Homeಮುಖಪುಟಬಿಜಿಪಿ ನಾಯಕರ ವಿರುದ್ಧ FIR ದಾಖಲಿಸಲು ದೆಹಲಿ ಹೈಕೋರ್ಟ್ ಆದೇಶ

ಬಿಜಿಪಿ ನಾಯಕರ ವಿರುದ್ಧ FIR ದಾಖಲಿಸಲು ದೆಹಲಿ ಹೈಕೋರ್ಟ್ ಆದೇಶ

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ ದ್ವೇಷ ಭಾಷಣ ಮಾಡಿದ ಬಿಜೆಪಿ ನಾಯಕರ ವಿರುದ್ಧ FIR ದಾಖಲಿಸುವಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ.

ಬಿಜೆಪಿ ನಾಯಕರಾದ ಕಪಿಲ್ ಮಿಶ್ರ, ಅನುರಾಗ್ ಠಾಕೂರ್, ಪರ್ವೇಶ್ ವರ್ಮ ಹಾಗು ಅಭಯ್ ವರ್ಮ ವಿರುದ್ಧ FIR ದಾಖಲಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದ್ದಲ್ಲದೆ ಕೇಸು ದಾಖಲಿಸಲು ವಿಳಂಬ ಮಾಡಿದ್ದಕ್ಕೆ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತು.

ಬಿಜೆಪಿ ಮುಖಂಡರ ದ್ವೇಷ ಭಾಷಣದ ವೀಡಿಯೋ ನೋಡಿಲ್ಲವೆಂದ ಪೊಲೀಸರಿಗೆ ಛೀಮಾರಿ ಹಾಕಿದ ಕೋರ್ಟ್‌, ಅಲ್ಲಿಯೇ ವಿಡಿಯೋಗಳನ್ನು ಬಿತ್ತರಿಸಿ, ಪೂರ್ಣ ವಿಡಿಯೋಗಳನ್ನು ನೋಡಿ FIR ದಾಖಲಿಸಿ ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ. ಗುರುವಾರ ಮಾಹಿತಿ ನೀಡುವಂತೆ ಕಮೀಷನರ್ ಗೆ ಆದೇಶಿಸಿದೆ.

ಕಳೆದ ಮೂರು ದಿನದಿಂದ ಈಶಾನ್ಯ ದೆಹಲಿಯಲ್ಲಿ ಗಲಭೆ ಪ್ರಾರಂಭವಾಗಿದ್ದು. ಗಲಭೆಯಲ್ಲಿ ಈವರೆಗೆ 23 ಜನ ಸಾವಿಗೀಡಾಗಿದ್ದಾರೆ ಹಾಗೂ 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಲಭೆಗೂ ಮೊದಲು ಬಿಜಿಪಿ ನಾಯಕ ಕಪಿಲ್ ಮಿಶ್ರ ಉದ್ರೇಕಕಾರಿಯಾಗಿ ಭಾಷಣ ಮಾಡಿದ್ದರು. ಇದರ ನಂತರ ಅಲ್ಲಿ ಗಲಭೆ ಪ್ರಾರಂಭವಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...