Homeಮುಖಪುಟಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ.

ಸೆಂಗಾರ್‌ಗೆ ವಿಧಿಸಲಾಗಿರುವ 10 ವರ್ಷಗಳ ಶಿಕ್ಷೆಯನ್ನು ಅಮಾನತಿನಲ್ಲಿಡಲು ನ್ಯಾಯಮೂರ್ತಿ ರವೀಂದರ್ ದುಡೇಜಾ ನಿರಾಕರಿಸಿದ್ದಾರೆ.

ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಯಾವುದೇ ಕಾರಣಗಳಿಲ್ಲ ಎಂದಿರುವ ನ್ಯಾಯಮೂರ್ತಿ, ಸೆಂಗಾರ್ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಸೆಂಗಾರ್ ದೀರ್ಘ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರೂ, ವಿಳಂಬದ ಆಧಾರದ ಮೇಲೆ ಪರಿಹಾರ ನೀಡಲು ಸಾಧ್ಯವಿಲ್ಲ. ಏಕೆಂದರೆ, ವಿಚಾರಣಾ ನ್ಯಾಯಾಲಯ ಶಿಕ್ಷೆ ವಿಧಿಸಿ ನೀಡಿರುವ ಆದೇಶದ ವಿರುದ್ದ ಸಲ್ಲಿಸಿರುವ ಮೇಲ್ಮನವಿಯ ತೀರ್ಪು ವಿಳಂಬವಾಗಲು ಅವರೇ ಕಾರಣ. ಅವರು ಹಲವು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಹಾಗಾಗಿ, ವಿಳಂಬವಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಜೂನ್ 2024ರಲ್ಲಿ, ದೆಹಲಿ ಹೈಕೋರ್ಟ್ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸೆಂಗಾರ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಈಗ ವಜಾಗೊಂಡಿರುವುದು ಎರಡನೇ ಅರ್ಜಿಯಾಗಿದೆ.

“ಮೇಲ್ಮನವಿಯನ್ನು ತ್ವರಿತವಾಗಿ ವಿಚಾರಣೆಗೆ ಒಳಪಡಿಸಿದರೆ ಉದ್ದೇಶ ಈಡೇರುತ್ತದೆ” ಎಂದಿರುವ ನ್ಯಾಯಾಧೀಶರು, ಫೆಬ್ರವರಿ 3ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ.

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯವು ಮಾರ್ಚ್ 13, 2020 ರಂದು 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಒಂದು ಕುಟುಂಬದ ‘ಏಕೈಕ ಆಧಾರಸ್ತಂಭ’ವನ್ನು ಕೊಂದಿದ್ದಕ್ಕೆ ಯಾವುದೇ ದಯೆ ತೋರಿಸಲು ಸಾಧ್ಯವಿಲ್ಲ ಎಂದು ಶಿಕ್ಷೆ ವಿಧಿಸುವಾಗ ವಿಚಾರಣಾ ನ್ಯಾಯಾಲಯ ಹೇಳಿತ್ತು.

ಪ್ರಕರಣದಲ್ಲಿ ಸೆಂಗಾರ್‌ ಜೊತೆಗೆ ಆತನ ಸಹೋದರ ಅತುಲ್ ಸಿಂಗ್ ಸೆಂಗಾರ್ ಮತ್ತು ಇತರ ಐವರಿಗೆ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಸೆಂಗಾರ್‌ನ ಆಜ್ಞೆಯ ಮೇರೆಗೆ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಉನ್ನಾವೋ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿತ್ತು. ಪೊಲೀಸರ ದೌರ್ಜನ್ಯದಿಂದಾಗಿ ಏಪ್ರಿಲ್ 9, 2018ರಂದು ಅವರು ಕಸ್ಟಡಿಯಲ್ಲಿ ನಿಧನರಾಗಿದರು. ಇದಕ್ಕೂ ಮುನ್ನ 2027ರಲ್ಲಿ ಬಿಜೆಪಿ ಶಾಸಕನಾಗಿದ್ದ ಸೆಂಗಾರ್‌ ಕೆಲಸ ಕೇಳಿಕೊಂಡು ಬಂದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ.

ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು 2025ರ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್‌ ಅಮಾನತಿನಲ್ಲಿಟ್ಟಿತ್ತು. ಆತನಿಗೆ ಜಾಮೀನು ಮಂಜೂರು ಮಾಡಿತ್ತು. ಇದರ ವಿರುದ್ದ ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಪ್ರತಿಭಟಿಸಿದ್ದರು. ದೇಶದಾದ್ಯಂತ ನ್ಯಾಯಾಲಯ ಆದೇಶದ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...