Homeಮುಖಪುಟಸರ್ಕಾರಿ ಮನೆ ತೆರವು ನೋಟಿಸ್ ಪ್ರಶ್ನಿಸಿದ್ದ ಮಹುವಾ ಮೊಯಿತ್ರಾ ಅರ್ಜಿ ವಜಾ

ಸರ್ಕಾರಿ ಮನೆ ತೆರವು ನೋಟಿಸ್ ಪ್ರಶ್ನಿಸಿದ್ದ ಮಹುವಾ ಮೊಯಿತ್ರಾ ಅರ್ಜಿ ವಜಾ

- Advertisement -
- Advertisement -

ಲೋಕಸಭೆಯಿಂದ ಉಚ್ಚಾಟನೆಗೊಂಡ ಬಳಿಕ ಸರ್ಕಾರದಿಂದ ಮಂಜೂರಾಗಿದ್ದ ಮನೆ ಖಾಲಿ ಮಾಡುವಂತೆ ನೀಡಿದ್ದ ನೋಟಿಸ್ ವಿರುದ್ಧ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ)ದ ನಾಯಕಿ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದ್ದು, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಮನವಿ ಸಲ್ಲಿಸುವಂತೆ ಎಂದು ಹೇಳಿದೆ.

ಜನವರಿ 7ರೊಳಗೆ ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಸೂಚಿಸಿರುವ ನೋಟಿಸ್ ರದ್ದುಗೊಳಿಸುವಂತೆ ಕೋರಿ ಮಹುವಾ ಮೊಯತ್ರಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಜಾಗೊಳಿಸಿದ ನ್ಯಾಯಾಲಯ, ಈ ಸಂಬಂಧ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಮನವಿ ಸಲ್ಲಿಸುವಂತೆ ಸೂಚಿಸಿದೆ. ಕಾನೂನಿನ ಪ್ರಕಾರ ಮಾತ್ರ ಮಹುವಾ ಅವರಿಂದ ಮನೆ ಖಾಲಿ ಮಾಡಿಸಲು ಕ್ರಮ ತೆಗೆದುಕೊಳ್ಳುವಂತೆ ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಎಸ್ಟೇಟ್ ಡೈರೆಕ್ಟೊರೇಟ್ ಅಧೀನದಲ್ಲಿ ಮಹುವಾ ಅವರ ಸರ್ಕಾರಿ ನಿವಾಸ ಬರುತ್ತದೆ. ಇದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದ ಒಂದು ಇಲಾಖೆಯಾಗಿದೆ.

ಸ್ವಲ್ಲ ದಿನಗಳು ಹೆಚ್ಚುವರಿಯಾಗಿ ಇರಲು ಸರ್ಕಾರಿ ನಿವಾಸದ ನಿಯಮಗಳು ಅನುಮತಿಸುತ್ತದೆ ಎಂದು ಮಹುವಾ ಪರ ನ್ಯಾಯಧೀಶ ಸುಬ್ರಹ್ಮಣ್ಯನ್ ಪ್ರಸಾದ್ ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಎಸ್ಟೇಟ್ ಡೈರೆಕ್ಟೊರೇಟ್ ಬಳಿ ಹೋಗಿ, ಅವರು ನಿಯಮ ಪ್ರಕಾರ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದೆ.

ಮಹುವಾ ಮೊಯಿತ್ರಾ ಅವರು, ಡಿಸೆಂಬರ್ 11 ರಂದು ಎಸ್ಟೇಟ್ ಡೈರೆಕ್ಟೊರೇಟ್ ಮನೆ ಖಾಲಿ ಮಾಡುವಂತೆ ಸೂಚಿಸಿ ನೀಡಿರುವ ಆದೇಶವನ್ನು ರದ್ದುಗೊಳಿಸುವಂತೆ ನ್ಯಾಯಾಲಯವನ್ನು ಕೋರಿದ್ದರು. 2024ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುವವರೆಗೆ ಮನೆಯಲ್ಲಿ ಇರಲು ಅವಕಾಶ ನೀಡಲು ಸೂಚಿಸುವಂತೆ ಮನವಿ ಮಾಡಿದ್ದರು.

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಲೋಕಸಭೆಯಿಂದ ಉಚ್ಚಾಟನೆಗೊಂಡ ಬಳಿಕ, ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹುವಾ ಮೊಯಿತ್ರಾ ಅವರಿಗೆ ಎಸ್ಟೇಟ್ ಡೈರೆಕ್ಟೊರೇಟ್ ಸೂಚಿಸಿತ್ತು.

ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಿರುವುದರ ವಿರುದ್ದ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಮೊಯಿತ್ರಾ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಬುಧವಾರ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದ್ದು, ಮೂರು ವಾರಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...