Homeಮುಖಪುಟಗಣರಾಜ್ಯ ಗಲಾಟೆ: ‘ಬಂಧಿಸಲ್ಪಟ್ಟ’ ಪ್ರತಿಭಟನಾಕಾರರ ಬಿಡುಗಡೆಗೆ ಹೈಕೋರ್ಟ್ ನಕಾರ

ಗಣರಾಜ್ಯ ಗಲಾಟೆ: ‘ಬಂಧಿಸಲ್ಪಟ್ಟ’ ಪ್ರತಿಭಟನಾಕಾರರ ಬಿಡುಗಡೆಗೆ ಹೈಕೋರ್ಟ್ ನಕಾರ

ಪ್ರತಿಭಟನಾಕಾರರ ವಿರುದ್ಧ ದಾಖಲಾದ ಎಫ್‌ಐಆರ್‌ಗಳ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿತು.

- Advertisement -
- Advertisement -

ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು  “ಬಂಧಿಸಲ್ಪಟ್ಟ” ಪ್ರತಿಭಟನಾಕಾರರನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಎಫ್‌ಐಆರ್ ಮತ್ತು ತನಿಖೆಯ ಅರ್ಹತೆ ಪರಿಶೀಲಿಸದೇ ಬಂಧಿತರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

ಪ್ರತಿಭಟನಾಕಾರರ ವಿರುದ್ಧ ದಾಖಲಾದ ಎಫ್‌ಐಆರ್‌ಗಳ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿತು.

ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ವಿಭಾಗೀಯ ಪೀಠ, “ಎಫ್‌ಐಆರ್ ಮತ್ತು ತನಿಖೆಯ ಅರ್ಹತೆಗಳನ್ನು ನಮೂದಿಸದೆ ಬಂಧಿತರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಇದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಎಂದು ತೋರುತ್ತದೆ” ಎಂದು ಅರ್ಜಿಯನ್ನು ವಜಾಗೊಳಿಸುವ ಮುನ್ನ ಹೇಳಿದರು.

ಬಂಧಿಸಲ್ಪಟ್ಟ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಾನೂನಿಗೆ ಅನುಸಾರವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನ್ಯಾಯಾಲಯ ಹೇಳಿದೆ. 24 ಗಂಟೆಗಳ ಒಳಗೆ ಬಂಧಿತ ವ್ಯಕ್ತಿಗಳನ್ನು ಹತ್ತಿರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

