Homeಮುಖಪುಟಖ್ಯಾತ ಪತ್ರಕರ್ತೆ ರಾಣಾ ಅಯೂಬ್‌‌ಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ಖ್ಯಾತ ಪತ್ರಕರ್ತೆ ರಾಣಾ ಅಯೂಬ್‌‌ಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

- Advertisement -
- Advertisement -

ವಿದೇಶಕ್ಕೆ ಪ್ರಯಾಣಿಸದಂತೆ ಏರ್‌‌ಪೋರ್ಟ್‌ನಲ್ಲೆ ತೆಡೆಯಲ್ಪಟ್ಟಿದ್ದ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೆ ಷರತ್ತುಗಳಿಗೆ ಒಳಪಟ್ಟು ವಿದೇಶಕ್ಕೆ ಪ್ರಯಾಣಿಸಲು ದೆಹಲಿ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ಏಪ್ರಿಲ್ 1ರ ಮಂಗಳವಾರದಂದು ರಾಣಾ ಅಯ್ಯೂಬ್ ಅವರನ್ನು ಲಂಡನ್‌ಗೆ ಹೋಗದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವ ಕಾರಣ ಅವರನ್ನು ವಿದೇಶ ಪ್ರವಾಸದಿಂದ ತಡೆಹಿಡಿಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿತ್ತು.

ಅವರು ಏಪ್ರಿಲ್ 1 ರಂದು ಲಂಡನ್‌ನ ಕೆಲವು ಉನ್ನತ ನ್ಯಾಯಾಧೀಶರು, ಸಂಪಾದಕರು ಮತ್ತು ರಾಜತಾಂತ್ರಿಕರೊಂದಿಗೆ ಕಾರ್ಯಕ್ರಮವನ್ನು ಹೊಂದಿದ್ದರಿಂದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಅದೇ ದಿನ ಅವರು ‘ದಿ ಗಾರ್ಡಿಯನ್‌’ ಪತ್ರಿಕೆಯ ಸಂಪಾದಕಿ ಕ್ಯಾಥರೀನ್ ವಿನರ್ ಅವರ ಆಹ್ವಾನದ ಮೇರೆಗೆ ಪತ್ರಿಕೆಯ ಕಚೇರಿಯಲ್ಲಿ ಮಾತನಾಡಬೇಕಿತ್ತು. ಅದರ ನಂತರ ಏಪ್ರಿಲ್ 6 ಮತ್ತು 7 ರಂದು, ಅವರು ಇಂಟರ್ನ್ಯಾಷನಲ್ ಜರ್ನಲಿಸಂ ಫೆಸ್ಟಿವಲ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಟಲಿಗೆ ತೆರಳಬೇಕಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ನಾನು ಎಲ್ಲಾ ಘಟನೆಗಳ ಬಗ್ಗೆ ಮೂರು ವಾರಗಳ ಮುಂಚಿತವಾಗಿ ಟ್ವೀಟ್ ಮಾಡಿದ್ದೆ. ನನ್ನ ವಿಮಾನ ಇಂದು (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಇತ್ತು. ವಿಮಾನ ನಿಲ್ದಾಣದಲ್ಲಿರುವ ಇಮಿಗ್ರೇಷನ್‌ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಹಾಗೂ ಹೀಗೂ ಒಂದು ಗಂಟೆಯ ನಂತರ, ಜಾರಿ ನಿರ್ದೇಶನಾಲಯವು ನನಗೆ ಏಪ್ರಿಲ್ 1 ರಂದು ಹಾಜರಾಗಲು ಸಮನ್ಸ್ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಳು ನನಗೆ ಹೇಳಿದರು. ನಾನು ಹೊರಡುವ ಒಂದು ಗಂಟೆಯ ಮೊದಲು ಅಂದರೆ ಮಧ್ನಹ್ನ 2 ಗಂಟೆಯ ಸುಮಾರಿಗೆ ನನಗೆ ಮೇಲ್‌ನಲ್ಲಿ ಸಮನ್ಸ್ ಬಂದಿದೆ” ಎಂದು ರಾಣಾ ಅಯೂಬ್ ಮಂಗಳವಾರ ಹೇಳಿದ್ದರು.

