Homeಮುಖಪುಟಕೇಜ್ರಿವಾಲ್‌ಗೆ "ಮಧ್ಯಂತರ ಜಾಮೀನು" ಕೋರಿ ಸಲ್ಲಿಸಿದ ಪಿಐಎಲ್‌ ವಜಾ: ಅರ್ಜಿದಾರನಿಗೆ 75,000ರೂ.ದಂಡ ವಿಧಿಸಿದ ಹೈಕೋರ್ಟ್‌

ಕೇಜ್ರಿವಾಲ್‌ಗೆ “ಮಧ್ಯಂತರ ಜಾಮೀನು” ಕೋರಿ ಸಲ್ಲಿಸಿದ ಪಿಐಎಲ್‌ ವಜಾ: ಅರ್ಜಿದಾರನಿಗೆ 75,000ರೂ.ದಂಡ ವಿಧಿಸಿದ ಹೈಕೋರ್ಟ್‌

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುವವರೆಗೆ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳಲ್ಲಿ “ಮಧ್ಯಂತರ ಜಾಮೀನು” ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಅರ್ಜಿದಾರನಿಗೆ 75,000ರೂ. ದಂಡವನ್ನು ವಿಧಿಸಿದೆ.

ನ್ಯಾಯಾಲಯದ ಆದೇಶದ ಮೇರೆಗೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ನ್ಯಾಯಾಲಯವು ಹೇಳಿದ್ದು, ಅರ್ಜಿದಾರರಿಗೆ 75,000ರೂ.ದಂಡವನ್ನು ವಿಧಿಸಿದೆ.

‘ವೀ ದಿ ಪೀಪಲ್ ಆಫ್ ಇಂಡಿಯಾ’ ಎಂಬ ಹೆಸರಿನಲ್ಲಿ ನಾಲ್ಕನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯನ್ನು ಸಮರ್ಥನೀಯವಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಮತ್ತು ನ್ಯಾಯಾಲಯವು ತನ್ನ ರಿಟ್ ವ್ಯಾಪ್ತಿಯಲ್ಲಿರುವ ಪ್ರಕರಣಗಳಲ್ಲಿ ಉನ್ನತ ಹುದ್ದೆಯನ್ನು ಹೊಂದಿರುವ ವ್ಯಕ್ತಿಯೆಂದು ಆರೋಪಿಗೆ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ  ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ದೆಹಲಿಯ ಮಧ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್‌ ಕಿಂಗ್‌ಪಿನ್‌ ಎಂದು ಅಧಿಕಾರಿಗಳು ನ್ಯಾಯಾಲಯಕ್ಕೆ ಹೇಳಿದ್ದು, 2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಇಡಿ ಆರೋಪಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಬಂಧನವಾಗುತ್ತಿದ್ದಂತೆ ಈ ಹಿಂದೆ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್‌ ಅವರನ್ನು ಸಿಎಂ ಹದ್ದೆಯಿಂದ ವಜಾಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಕೇಜ್ರಿವಾಲ್‌ ಅವರನ್ನು ಸಿಎಂ ಹುದ್ದೆಯಿಂದ ವಜಾಕ್ಕೆ ನಿರಾಕರಿಸಿತ್ತು. ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದೆ. ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಮತ್ತು ರಾಜ್ಯದ ಇತರ ಅಂಗಗಳು ಈ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಕೋರ್ಟ್‌ ಹೇಳಿತ್ತು ಮತ್ತು ಈ ಕುರಿತ ಮೂರನೇ ಅರ್ಜಿದಾರರಿಗೆ ದಂಡ ವಿಧಿಸುವ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.

ಇದನ್ನು ಓದಿ: ದ್ವೇಷ ಭಾಷಣಕ್ಕಾಗಿ ನಿಷೇಧಕ್ಕೊಳಗಾಗಿದ್ದ ಬಾಳ್ ಠಾಕ್ರೆ: ಮೋದಿ ಬಗ್ಗೆ ಚುನಾವಣಾ ಆಯೋಗದ ನಿಲುವೇನು? ಕಾನೂನು ಏನು ಹೇಳುತ್ತೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...