Homeಕರ್ನಾಟಕ'ಉಗ್ರ' ಎನ್ನಲು ಪೂರಕ ಸಾಕ್ಷ್ಯಗಳಿಲ್ಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್ ಜಾಮೀನು

‘ಉಗ್ರ’ ಎನ್ನಲು ಪೂರಕ ಸಾಕ್ಷ್ಯಗಳಿಲ್ಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್ ಜಾಮೀನು

- Advertisement -
- Advertisement -

ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಕಳೆದ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದಿಂದ ಬಂಧಿಸಲ್ಪಟ್ಟಿದ್ದ ಉಳ್ಳಾಲದ ಮಾಜಿ ಶಾಸಕ ದಿವಂಗತ ಇದಿನಬ್ಬ ಅವರ ಮೊಮ್ಮಗ ಅಮ್ಮಾರ್ ಅಬ್ದುಲ್ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಒಬ್ಬರು ವ್ಯಕ್ತಿಯ ಮೊಬೈಲ್‌ನಲ್ಲಿ ಐಸಿಸ್ ಧ್ವಜ ಮತ್ತು ಕರಪತ್ರಗಳು ಇದ್ದ ಮಾತ್ರಕ್ಕೆ ಅವರನ್ನು ಭಯೋತ್ಪಾದಕ ಎನ್ನಲಾಗದು ಎಂದು ನ್ಯಾಯಾಲಯ ಹೇಳಿರುವುದಾಗಿ ವರದಿಯಾಗಿದೆ.

ಆಗಸ್ಟ್ 21,2021 ರಂದು ಯುಎಪಿಎ ಕಾಯ್ದೆಯಡಿಯಲ್ಲಿ ಎನ್‌ಐಎ ಅಮ್ಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮನೆಯಿಂದ ಬಂಧಿಸಿತ್ತು. ತನ್ನ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್‌ನಲ್ಲಿ ಅಮ್ಮಾರ್ ಅಬ್ದುಲ್ ರೆಹಮಾನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ನಿರಾಕರಿಸಿದ ಹಿನ್ನೆಲೆ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆಯ ನಂತರ ಹೈಕೋರ್ಟ್ ಜಾಮೀನು ನೀಡಿದೆ.

“ಕೇವಲ ಭಯೋತ್ಪಾದಕ ಸಂಘಟನೆಯತ್ತ ಆಕರ್ಷಣೆ ಭಯೋತ್ಪಾದನೆಯಾಗುವುದಿಲ್ಲ. ಐಸಿಸ್ ಪರ ಭಾಷಣಗಳನ್ನು ಕೇಳುವುದು ಯುಎಪಿಎ ಕಾಯ್ದೆಯ ಸೆಕ್ಷನ್ 38 ಮತ್ತು 39ರ ಅಡಿಯಲ್ಲಿ ಬರುವುದಿಲ್ಲ. ಐಸಿಸ್ ಧ್ವಜಗಳು ಮತ್ತು ಲಾಡೆನ್ ಭಾಷಣಗಳ ಭಾಗಗಳು ಅಮ್ಮಾರ್ ಅವರ ಮೊಬೈಲ್‌ನಲ್ಲಿ ಕಂಡು ಬಂದಿದ್ದರೂ, ಅಂತಹ ವಿಷಯಗಳು ಆನ್‌ಲೈನ್‌ನಲ್ಲಿ ಸುಲಭವಾಗಿ ಲಭ್ಯವಿರುವುದರಿಂದ ಇದು ಅವರನ್ನು ಐಸಿಸ್ ಸದಸ್ಯರನ್ನಾಗಿ ಮಾಡುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವ್ಯಕ್ತಿಗಳ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಅಮ್ಮಾರ್ ಬಂಧನದ ನಂತರ ಜನವರಿ 4 ರಂದು ದಿವಂಗತ ಶಾಸಕ ಇದಿನಬ್ಬ ಅವರ ಸೊಸೆ ದೀಪ್ತಿ ಮಾರ್ಲಾ ಅಲಿಯಾಸ್ ಮರಿಯಂ ಅವರನ್ನು ಎನ್‌ಐಎ ಬಂಧಿಸಿತ್ತು. ಇದಿನಬ್ಬ ಅವರ ಮಗ ಅನಸ್ ಅಬ್ದುಲ್ ಅವರನ್ನು ವಿವಾಹವಾದ ನಂತರ ಇಸ್ಲಾಂಗೆ ಮತಾಂತರಗೊಂಡ ದೀಪ್ತಿ ಮಾರ್ಲಾ, ಅಮ್ಮಾರ್ ನಿರ್ದೇಶನದ ಮೇರೆಗೆ ಐಸಿಸ್‌ಗಾಗಿ ಕೆಲಸ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಎನ್‌ಐಎ ಮಾರ್ಚ್ 5,2021ರಂದು ದೆಹಲಿಯಲ್ಲಿ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿದೆ. ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ ಅಮ್ಮಾರ್ ಅಬ್ದುಲ್ ರೆಹಮಾನ್ ಅವರಿಗೆ ಜಾಮೀನು ದೊರೆತರೆ, ದೀಪ್ತಿ ಮಾರ್ಲಾ ಇನ್ನೂ ಎನ್‌ಐಎ ಕಸ್ಟಡಿಯಲ್ಲೇ ಇದ್ದಾರೆ.

ಇದನ್ನೂ ಓದಿ : ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...