Homeಮುಖಪುಟ'Dr. Nimo Yadav', 'Nehr Who' ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

- Advertisement -
- Advertisement -

‘Dr. Nimo Yadav’ ಮತ್ತು ‘Nehr Who’ ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ.

‘Dr. Nimo Yadav’ ಖಾತೆಯನ್ನು ನಿರ್ವಗಹಿಸುತ್ತಿರುವ ಪ್ರತೀಕ್ ಶರ್ಮಾ ಮತ್ತು ‘Nehr Who’ ಖಾತೆಯನ್ನು ನಿರ್ವಹಿಸುತ್ತಿರುವ ಕುಮಾರ್ ನಯನ್ ಅವರು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಖಾತೆಗಳನ್ನು ನಿರ್ಬಂಧಿಸಲು ಆದೇಶಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಒಟ್ಟು 12 ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸಚಿವಾಲಯ ಆದೇಶಿಸಿತ್ತು.

ದೆಹಲಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರು ಖಾತೆಗಳ ಮೇಲಿನ ನಿರ್ಬಂಧ ತಕ್ಷಣ ತೆರವುಗೊಳಿಸಲು ಆದೇಶಿಸಿದ್ದಾರೆ.

ವಕೀಲರಾದ ವೃಂದಾ ಗ್ರೋವರ್ (ಅರ್ಜಿದಾರರ ಪರ) ಮತ್ತು ಎಎಸ್‌ಜಿ ಚೇತನ್ ಶರ್ಮಾ (ಕೇಂದ್ರ ಸರ್ಕಾರದ ಪರ) ನಡುವಿನ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ಈ ಮಹತ್ವದ ಆದೇಶ ನೀಡಿದ್ದಾರೆ.

ಇಡೀ ಎಕ್ಸ್ ಖಾತೆಯನ್ನೇ ನಿರ್ಬಂಧಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಕೇವಲ ಕೆಲವು ವಿವಾದಾತ್ಮಕ ಪೋಸ್ಟ್‌ಗಳಿಗಾಗಿ ಸಂಪೂರ್ಣ ಖಾತೆಯನ್ನು ಸ್ಥಗಿತಗೊಳಿಸುವುದು ಕಾನೂನುಬಾಹಿರ ಎಂದು ಅರ್ಜಿದಾರರ ಪರ ವಕೀಲರಾದ ವೃಂದಾ ಗ್ರೋವರ್ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಸರ್ಕಾರದ ಪರ ವಾದಿಸಿ ಎಎಸ್‌ಜಿ ಚೇತನ್ ಶರ್ಮಾ ಅವರು ಐಟಿ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ದೇಶದ ಭದ್ರತೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಅಗತ್ಯವಾಗಿತ್ತು ಎಂದು ಹೇಳಿದ್ದಾರೆ.

ನ್ಯಾಯಮೂರ್ತಿಗಳು ಸೆಕ್ಷನ್ 69A ಅಡಿಯಲ್ಲಿ ಹೊರಡಿಸಲಾದ ಆದೇಶಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಅಂತಿಮವಾಗಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಮಾತ್ರ ತಡೆಹಿಡಿದು, ಇಡೀ ಖಾತೆಯನ್ನು ಮರುಸ್ಥಾಪಿಸುವುದು ನ್ಯಾಯಸಮ್ಮತ ಎಂದು ಆದೇಶ ನೀಡಿದ್ದಾರೆ.

ಹೈಕೋರ್ಟ್‌ನ ಆದೇಶವು ಕೇವಲ ಖಾತೆಗಳ ಮರುಸ್ಥಾಪನೆಗೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆಯೂ ಸ್ಪಷ್ಟ ನಿರ್ದೇಶನ ನೀಡಿದೆ.

ಅರ್ಜಿದಾರರು (ಖಾತೆದಾರರು) ಮಾಹಿತಿ ತಂತ್ರಜ್ಞಾನ ಸಚಿವಾಲಯದ (MeitY) ಪರಿಶೀಲನಾ ಸಮಿತಿಯ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಐಟಿ ಕಾಯ್ದೆಯ ಸೆಕ್ಷನ್ 69A ಪ್ರಕಾರ ನಿರ್ದಿಷ್ಟ ಪೋಸ್ಟ್‌ಗಳನ್ನು ನಿರ್ಬಂಧಿಸಿರುವುದು ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಕೇಂದ್ರ ಸರ್ಕಾರವು ಸಮಿತಿಯ ಮುಂದೆ ಸಾಬೀತುಪಡಿಸಬೇಕಾಗುತ್ತದೆ.

