Homeಮುಖಪುಟ'ಶರಬತ್ ಜಿಹಾದ್' ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

‘ಶರಬತ್ ಜಿಹಾದ್’ ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

ಹಮ್ದರ್ದ್‌ನ ರೂಹ್‌ ಅಫ್ಝಾಗೆ ಕೋಮು ಬಣ್ಣ ಬೆರೆಸಿದ ಪ್ರಕರಣ

- Advertisement -
- Advertisement -

ಔಷಧ ಮತ್ತು ಆಹಾರ ಕಂಪನಿ ಹಮ್ದರ್ದ್‌ ಮತ್ತು ಅದರ ಜನಪ್ರಿಯ ಪಾನೀಯ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು ಕೋಮು ನಿಂದನೆಯ ಹೇಳಿಕೆ ನೀಡಿದ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ ಅವರನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತರಾಟೆಗೆ ತೆಗೆದುಕೊಂಡಿದೆ.

ಪತಂಜಲಿ ಸಂಸ್ಥೆ ಮತ್ತು ರಾಮ್‌ದೇವ್ ವಿರುದ್ಧ ಹಮ್ದರ್ದ್ ದಾಖಲಿಸಿದ್ದ ಮೊಕದ್ದಮೆಯ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರು, ‘ಕಠಿಣ ಆದೇಶದ’ ಎಚ್ಚರಿಕೆ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

“ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟುಮಾಡುತ್ತದೆ. ಸಮರ್ಥನೀಯವಲ್ಲ” ಎಂದು ಹೇಳಿದ ನ್ಯಾಯಾಲಯ, ತಮ್ಮ ಕಕ್ಷಿದಾರರಿಂದ (ರಾಮ್‌ದೇವ್‌) ಸೂಚನೆಗಳನ್ನು ಪಡೆದು ಹಾಜರಾಗುವಂತೆ ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ.

ಏಪ್ರಿಲ್ 3ರಂದು ತಮ್ಮ ಕಂಪನಿಯ ಉತ್ಪನ್ನವಾದ ‘ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ವಿಡಿಯೋವೊಂದರಲ್ಲಿ, ಅವರು ಹಮ್ದರ್ದ್‌ನ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು, ಹಮ್ದರ್ದ್ ತನ್ನ ಹಣವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ದೂರಿದ್ದರು ಮತ್ತು ‘ಶರ್ಬತ್ ಜಿಹಾದ್’ ಎಂಬ ಪದವನ್ನು ಬಳಸಿ ಆರೋಪ ಮಾಡಿದ್ದರು.

ವರದಿಗಳ ಪ್ರಕಾರ, ರಾಮದೇವ್ ವಿರುದ್ಧ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಳೆದ ವಾರ ಭೋಪಾಲ್‌ನಲ್ಲಿ ಧಾರ್ಮಿಕ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದರು.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ರಾಮ್‌ದೇವ್ ತನ್ನ ಕೋಮುವಾದಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ತಮ್ಮ ವಿಡಿಯೋದಲ್ಲಿ ಯಾವುದೇ ನಿರ್ದಿಷ್ಟ ಬ್ರ್ಯಾಂಡ್ ಅನ್ನು ಹೆಸರಿಸಿಲ್ಲ ಎಂದಿದ್ದರು.

ಹಮ್ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ರಾಮದೇವ್ ಹಮ್ದರ್ದ್ ವಿರುದ್ಧ ಎಗ್ಗಿಲ್ಲದೆ ಮಾತನಾಡುತ್ತಿದ್ದಾರೆ ಮತ್ತು ಕಂಪನಿಯ ಮಾಲೀಕರ ಧರ್ಮದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಇಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ.

“ಇದು ಆಘಾತಕಾರಿ ಪ್ರಕರಣವಾಗಿದ್ದು, ಅವಹೇಳನದ ಮಿತಿಯನ್ನು ಮೀರಿದೆ. ಇದು ದ್ವೇಷ ಭಾಷಣದಂತೆಯೇ ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಕರಣವಾಗಿದೆ. ಮಾನನಷ್ಟ ಕಾನೂನಿನಿಂದ ಇದಕ್ಕೆ ರಕ್ಷಣೆ ಇರುವುದಿಲ್ಲ” ಎಂದು ರೋಹಟಗಿ ವಾದಿಸಿದ್ದಾರೆ.

“ಇಂತಹ (ರಾಮ್‌ದೇವ್ ಹೇಳಿಕೆಯ) ವಿಡಿಯೋಗಳ ಪ್ರಸಾರಕ್ಕೆ ಒಂದು ಕ್ಷಣವೂ ಅನುಮತಿಸಬಾರದು. ದೇಶದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆಗಳಿವೆ. ಹಿಮಾಲಯ ಎಂಬ ಮತ್ತೊಂದು ಕಂಪನಿ ಮುಸ್ಲಿಂ ಒಡೆತನದಲ್ಲಿದೆ ಎಂಬ ಕಾರಣಕ್ಕಾಗಿ ರಾಮದೇವ್ ಅದರ ಮೇಲೆಯೂ ದಾಳಿ ನಡೆಸಿದ್ದಾರೆ” ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಲೋಪತಿಯನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ರಾಮದೇವ್ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ನಿಂದ ಕಠಿಣ ಶಿಕ್ಷೆಯನ್ನು ಎದುರಿಸಿದ್ದರು ಎಂದು ನ್ಯಾಯಾಲದ ಗಮನಕ್ಕೆ ತಂದಿದ್ದಾರೆ.

ಹಮ್ದರ್ದ್ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಸಂದೀಪ್ ಸೇಥಿ ಮತ್ತು ವಕೀಲರಾದ ಪ್ರವೀಣ್ ಆನಂದ್, ಧ್ರುವ ಆನಂದ್, ನಿಖಿಲ್ ರೋಹಟಗಿ, ಉದಿತಾ ಪಾತ್ರೋ, ಶಿವೇಂದ್ರ ಸಿಂಗ್ ಪ್ರತಾಪ್, ಧನಂಜಯ್ ಖನ್ನಾ, ನಿಮ್ರತ್ ಸಿಂಗ್, ಸಂಪೂರ್ಣ ಸನ್ಯಾಲ್, ನವದೀಪ್ ಮತ್ತು ಮೆಹಕ್ ಖನ್ನಾ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಧರ್ಮದಿಂದಲ್ಲ, ಪ್ರತಿಭೆಯಿಂದ ಗುರುತಿಸಿ | ಮಾಜಿ ಮುಖ್ಯ ಚುನಾವಣಾ ಆಯುಕ್ತ ಖುರೈಷಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...