Homeಮುಖಪುಟಮಾಜಿ ಕೇಂದ್ರ ಸಚಿವ ದಿಲೀಪ್ ರೇ ಶಿಕ್ಷೆಗೆ ದೆಹಲಿ ಹೈಕೋರ್ಟ್‌ ತಡೆ: ಒಡಿಶಾ ಚುನಾವಣೆಯಲ್ಲಿ ಸ್ಪರ್ಧೆಗೆ...

ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಶಿಕ್ಷೆಗೆ ದೆಹಲಿ ಹೈಕೋರ್ಟ್‌ ತಡೆ: ಒಡಿಶಾ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

- Advertisement -
- Advertisement -

ಜಾರ್ಖಂಡ್‌ನ 1999ರ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ತಡೆ ಹಿಡಿದಿದೆ. ಮುಂಬರುವ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ.

ತಮ್ಮ ವಿರುದ್ಧ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು ಅಮಾನತಿನಲ್ಲಿ ಇರಿಸುವಂತೆ ಕೋರಿ ರೇ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದೆ.

ದಿಲೀಪ್ ರೇ ವಿರುದ್ಧ ಐಪಿಸಿ ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ) ಮತ್ತು 409 (ಸಾರ್ವಜನಿಕ ಸೇವಕರಿಂದ ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ರೇ ಅವರನ್ನು ದೋಷಿ ಎಂದು 2020ರ ಅಕ್ಟೋಬರ್ 6ರಂದು ನ್ಯಾಯಾಲಯ ಘೋಷಿಸಿತ್ತು. ಅದೇ ವರ್ಷ ಅಕ್ಟೋಬರ್ 27ರಂದು ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು.

ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರೇ ಅವರು 2020ರ ಅಕ್ಟೋಬರ್ 27ರಂದು ಮೇಲ್ಮನವಿ ಸಲ್ಲಸಿದ್ದರು. ಅರ್ಜಿ ಆಧಾರದ ಮೇಲೆ ಸಿಬಿಐಗೆ ನೋಟಿಸ್ ನೀಡಿದ್ದ ಕೋರ್ಟ್‌, ಮೇಲ್ಮನವಿ ವಿಚಾರಣೆ ಬಾಕಿ ಇದ್ದ ಕಾರಣ, ಅವರಿಗೆ ವಿಧಿಸಲಾಗಿದ್ದ ಶಿಕ್ಷೆಗೆ ತಡೆ ನೀಡಿತ್ತು.

ಸೋಮವಾರ (ಏ.8) ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರಿದ್ದ ಏಕಸದಸ್ಯ ಪೀಠ “ಅರ್ಜಿದಾರರ ಮೇಲ್ಮನವಿ ವಿಚಾರಣೆಯಲ್ಲಿರುವ ಕಾರಣ, ಅವರಿಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತುಗೊಳಿಸಲಾಗುತ್ತಿದೆ. ಇಲ್ಲದಿದ್ದಲ್ಲಿ, ಒಂದು ವೇಳೆ ಅವರು ದೋಷಮುಕ್ತರಾದರೆ, ಆಗ ಬದಲಿಸಲಾಗದ ಪರಿಣಾಮಕ್ಕೆ ಕಾರಣವಾಗುತ್ತದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ತಡೆ ಆದೇಶ ನೀಡಲಾಗುತ್ತಿದೆ” ಎಂದು ಹೇಳಿದೆ.

“ಈ ಆದೇಶವು ‘ಪ್ರಕರಣದ ಮುಕ್ತಾಯಕ್ಕೆ ಸಮಾನಾಗಿರುವುದಿಲ್ಲ’. ರೇ ಅವರ ರಾಜಕೀಯ ವೃತ್ತಿ ಜೀವನ ಮತ್ತು ವಯಸ್ಸು ಸೇರಿದಂತೆ ಪ್ರಕರಣದ ವಿಚಿತ್ರ ಸಂದರ್ಭಗಳನ್ನು ಗಮನಿಸಿ ಶಿಕ್ಷೆಗೆ ತಡೆ ಮಾತ್ರ ನೀಡಲಾಗಿದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“ಅರ್ಜಿದಾರರಿಗೆ (ರೇ) 71 ವರ್ಷ ವಯಸ್ಸಾಗಿದೆ. ಅವರು 2024ರ ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಹಾಗೂ ಅವರ ಕ್ಷೇತ್ರ ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಬಯಸಿದ್ದಾರೆ. ಪ್ರಥಮ ಬಾರಿಗೆ ಚುನಾವಣೆಗೆ ಸ್ಪರ್ಧಿಸುವ ಮೂಲಕ ಶಿಕ್ಷೆಗೆ ತಡೆ ತರುವ ಉದ್ದೇಶದಿಂದ ಅವರು ಹಾಗೆ ಮಾಡಿದ್ದಾರೆಂಬಂತೆ ಕಂಡುಬಂದಿಲ್ಲ. ಅವರು 35 ವರ್ಷಗಳಿಗೂ ಹೆಚ್ಚು ಕಾಲದ ರಾಜಕೀಯ ವೃತ್ತಿಜೀವನ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಅನೇಕ ಮೇಲ್ಮನವಿಗಳು ಮತ್ತು ಅಡ್ಡ-ಅಪೀಲುಗಳನ್ನು ಸಲ್ಲಿಸಲಾಗಿದೆ. ಇದೆಲ್ಲವೂ, ವಿಚಾರಣೆಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಪೀಠವು ಹೇಳಿದೆ.

ಇದನ್ನೂ ಓದಿ : ಇಡಿ ಬಂಧನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್: ಸುಪ್ರೀಂ ಮೊರೆ ಹೋಗಲು ಮುಂದಾದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...