ಈ ಪ್ರಕ್ರಿಯೆಯಲ್ಲಿ ‘ನೈಸರ್ಗಿಕ ನ್ಯಾಯದ ತತ್ವ’ಗಳನ್ನು ಪಾಲಿಸಬೇಕು ಎಂದು ಹೈಕೋರ್ಟ್ ಒತ್ತಿ ಹೇಳಿದೆ. ಅಂದರೆ, ಅರ್ಜಿದಾರರಿಗೆ ತಮ್ಮ ವಾದವನ್ನು ಮಂಡಿಸಲು ಪೂರ್ಣ ಅವಕಾಶ ನೀಡಬೇಕು ಮತ್ತು ಯಾವುದೇ ಪೂರ್ವಾಗ್ರಹವಿಲ್ಲದೆ ವಿಚಾರಣೆ ನಡೆಯಬೇಕು ಎಂದರ್ಥ.

ಒಟ್ಟಾರೆಯಾಗಿ, ಸಂಪೂರ್ಣ ಖಾತೆಯನ್ನು ನಿರ್ಬಂಧಿಸುವ ಬದಲು, ಕೇವಲ ಆಕ್ಷೇಪಾರ್ಹ ಅಂಶಗಳನ್ನು ಮಾತ್ರ ಕಾನೂನುಬದ್ಧವಾಗಿ ಪರಿಶೀಲಿಸಲು ನ್ಯಾಯಾಲಯ ಈ ಮಾರ್ಗವನ್ನು ಸೂಚಿಸಿದೆ.

ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮಾರ್ಚ್ 18, 2026 ರಂದು ‘Dr. Nimo Yadav’ ಮತ್ತು ‘Nehr Who’ ಸೇರಿದಂತೆ ಕೆಲವು ಎಕ್ಸ್ ಖಾತೆಗಳನ್ನು ನಿರ್ಬಂಧಿಸಲು ರಹಸ್ಯ ಆದೇಶ ಹೊರಡಿಸಿತ್ತು. 

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಈ ಖಾತೆಗಳು ಅವಹೇಳನಕಾರಿ ಮತ್ತು ತಪ್ಪು ಮಾಹಿತಿ ಹರಡುತ್ತಿವೆ ಎಂದು ಸಚಿವಾಲಯ ವಾದಿಸಿತ್ತು. ಎಡಿಟ್ ಮಾಡಿದ ಫೋಟೋಗಳು, ವಿಡಿಯೋಗಳು ಮತ್ತು ಎಐ ತಂತ್ರಜ್ಞಾನ ಬಳಸಿ ಸಿದ್ಧಪಡಿಸಿದ ಪೋಸ್ಟ್‌ಗಳ ಮೂಲಕ ಸರ್ಕಾರಕ್ಕೆ ಮುಜುಗರ ಉಂಟುಮಾಡಲಾಗುತ್ತಿದೆ ಎಂಬುದು ಸಚಿವಾಲಯದ ಆರೋಪವಾಗಿತ್ತು.

ಇಂತಹ ಪೋಸ್ಟ್‌ಗಳು ಸಾರ್ವಜನಿಕ ಶಾಂತಿಗೆ ಭಂಗ ತರಬಹುದು ಮತ್ತು ದೇಶದ ಭದ್ರತೆಗೆ ಧಕ್ಕೆ ತರಬಹುದು ಎಂದು ಸಚಿವಾಲಯ ಹೇಳಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಈ ಖಾತೆಗಳನ್ನು ನಿರ್ಬಂಧಿಸಲು ಸರ್ಕಾರ ಆದೇಶಿಸಿತ್ತು. ಈ ಕಾಯ್ದೆಯು ದೇಶದ ಸಾರ್ವಭೌಮತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಇಂತಹ ಕ್ರಮಕ್ಕೆ ಅವಕಾಶ ನೀಡುತ್ತದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...