Homeಮುಖಪುಟಸಿಎಂ ಹುದ್ದೆಯಿಂದ ಕೇಜ್ರಿವಾಲ್‌ನ್ನು ವಜಾ ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್ 

ಸಿಎಂ ಹುದ್ದೆಯಿಂದ ಕೇಜ್ರಿವಾಲ್‌ನ್ನು ವಜಾ ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್ 

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಕೇಜ್ರಿವಾಲ್ ಅವರು ಮದ್ಯ ನೀತಿ ಪ್ರಕರಣದಲ್ಲಿ ‘ಇಡಿ’ ಕಸ್ಟಡಿಯಲ್ಲಿರುವ ಕಾರಣ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಕಳೆದ ವಾರ ದೆಹಲಿ ಹೈಕೋರ್ಟ್‌ನಲ್ಲಿ ಹೊಸ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲಾಗಿತ್ತು. ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಪಿಐಎಲ್ ಸಲ್ಲಿಸಿದ್ದರು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠವು ಗುಪ್ತಾ ಅವರ ಅರ್ಜಿಯನ್ನು ವಜಾಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಪೀಠವು “ಪ್ರಜಾಪ್ರಭುತ್ವವು ತನ್ನದೇ ಆದ ಹಾದಿಯನ್ನು ಹಿಡಿಯಲಿ” ಎಂದು ಹೇಳಿದೆ.

ಸಿಎಂ ಆಗಿ ಮುಂದುವರಿಯಬೇಕೆ ಅಥವಾ ಬೇಡ ಎಂಬುವುದು ಕೇಜ್ರಿವಾಲ್ ಅವರ ಆಯ್ಕೆ ಎಂದು ನ್ಯಾಯಾಲಯ ಹೇಳಿದೆ. ಅರ್ಜಿದಾರರಿಗೆ ಪರಿಹಾರವು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅಥವಾ ರಾಷ್ಟ್ರಪತಿಗಳ ಮುಂದೆ ಇರುತ್ತದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಈ ಕುರಿತು ಸಂಬಂಧಪಟ್ಟವರಿಗೆ ಸಂಪರ್ಕಿಸಲು ಅರ್ಜಿದಾರರಿಗೆ ನ್ಯಾಯಾಲಯ ಹೇಳಿದೆ.

ಪ್ರಸ್ತುತ, ಅಬಕಾರಿ ನೀತಿ ಪ್ರಕರಣದಲ್ಲಿ ರೂಸ್ ಅವೆನ್ಯೂ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಸಿಎಂ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಕೇಜ್ರಿವಾಲ್‌ಗೆ ಒಂಬತ್ತು ಸಮನ್ಸ್‌ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ, ನಂತರ ಜಾರಿ ನಿರ್ದೇಶನಾಲಯವು ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

ಪಿಟಿಐ ಸುದ್ದಿ ಸಂಸ್ಥೆಯ ಪ್ರಕಾರ, ಕೇಜ್ರಿವಾಲ್ ಜೈಲಿನಲ್ಲಿ ದಿನದ ಹೆಚ್ಚಿನ ಸಮಯವನ್ನು ಪುಸ್ತಕಗಳನ್ನು ಓದಲು ಬಳಸುತ್ತಾರೆ. ಪ್ರತಿದಿನ ಎರಡು ಬಾರಿ ಯೋಗ ಮತ್ತು ಧ್ಯಾನ ಮಾಡುತ್ತಾರೆ. ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿ ಅಸ್ವಸ್ಥರಾಗಿದ್ದು, 4.5 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ದೆಹಲಿ ಸಚಿವೆ ಅತಿಶಿ ನಿನ್ನೆ ಆರೋಪಿಸಿದ್ದರು. ಆದರೆ ಜೈಲು ಅಧಿಕಾರಿಗಳು ಇದನ್ನು ನಿರಾಕರಿಸಿದ್ದರು.

ಕೇಜ್ರಿವಾಲ್ ಅವರಿಗೆ ಟಿವಿಯನ್ನು ಒದಗಿಸಲಾಗಿದೆ, ಆದರೆ ಅವರು ದೂರದರ್ಶನವನ್ನು ವೀಕ್ಷಿಸಲು ಇಷ್ಟಪಡುವುದಿಲ್ಲ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಇವರಿಗೆ  ಟೇಬಲ್ ಮತ್ತು ಕುರ್ಚಿಯನ್ನು ಒದಗಿಸಲಾಗಿದೆ. ಅವರು ಚಹಾ ಮತ್ತು ಮನೆಯಲ್ಲಿ ತಯಾರಿಸಿದ ಆಹಾರವನ್ನು ನಿಯಮಿತವಾಗಿ ಸೇವಿಸುತ್ತಾರೆ ಎಂದು ಪಿಟಿಐ ವರದಿ ಉಲ್ಲೇಖಿಸಿದೆ.

ಇದನ್ನು ಓದಿ: ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read