Homeಮುಖಪುಟಮೋದಿ ದ್ವೇಷ ಭಾಷಣ ಪ್ರಕರಣ: ಚುನಾವಣಾ ಆಯೋಗದ ಮೇಲೆ ಅತಿಯಾದ ನಿಯಂತ್ರಣ ಅಸಾಧ್ಯ: ದೆಹಲಿ ಹೈಕೋರ್ಟ್

ಮೋದಿ ದ್ವೇಷ ಭಾಷಣ ಪ್ರಕರಣ: ಚುನಾವಣಾ ಆಯೋಗದ ಮೇಲೆ ಅತಿಯಾದ ನಿಯಂತ್ರಣ ಅಸಾಧ್ಯ: ದೆಹಲಿ ಹೈಕೋರ್ಟ್

- Advertisement -
- Advertisement -

‘ಚುನಾವಣಾ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ ಅದರ ಕಾರ್ಯವನ್ನು ಅತಿಯಾಗಿ ನಿಯಂತ್ರಿಸುವುದು ಅಸಾಧ್ಯ’ ಎಂದು ದ್ವೇಷ ಭಾಷಣಗಳಿಗಾಗಿ ಪ್ರಧಾನಿ ಮೋದಿ ವಿರುದ್ಧ ಎಫ್‌ಐಆರ್‌ಗೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಹೇಳಿದೆ.

ದ್ವೇಷ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡಿದ್ದ ನ್ಯಾ.ಸಚಿನ್ ದತ್ತಾ, ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎನ್ನುವುದನ್ನು ಯಾರು ನಿರ್ಧರಿಸಬೇಕು? ಚುನಾವಣಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದೆ, ನಾವು ಅದನ್ನು ಅತಿಯಾಗಿ ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

 

ಅರ್ಜಿದಾರರ ಪರ ವಕೀಲರು ಈ ವೇಳೆ, ಚುನಾವಣಾ ಆಯೋಗದ ಕ್ರಮಗಳು ದ್ವೇಷ ಭಾಷಣದಲ್ಲಿ ತೊಡಗಿರುವ ವ್ಯಕ್ತಿಯನ್ನು ಅವಲಂಬಿಸಿ ಬದಲಾಗುವಂತಿಲ್ಲ. ಆಯೋಗದ ಕ್ರಮಗಳು ಎಲ್ಲರಿಗೂ ಏಕರೂಪವಾಗಿರಬೇಕು ಎಂದು ವಾದಿಸಿದರು. ಇದಕ್ಕೆ ಪ್ರತಿಯಾಗಿ ಚುನಾವಣಾ ಆಯೋಗದ ಪರ ನ್ಯಾಯವಾದಿ ಸುರುಚಿ ಸೂರಿ ಪ್ರತಿಕ್ರಿಯಿಸಿದ್ದು, ಪ್ರಧಾನಿಯವರ ಹೇಳಿಕೆಗಳ ವಿರುದ್ಧ ದೂರುಗಳನ್ನು ಸ್ವೀಕರಿಸಿದ ಬಳಿಕ ಆಯೋಗವು ಬಿಜೆಪಿಗೆ ನೋಟಿಸ್ ಹೊರಡಿಸಿದ್ದು, ಮೇ 15ರೊಳಗೆ ಉತ್ತರವನ್ನು ನಿರೀಕ್ಷಿಸಲಾಗಿದೆ ಮತ್ತು ನಂತರ ಕಾನೂನಿಗೆ ಅನುಗುಣವಾಗಿ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ವೇಳೆ ನ್ಯಾಯಾಲಯವು  ಮುಂದಿನ ವಿಚಾರಣೆಯನ್ನು ಮೇ.13ಕ್ಕೆ ಮುಂದೂಡಿದೆ.

ಮೋದಿಯ ದ್ವೇಷಭಾಷಣಗಳ ವಿರುದ್ಧ ಹಲವಾರು ನಾಗರಿಕರು ಚುನಾವಣಾ ಆಯೋಗಕ್ಕೆ ದೂರುಗಳನ್ನು ಸಲ್ಲಿಸಿದ್ದರೂ ಕ್ರಮವನ್ನು ತೆಗೆದುಕೊಳ್ಳದೆ ಚುನಾವಣಾ ಆಯೋಗವು ಮೌನವಾಗಿದೆ. ಮೋದಿಯವರ ಹೇಳಿಕೆಗಳನ್ನು ಇತರ ಬಿಜೆಪಿ ನಾಯಕರು ನಿಯಮಿತವಾಗಿ ಪುನರಾವರ್ತಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

ಮೋದಿಯ ದ್ವೇಷ ಭಾಷಣಕ್ಕೆ ಸಂಬಂಧಿಸಿ ಮೋದಿಗೆ ನೊಟೀಸ್‌ ನೀಡುವ ಬದಲು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾಗೆ ವಿವರಣೆ ಕೇಳಿ ಬಿಜೆಪಿ ನೊಟೀಸ್‌ ನೀಡಿತ್ತು. ಇದಕ್ಕೆ ಪ್ರತಿಪಕ್ಷಗಳು ಚುನಾವಣಾ ಆಯೋಗವನ್ನು ಟೀಕಿಸಿದ್ದವು.

ರಾಜಸ್ಥಾನದ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ್ದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು. ಮೋದಿಯ ಈ ದ್ವೇಷದ ಭಾಷಣದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

 

ಇದನ್ನು ಓದಿ: ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...