Homeಮುಖಪುಟದೆಹಲಿ: ಹೋಳಿ ಹಬ್ಬದಂದು ಜಪಾನಿ ಮಹಿಳೆಗೆ ಕಿರುಕುಳ; ಮೂವರ ಬಂಧನ

ದೆಹಲಿ: ಹೋಳಿ ಹಬ್ಬದಂದು ಜಪಾನಿ ಮಹಿಳೆಗೆ ಕಿರುಕುಳ; ಮೂವರ ಬಂಧನ

- Advertisement -
- Advertisement -

ಹೊಸದಿಲ್ಲಿಯಲ್ಲಿ ಹೋಳಿ ಹಬ್ಬದಂದು ಜಪಾನಿ ಮಹಿಳೆಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಒಬ್ಬರ ಬಾಲಾಪರಾಧಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪುರುಷರ ಗುಂಪೊಂದು ಜಪಾನಿ ಮಹಿಳೆಯ ಮೇಲೆ ಬಣ್ಣ ಬಳಿಯುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್‌ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಒಬ್ಬ ವ್ಯಕ್ತಿ ಮಹಿಳೆಯ ತಲೆಯ ಮೇಲೆ ಮೊಟ್ಟೆಯನ್ನು ಒಡೆದಿದ್ದಾನೆ.

“ಮಾರ್ಚ್ 8 ರಂದು ರಾಷ್ಟ್ರ ರಾಜಧಾನಿಯ ಪಹರ್‌ಗಂಜ್ ಪ್ರದೇಶದಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ. ಜಪಾನಿ ಪ್ರವಾಸಿಯು ಭಾರತದಿಂದ ಬಾಂಗ್ಲಾದೇಶಕ್ಕೆ ತೆರಳಿದ್ದು, ಅವರಿಂದ ಯಾವುದೇ ದೂರು ಬಂದಿಲ್ಲ ಎಂದು” ಪೊಲೀಸರು ಮಾಹಿತಿ ನೀಡಿದ್ದಾರೆ.

ಆದಾಗ್ಯೂ, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ದೆಹಲಿ ಮಹಿಳಾ ಆಯೋಗವು ಘಟನೆಯ ಬಗ್ಗೆ ಗಮನಹರಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸುವಂತೆ ಪೊಲೀಸರಿಗೆ ಪತ್ರ ಬರೆದಿದೆ.

ಪೊಲೀಸ್ ಉಪ ಕಮಿಷನರ್ (ಕೇಂದ್ರ) ಸಂಜಯ್ ಕುಮಾರ್ ಸೈನ್ ಅವರನ್ನು ಈ ವಿಷಯದಲ್ಲಿ ವಿಚಾರಣೆಗೊಳಪಡಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

“ವೀಡಿಯೊದಲ್ಲಿ ದಾಖಲಾಗಿರುವಂತೆ ತಮ್ಮ ತಪ್ಪನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ” ಎಂದು ಸೈನ್ ಹೇಳಿದ್ದು, “ಅವರೆಲ್ಲರೂ ಪಹರ್‌ಗಂಜ್‌ನ ಹತ್ತಿರದಲ್ಲಿನ ಪ್ರದೇಶದ ನಿವಾಸಿಗಳಾಗಿದ್ದಾರೆ” ಎಂದಿದ್ದಾರೆ.

“ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

0
ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಶೇ 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು ಎಂದು ವರದಿಗಳು ಹೇಳಿವೆ. ಬಿಜೆಪಿ ಕಣಕ್ಕಿಳಿಸಿರುವ 435 ಅಭ್ಯರ್ಥಿಗಳ ಪೈಕಿ 106 ಮಂದಿ...