HomeUncategorized'RAW' ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

‘RAW’ ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

- Advertisement -
- Advertisement -

ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಉತ್ತರ ಅಮೆರಿಕಾದಲ್ಲಿ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿರುವ ಕುರಿತು ‘ದಿ ಪ್ರಿಂಟ್’ ಪ್ರಕಟಿಸಿದ್ದ ಲೇಖನವನ್ನು ತೆಗೆದು ಹಾಕಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಲೇಖನವು ಅಧಿಕಾರಿಗಳ ವೃತ್ತಿ ಜೀವನ ಅಥವಾ ಅವರ ಕುಟುಂಬ ಸದಸ್ಯರ ಜೀವಕ್ಕೆ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠ ತಿಳಿಸಿದೆ.

ಪತ್ರಿಕಾ ಸ್ವಾತಂತ್ರ್ಯವನ್ನು ಅತ್ಯಂತ ಉನ್ನತ ಮಟ್ಟದಲ್ಲಿ ಇರಿಸಲಾಗಿದೆ. ಲೇಖನ ತೆಗೆದು ಹಾಕುವಂತೆ ನಾವು ಆದೇಶಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ.

ಸರ್ಕಾರವು ಅಗತ್ಯವೆಂದು ಪರಿಗಣಿಸಿದರೆ ಸಮಸ್ಯೆಯನ್ನು ನಿಭಾಯಿಸಲು ಅಧಿಕಾರ ಹೊಂದಿದೆ ಎಂದು ನ್ಯಾಯಾಲಯವು ಪಿಐಎಲ್‌ ತಿರಸ್ಕರಿಸುವಾಗ ತಿಳಿಸಿದೆ.

‘ದಿ ಪ್ರಿಂಟ್’ ನವೆಂಬರ್ 30, 2023 ರಂದು “Nijjar-Pannun effect: RAW downs shutters in North America 1st time since inception in 1968”ಎಂಬ ಶೀರ್ಷಿಕೆಯಲ್ಲಿ ಲೇಖನವನ್ನು ಪ್ರಕಟಿಸಿತ್ತು. ಇದನ್ನು ದಿ ಪ್ರಿಂಟ್‌ಗೆ ಕಾಂಟ್ರಿಬ್ಯೂಟಿಂಗ್ ಎಡಿಟರ್ ಪ್ರವೀಣ್ ಸ್ವಾಮಿ ಅವರು ಬರೆದಿದ್ದರು.

ಭಾರತೀಯ ಹೈಕಮಿಷನ್‌ನಲ್ಲಿ ಕೆಲಸ ಮಾಡುವವರಿಂದ ತನಗೆ ಬಂದ ಮಾಹಿತಿಯ ಪ್ರಕಾರ, ಲೇಖನವು ಭಾರತೀಯ ರಾಜತಾಂತ್ರಿಕರು ಮತ್ತು ಗುಪ್ತಚರ ಕಾರ್ಯಕರ್ತರ ಜೀವಕ್ಕೆ ಅಪಾಯವನ್ನುಂಟು ಮಾಡಲಿದೆ ಎಂದು ವಕೀಲ ರಾಘವ್ ಅವಸ್ತಿ ಎಂಬವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.

ವಿದೇಶದಲ್ಲಿ ಕೆಲಸ ಮಾಡುವ ಯಾವುದೇ ಸರ್ಕಾರಿ ಅಧಿಕಾರಿ ಅಥವಾ ರಾಜತಾಂತ್ರಿಕರು ಗುಪ್ತಚರ ಸೇವೆಗಳಿಗಾಗಿ ಕೆಲಸ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ಮೂಲ ಆಧಾರಿತ ಊಹಾಪೋಹಗಳನ್ನು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳಿಗೆ ನಿರ್ಬಂಧ ಹೇರಲು ಪಿಐಎಲ್‌ನಲ್ಲಿ ಕೋರಲಾಗಿತ್ತು.

‘ದಿ ಪ್ರಿಂಟ್‌’ನ ಲೇಖನವು ಸಂಪೂರ್ಣವಾಗಿ ಮೂಲ ಆಧಾರಿತವಾಗಿದೆ. ಇದು ಭಾರತೀಯ ರಾಜತಾಂತ್ರಿಕರ ವೃತ್ತಿ ಜೀವನಕ್ಕೆ ಹಾನಿಯನ್ನುಂಟು ಮಾಡಲಿದೆ ಮತ್ತು ಅವರ ಜೀವನವನ್ನು ಅಪಾಯಕ್ಕೆ ತಳ್ಳಲಿದೆ. ತನ್ನನ್ನು ಸಂಪರ್ಕಿಸಿದ ರಾಜತಾಂತ್ರಿಕರ ಗುರುತನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧ. ಅಧಿಕಾರಿಗಳ ಗುರುತನ್ನು ಮರೆ ಮಾಚಲು ನ್ಯಾಯಾಲಯ ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪ ನಡೆಸಬಹುದು ಎಂದು ಅವಸ್ತಿ ಪಿಐಎಲ್‌ನಲ್ಲಿ ಹೇಳಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ರೀತಿಯ ಸುದ್ದಿಗಳ ವರದಿಯನ್ನು ನಿರ್ಬಂಧಿಸಿ ಆದೇಶಿಸಲು ಸಾಧ್ಯವಿಲ್ಲ ಎಂದು ವಾದವನ್ನು ತಿರಸ್ಕರಿಸಿದೆ. ಭಾರತ ಸರ್ಕಾರವು ಸಮಸ್ಯೆಯನ್ನು ನಿಭಾಯಿಸಲು ಸಾಕಷ್ಟು ಅಧಿಕಾರವನ್ನು ಹೊಂದಿದೆ. ರಾಷ್ಟ್ರೀಯ ಭದ್ರತೆಗೆ ಏನಾದರೂ ಅಪಾಯವಿದೆ ಎಂದು ಸರ್ಕಾರ ಭಾವಿಸಿದರೆ, ಅವರು ಅದರ ಮೇಲೆ ಕಾರ್ಯನಿರ್ವಹಿಸಲು ