Homeಮುಖಪುಟ'ಜೇಬುಗಳ್ಳ' ಹೇಳಿಕೆ: ರಾಹುಲ್ ವಿರುದ್ಧ ಕ್ರಮಕ್ಕೆ 8 ವಾರಗಳ ಗಡುವು

‘ಜೇಬುಗಳ್ಳ’ ಹೇಳಿಕೆ: ರಾಹುಲ್ ವಿರುದ್ಧ ಕ್ರಮಕ್ಕೆ 8 ವಾರಗಳ ಗಡುವು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉದ್ಯಮಿ ಗೌತಮ್ ಅದಾನಿ ಅವರನ್ನು ‘ಜೇಬುಗಳ್ಳರು’ ಎಂದು ಕರೆದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಂಟು ವಾರಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಸೂಚಿಸಿದೆ.

ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ರಾಜಕೀಯ ನಾಯಕರು ಇಂತಹ ಹೇಳಿಕೆ ನೀಡುವುದನ್ನು ತಡೆಗಟ್ಟಲು ಮಾರ್ಗಸೂಚಿ ರೂಪಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಭರತ್ ನಗರ್ ಎಂಬ ವಕೀಲರು ಹೈಕೋರ್ಟ್‌ ಮೊರೆ ಹೋಗಿದ್ದರು. ಪ್ರಧಾನಿ ಮೋದಿ ಅವರನ್ನು ಪನೌತಿ (ಅಪಶಕುನ) ಎಂದು ರಾಹುಲ್‌ ಗಾಂಧಿ ಜರೆದಿರುವುದೂ ಸೇರಿದಂತೆ ಅವರ ವಿವಿಧ ಸಾರ್ವಜನಿಕ ಹೇಳಿಕೆಗಳ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದರು.

ರಾಹುಲ್ ಅವರ ಹೇಳಿಕೆ ‘ಉತ್ತಮ ಅಭಿರುಚಿಯಿಂದ ಕೂಡಿಲ್ಲ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠ ಅರ್ಜಿ ವಿಚಾರಣೆ ವೇಳೆ ಹೇಳಿದೆ. ಇಂತಹ ಪ್ರಕರಣಗಳಲ್ಲಿ ನೊಂದವರು ಮಾನನಷ್ಟ ಮೊಕದ್ದಮೆ ಹೂಡಬಹುದು ಎಂದು ತಿಳಿಸಿದೆ.

ರಾಹುಲ್ ಗಾಂಧಿಗೆ ಈಗಾಗಲೇ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಆದರೆ, ಅವರು ಆಯೋಗ ನೀಡಿದ ಗಡುವಿನ ಒಳಗೆ ಸರಿಯಾದ ಉತ್ತರ ಕೊಟ್ಟಿಲ್ಲ ಎಂದು ತಿಳಿದು ಬಂದಿದೆ.

ಈ ವಿಚಾರವನ್ನು ಪರಿಗಣಿಸಿ ಪೀಠದಲ್ಲಿದ್ದ ನ್ಯಾಯಮೂರ್ತಿ ಮಿನಿ ಪುಷ್ಕರ್ಣಿ, ರಾಹುಲ್ ವಿರುದ್ದ ತ್ವರಿತವಾಗಿ (8 ವಾರಗಳಲ್ಲಿ) ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.

ಕಳೆದ ನವೆಂಬರ್ 22ರಂದು ರಾಜಸ್ಥಾನದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ಮತ್ತು ಇತರರ ವಿರುದ್ದ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ನವೆಂಬರ್ 23ರಂದು ಈ ಸಂಬಂಧ ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿತ್ತು.

ಇದನ್ನೂ ಓದಿ : ರಾಹುಲ್‌ ವಿಚಾರಣೆ ವಿರೋಧಿಸಿ ಪ್ರತಿಭಟನೆ: ಯು.ಟಿ ಖಾದರ್‌ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...