Homeಮುಖಪುಟನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

- Advertisement -
- Advertisement -

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ barandbench.com ವರದಿ ಮಾಡಿದೆ.

ಹೈಕೋರ್ಟ್‌ನ ಅಧಿಕಾರಿಯೊಬ್ಬರು ಈ ವಿಷಯವನ್ನು ದೃಢಪಡಿಸಿದ್ದು, ನ್ಯಾಯಾಲಯದ ಪ್ರಕ್ರಿಯೆಗಳ ಅನಧಿಕೃತ ರೆಕಾರ್ಡಿಂಗ್ ಅನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿರುವುದಾಗಿ ವರದಿ ಹೇಳಿದೆ.

ಆನ್‌ಲೈನ್ ವಿಚಾರಣೆಗಳ ಕುರಿತ ದೆಹಲಿ ಹೈಕೋರ್ಟ್‌ನ ನಿಯಮಗಳು ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ರೆಕಾರ್ಡ್ ಮಾಡುವುದು ಮತ್ತು ಪ್ರಕಟಿಸುವುದನ್ನು ನಿಷೇಧಿಸುತ್ತವೆ.

ಅಂತಹ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಆನ್‌ಲೈನ್‌ನಲ್ಲಿ ಹಾಕಿರುವ “ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿರುವ ಪ್ರತಿಯೊಬ್ಬರ” ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ ಎಂದು barandbench.com ವರದಿ ಉಲ್ಲೇಖಿಸಿದೆ.

ಹೈಕೋರ್ಟ್ ಈ ಹಿಂದೆಯೂ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಕೇಜ್ರಿವಾಲ್ ಅವರ ವಿಡಿಯೋ ಹೈಕೋರ್ಟ್ ಗಮನಕ್ಕೆ ತೆಗೆದುಕೊಂಡ ವಿಡಿಯೋಗಳಲ್ಲಿ ಒಂದಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ನಾವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಅದು [ಕೇಜ್ರಿವಾಲ್ ವಿಡಿಯೋ] ವಿಡಿಯೋಗಳಲ್ಲಿ ಒಂದಾಗಿದೆ. ಹಿಂದೆಯೂ ನಾವು ಕ್ರಮ ಕೈಗೊಂಡಿದ್ದೇವೆ ಮತ್ತು ಅಂತಹ ಪ್ರಕರಣಗಳು ನಮಗೆ ತಿಳಿದಾಗಲೆಲ್ಲಾ, ಕ್ರಮ ಕೈಗೊಳ್ಳುವಂತೆ ನಾವು ಅವರಿಗೆ [ಕಾನೂನು ಜಾರಿ ಸಂಸ್ಥೆಗಳಿಗೆ] ಬರೆಯುತ್ತೇವೆ” ಎಂದು ಅಧಿಕಾರಿ ವಿವರಿಸಿದ್ದಾರೆ ಎಂದಿದೆ.

ಏಪ್ರಿಲ್ 13ರಂದು ದೆಹಲಿ ಹೈಕೋರ್ಟ್ ಮುಂದೆ ಕೇಜ್ರಿವಾಲ್ ಖುದ್ದಾಗಿ ಹಾಜರಾಗಿ, ದೆಹಲಿ ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ತಮ್ಮ ವಾದ ಮಂಡಿಸಿದ್ದರು.

ಕೇಜ್ರಿವಾಲ್ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾದ ಮಂಡಿಸಿದ್ದು, ವಿಚಾರಣೆ ಮುಗಿದ ಕೂಡಲೇ, ನ್ಯಾಯಾಲಯದ ಮುಂದೆ ಅವರು ವಾದ ಮಂಡಿಸಿದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...