ಇದನ್ನೂ ಓದಿ: ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದ ಇಡಿ, ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.

“ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಜನರಿಗೆ ಆಹಾರ ಮತ್ತು ಇತರ ಪರಿಹಾರಗಳನ್ನು ಒದಗಿಸಲು ಪತ್ರಕರ್ತೆ ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ ನಂತರ, ‘ಹಣ ಲಾಂಡರಿಂಗ್ ತನಿಖೆ’ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಣಾ ಅಯ್ಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ” ಎಂದು ಕಳೆದ ಫೆಬ್ರವರಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.

2021ರ ಸೆಪ್ಟೆಂಬರ್‌‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌ ಆಧರಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆಯ ವಿರುದ್ದ ಪ್ರಕರಣ ದಾಖಲಿಸಿತ್ತು.

ಸೆಪ್ಟೆಂಬರ್‌ನಲ್ಲಿ, ಹಿಂದೂ ಐಟಿ ಸೆಲ್ ಎಂಬ ಬಿಜೆಪಿ ಪರ ಗುಂಪು ರಾಣಾ ಅಯೂಬ್ ವಿರುದ್ಧ ಆನ್‌ಲೈನ್ ನಿಧಿಸಂಗ್ರಹಣೆ ವೇದಿಕೆಯಾದ ಕೆಟ್ಟೋ ಮೂಲಕ “ದಾನದ ಹೆಸರಿನಲ್ಲಿ” ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಸರ್ಕಾರದ ಅನುಮತಿಯಿಲ್ಲದೆ ರಾಣಾ ಅವರು ವಿದೇಶಿ ಹಣವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ರಾಣಾ ಅವರು ಕೆಟ್ಟೋದಲ್ಲಿ 2,69,44,680 ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಅವರು ಸಂಗ್ರಹಿಸಿದ ನಿಧಿಯಿಂದ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಪ್ರಾರಂಭಿಸಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಬಳಸಲಿಲ್ಲ ಎಂದು ಜಾರಿ ನಿರ್ದೇಶನಾಲಯವೂ ಹೇಳಿಕೊಂಡಿದೆ.

“ಜಾರಿ ನಿರ್ದೇಶನಾಲಯವು 50 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಠೇವಣಿ ಮತ್ತು ಬಾಕಿ ಮೊತ್ತವನ್ನು ಬ್ಯಾಂಕ್ ಠೇವಣಿಗಳಾಗಿ ನವಿ ಮುಂಬೈನ ಖಾಸಗಿ ಬ್ಯಾಂಕ್‌ನ ಎರಡು ಖಾತೆಗಳಲ್ಲಿ ಇರಿಸಲು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಆದರೆ ರಾಣಾ ಅಯೂಬ್ ಈ ಆರೋಪಗಳನ್ನು, ಅಸಂಬದ್ಧ, ಸಂಪೂರ್ಣ ದುರುದ್ದೇಶಪೂರಿತ ಮತ್ತು ಯಾವುದೆ ದಾಖಲೆಯಿಲ್ಲದೆ ಮಾಡಲಾದ ಆರೋಪ ಎಂದು ಹೇಳಿದ್ದಾರೆ. ತನ್ನ ಬ್ಯಾಂಕ್ ಸ್ಟೇಟ್‌ಮೆಂಟ್‌ ಅನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವರದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯಡಿಯಲ್ಲಿ ವಿವರಿಸಿದಂತೆ ತಾನು ಯಾವುದೇ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ’ಬುಲ್ಲಿ ಭಾಯ್’ – ಗುಂಪುದಾಳಿ ಮನಸ್ಥಿತಿ ವರ್ಚುವಲ್ ಸ್ಪೇಸ್‌ನೊಳಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...