Homeಮುಖಪುಟಅಲೋಪತಿ, ಕೊರೋನಿಲ್ ಕುರಿತ ಹೇಳಿಕೆ ತೆಗೆಯಿರಿ: ರಾಮ್‌ದೇವ್‌, ಬಾಲಕೃಷ್ಣಗೆ ಹೈಕೋರ್ಟ್ ಸೂಚನೆ

ಅಲೋಪತಿ, ಕೊರೋನಿಲ್ ಕುರಿತ ಹೇಳಿಕೆ ತೆಗೆಯಿರಿ: ರಾಮ್‌ದೇವ್‌, ಬಾಲಕೃಷ್ಣಗೆ ಹೈಕೋರ್ಟ್ ಸೂಚನೆ

- Advertisement -
- Advertisement -

“ಕೋವಿಡ್-19ನಲ್ಲಿ ಲಕ್ಷಾಂತರ ಜನರ ಸಾವಿಗೆ ಅಲೋಪತಿ ಕಾರಣ ಮತ್ತು ಪತಂಜಲಿಯ ‘ಕೊರೋನಿಲ್’ ಕೋವಿಡ್‌ಗೆ ಚಿಕಿತ್ಸೆಯ ಔಷಧಿಯಾಗಿದೆ ” ಎಂಬ ಹೇಳಿಕೆಗಳನ್ನು ತೆಗೆದು ಹಾಕುವಂತೆ ದೆಹಲಿ ಹೈಕೋರ್ಟ್ ಸೋಮವಾರ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣಗೆ ಸೂಚಿಸಿದೆ.

ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಅವರು, 2021ರಲ್ಲಿ ವಿವಿಧ ವೈದ್ಯರ ಸಂಘಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದ್ದಾರೆ.

ಮೂರು ದಿನಗಳೊಳಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು, ಇಂಟರ್ನೆಟ್ ಮತ್ತು ಎಲ್ಲಾ ವೆಬ್‌ಸೈಟ್‌ಗಳಿಂದ ಆಕ್ಷೇಪಾರ್ಹ ವಿಷಯವನ್ನು ತೆಗೆದು ಹಾಕುವಂತೆ ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ಸೂಚಿಸಿದೆ. ಮೂರು ದಿನಗಳಲ್ಲಿ ಹೇಳಿಕೆಗಳನ್ನು ತೆಗೆದು ಹಾಕಲು ವಿಫಲವಾದರೆ, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಅದನ್ನು ತೆಗೆದುಹಾಕುತ್ತಾರೆ ಎಂದು ಪೀಠ ಹೇಳಿದೆ.

ಬಾಬಾ ರಾಮ್‌ದೇವ್ ಅವರು ತಪ್ಪು ಮಾಹಿತಿಯನ್ನು ಹರಡುವ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ. ಕೋವಿಡ್-19 ಸಾವುಗಳಿಗೆ ಅಲೋಪತಿ ಕಾರಣ ಎಂದು ಹೇಳುವ ಮೂಲಕ ಜನರು ಆಸ್ಪತ್ರೆಗೆ ದಾಖಲಾಗದಂತೆ ಪ್ರೇರೇಪಿಸಿದ್ದಾರೆ ಎಂದು ವೈದ್ಯರ ಸಂಘಗಳು ಆರೋಪಿಸಿತ್ತು.

“ಪತಂಜಲಿಯ ಕೊರೊನಿಲ್ ಅನ್ನು ಕೋವಿಡ್ -19ಗೆ ಮದ್ದು ಎಂದು ಪ್ರಚಾರ ಮಾಡುವಲ್ಲಿ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ನಡವಳಿಕೆಯು ಅತ್ಯಂತ ಅದ್ಭುತವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಕೊರೊನಿಲ್ ಅನ್ನು ಚಿಕಿತ್ಸೆಯಾಗಿ ಬ್ರ್ಯಾಂಡ್ ಮಾಡುವುದು ಮಿಸ್‌ಬ್ರಾಂಡಿಂಗ್‌ಗೆ ಕಾರಣವಾಗಬಹುದು ಮತ್ತು ಕಾನೂನುಬದ್ಧವಾಗಿ ಅನುಮತಿಸಲಾಗುವುದಿಲ್ಲ ಎಂದಿರುವ ಪೀಠ, ಈ ನ್ಯಾಯಾಲಯವು ಯಾವುದೇ ಹೆಚ್ಚಿನ ಅವಲೋಕನಗಳನ್ನು ಮಾಡದೆ, ಈ ಅಂಶವನ್ನು ಪರಿಶೀಲಿಸಲು ಸಮರ್ಥ ಅಧಿಕಾರಿಗಳಿಗೆ ಬಿಡುತ್ತದೆ ಎಂದಿದೆ.

“ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ಕೊರೋನಿಲ್ ಅನ್ನು ಪ್ರಚಾರ ಮಾಡಲು ಮತ್ತು ಜಾಹೀರಾತು ನೀಡಲು ಅನುಮತಿ ನೀಡಿದರೆ, ಸಾರ್ವಜನಿಕರು ತಮ್ಮ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡಿಕೊಳ್ಳಬಹುದು ಮಾತ್ರವಲ್ಲದೆ ಆಯುರ್ವೇದದ ಪುರಾತನ ಮತ್ತು ಪೂಜನೀಯ ವ್ಯವಸ್ಥೆಯೇ ಅಪಖ್ಯಾತಿಗೆ ಒಳಗಾಗಬಹುದು” ಎಂದು ನ್ಯಾಯಮೂರ್ತಿ ಭಂಭಾನಿ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಿಲ್ ಮಾತ್ರೆಗಳನ್ನುರೋಗನಿರೋಧಕ ಶಕ್ತಿ ವರ್ಧಕವಾಗಿ ಬಳಸಲು ಪರವಾನಗಿ ನೀಡಲಾಗಿದೆ. ಅದು ಕೋವಿಡ್-19 ನಿರ್ವಹಣೆಯಲ್ಲಿ ಪೋಷಕ ಕ್ರಮವಾಗಿ ಸಹಾಯ ಮಾಡುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : ಹಲ್ವಾ ಸಮಾರಂಭ ಉಲ್ಲೇಖಿಸಿ ಸರ್ಕಾರದ ವಿರುದ್ದ ರಾಹುಲ್ ವಾಗ್ದಾಳಿ : ಮುಖ ಮುಚ್ಚಿಕೊಂಡ ವಿತ್ತ ಸಚಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...