ಇದಕ್ಕೂ ಮೊದಲು, ಅರ್ಜಿದಾರ ಹರ್ಮನ್ ಪ್ರೀತ್ ಸಿಂಗ್ ಅವರನ್ನು ಪ್ರತಿನಿಧಿಸಿದ ವಕೀಲ ಅಶಿಮಾ ಮಾಂಡ್ಲಾ, ದೆಹಲಿ ಪೊಲೀಸರು ಸೋಮವಾರ ನೀಡಿದ ಹೇಳಿಕೆಯ ಪ್ರಕಾರ, 122 ಜನರನ್ನು ಬಂಧಿಸಲಾಗಿದೆ ಮತ್ತು 44 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಅರ್ಜಿಯಲ್ಲಿ ಸಿಂಗ್, “ತುರ್ತು ಪರಿಸ್ಥಿತಿಗಳಲ್ಲಿಯೂ ಸ್ವಾತಂತ್ರ‍್ಯದ ಕಲ್ಪನೆಯನ್ನು ನಿರಾಕರಿಸಲು ಸಾಧ್ಯವಿಲ್ಲ” ಮತ್ತು ರೈತರ ಟ್ರಾಕ್ಟರ್ ರ‍್ಯಾಲಿ ಸಮಯದಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 200 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಆದರೆ, ಇದು ಅರ್ಜಿದಾರರಿಗೆ ಸಂಬಂಧಿಸಿದ ವಿಷಯವಲ್ಲ ಮತ್ತು ಪ್ರಕರಣದಲ್ಲಿ ನೋಟಿಸ್ ಕೂಡ ನೀಡುವುದಿಲ್ಲ ಎಂದು ನ್ಯಾಯಾಲಯ ಹೇಳಿತು. ಜನವರಿ 26 ರ ನಂತರ ಕಾಣೆಯಾದವರು ಎಂದು ಹೇಳಲಾದ ವ್ಯಕ್ತಿಗಳ ಬಗ್ಗೆ, ಅರ್ಜಿದಾರರು ಅವರ ಯಾವುದೇ ಸಂಬಂಧಿಕರನ್ನು ಸಂಪರ್ಕಿಸಿಲ್ಲ. ಅವರು “ತಮ್ಮ ವೈಯಕ್ತಿಕ ಕೆಲಸಕ್ಕಾಗಿ” ಹೊರಗೆ ಹೋಗಿರಬಹುದು. ರಿಟ್ ಅರ್ಜಿಯನ್ನು ಪುರಸ್ಕರಿಸಲು ನಮಗೆ ಯಾವುದೇ ಕಾರಣ ಕಾಣುತ್ತಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಗಣರಾಜ್ಯೋತ್ಸವದಂದು ಕಿಸಾನ್ ಟ್ರ‍್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 70 ಮತ್ತು 80ರ ವಯಸ್ಸಿನ ವ್ಯಕ್ತಿಗಳು ಸೇರಿದಂತೆ 122 ಜನರನ್ನು ಬಂಧಿಸಿದ್ದಾರೆ. ಇನ್ನೂ ಆರು ಹೊಸ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಸೋಮವಾರ, ದೆಹಲಿ ಪೊಲೀಸ್ ವಕ್ತಾರ ಡಾ.ಈಶ್ ಸಿಂಘಾಲ್, ‘ಈವರೆಗೆ 44 ಎಫ್‌ಐಆರ್ ದಾಖಲಿಸಲಾಗಿದೆ ಮತ್ತು 122 ಜನರನ್ನು ಬಂಧಿಸಲಾಗಿದೆ. 54 ರೈತ ಮುಖಂಡರು ಮತ್ತು 200 ಟ್ರಾಕ್ಟರುಗಳ ಮಾಲೀಕರಿಗೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಟ್ರ‍್ಯಾಕ್ಟರ್ ಮಾಲೀಕರಿಗೆ ವಿಚಾರಣೆಗೆ ಬರಲು ಸಮನ್ಸ್ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

“ಸಂಬಂಧಪಟ್ಟ ಪ್ರಕರಣಗಳ ಮಾಹಿತಿಯನ್ನು ಅಧಿಕೃತ ದೆಹಲಿ ಪೊಲೀಸ್ ವೆಬ್‌ಸೈಟ್‌ನಲ್ಲಿ ನವೀಕರಿಸಲಾಗಿದೆ, ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ… ಬಂಧಿತರಾದವರ ರಕ್ತಸಂಬಂಧಿಗಳು ಕೂಡ ಪೊಲೀಸ್ ಠಾಣೆಗಳಿಂದ ಮಾಹಿತಿ ಪಡೆಯಬಹುದು. ವದಂತಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಿಗೆ ಮನವಿ ಮಾಡುತ್ತೇವೆ. ದೆಹಲಿ ಪೊಲೀಸರು ನಡೆಸಿದ ತನಿಖೆ ಪಾರದರ್ಶಕ ಮತ್ತು ನ್ಯಾಯಯುತವಾಗಿದೆ” ಎಂದು ಸಿಂಘಾಲ್ ಹೇಳಿದ್ದಾರೆ.


ಇದನ್ನೂ ಓದಿ; ರಾಕೇಶ್ ಟಿಕಾಯತ್ ಭೇಟಿಯಾಗಿ ಬೆಂಬಲ ಘೋಷಿಸಿದ ಶಿವಸೇನೆಯ ಸಂಜಯ್ ರಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...