, ಕೇರಳ ಸಿಎಂ ಸತೀಶನ್‌ಗೆ ಸ್ಟಿಂಗ್ ಆಪರೇಷನ್ ಬಲೆ? ಉನ್ನತ ಮಟ್ಟದ ತನಿಖೆಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲು ಯತ್ನಿಸಲಾಗಿದೆ ಎಂಬ ಆರೋಪದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಕಾಂಗ್ರೆಸ್ ಹೈಕಮಾಂಡ್...

‘ಬಿಳೇಕಹಳ್ಳಿ’ ಮೆಟ್ರೋ ನಿಲ್ದಾಣಕ್ಕೆ ಕೇವಲ ‘ಐಐಎಂಬಿ’ ಹೆಸರಿಟ್ಟಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ : ಮರುನಾಮಕರಣಕ್ಕೆ ಆಗ್ರಹ

ಬೆಂಗಳೂರಿನ 'ನಮ್ಮ ಮೆಟ್ರೋ' ಗುಲಾಬಿ ಮಾರ್ಗದ (Pink Line) 'ಬಿಳೇಕಹಳ್ಳಿ' ನಿಲ್ದಾಣಕ್ಕೆ ಕೇವಲ ಐಐಎಂಬಿ (ಇಂಡಿಯನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು) ಎಂದು ಹೆಸರಿಟ್ಟಿರುವುದಕ್ಕೆ ಊರಿನ ಜನರು ತೀವ್ರ ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದ್ದು,...

ಬಾಲ್ಯದಲ್ಲಿ ಮಾಡಿದ ಕೃತ್ಯಗಳಿಗಾಗಿ ಸೌದಿಯಲ್ಲಿ ಮರಣದಂಡನೆ: ವಿಶ್ವಸಂಸ್ಥೆ ತಜ್ಞರ ತೀವ್ರ ಖಂಡನೆ, ಇಬ್ಬರ ಜೀವ ಉಳಿಸಲು ಆಗ್ರಹ

ಸೌದಿ ಅರೇಬಿಯಾದಲ್ಲಿ ಬಾಲ್ಯದಲ್ಲಿ ಮಾಡಿದ ಕೃತ್ಯಗಳಿಗಾಗಿ ಮರಣದಂಡನೆಗೆ ಗುರಿಯಾಗಿದ್ದ ಹಸನ್ ಝಾಕಿ ಅಲ್-ಫರಾಜ್ ಅವರನ್ನು ಗಲ್ಲಿಗೇರಿಸಿರುವುದಕ್ಕೆ ವಿಶ್ವಸಂಸ್ಥೆಯ ತಜ್ಞರು ತೀವ್ರ ಆಘಾತ ಮತ್ತು ಖಂಡನೆ ವ್ಯಕ್ತಪಡಿಸಿದ್ದಾರೆ. ಇದೇ ಪ್ರಕರಣದ ಮಾದರಿಯಲ್ಲಿ ಮರಣದಂಡನೆ ಎದುರಿಸುತ್ತಿರುವ...

ತಮಿಳುನಾಡು| ಜಾತಿ ತಾರತಮ್ಯಕ್ಕೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಶಿಕ್ಷಕನ ಬಂಧನ; ಸಹಪಾಠಿಗಳ ವಿರುದ್ಧ ಕೇಸ್‌ ದಾಖಲು

ಕೊಯಮತ್ತೂರಿನ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ 11ನೇ ತರಗತಿಯಲ್ಲಿ ಓದುತ್ತಿದ್ದ 16 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, ಸಹಪಾಠಿಗಳಿಂದ ಜಾತಿ ಆಧಾರಿತ ಕಿರುಕುಳಕ್ಕೆ ಒಳಗಾದ ನಂತರ, ಅಕ್ಟೋಬರ್ 21, ಬುಧವಾರದಂದು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ತಮಿಳುನಾಡು ಮುಖ್ಯ ಚುನಾವಣಾಧಿಕಾರಿಯ ಸರ್ವಪಕ್ಷ ಸಭೆಯಿಂದ ಹೊರನಡೆದ ಟಿವಿಕೆ, ಡಿಎಂಕೆ ಸೇರಿದಂತೆ ಒಂಬತ್ತು ಪಕ್ಷಗಳು : ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಪ್ರಮುಖ ವಿರೋಧ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೇರಿದಂತೆ ಒಂಬತ್ತು ರಾಜಕೀಯ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಉತ್ತರ ಪ್ರದೇಶ: ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೀಕ್ಷಿಸುತ್ತಿದ್ದ ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; ಆರು ಜನರ ವಿರುದ್ಧ ಪ್ರಕರಣ

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆಯನ್ನು ವೀಕ್ಷಿಸುತ್ತಿದ್ದ ದಲಿತ ಸಮುದಾಯದ ಪುರುಷರ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ನಾಲ್ವರು...

‘ಮತ್ತೊಂದು ಗಾಲ್ವಾನ್ ಸಂಭವಿಸುತ್ತಿದೆಯೇ?’: ಅರುಣಾಚಲದಲ್ಲಿ ಚೀನಾ ಸೇನೆ ಜೊತೆಗಿನ ಮುಖಾಮುಖಿ ವರದಿ ಬೆನ್ನಲ್ಲೇ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಮುಖಾಮುಖಿ ಮುಂದುವರಿದಿರುವ ವರದಿಗಳ ಕುರಿತು ಕೇಂದ್ರ ಸರ್ಕಾರ ಮೌನ ವಹಿಸಿದೆ ಎಂದು ಶುಕ್ರವಾರ (ಅ.23) ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಗಡಿ ಭದ್ರತೆ ಮತ್ತು...

ಎಸ್‌ಐಆರ್ ವಿರುದ್ಧ ಒಂದಾದ ದಲಿತ, ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು: ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರಾಷ್ಟ್ರಧ್ವಜದೊಂದಿಗೆ ಜಾಥಾ

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ; ಬೆಂಗಳೂರಿನಲ್ಲಿ ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಗ್ಗಟ್ಟಿನ ಹೋರಾಟ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು, ಮುಖ್ಯ ಚುನಾವಣಾ...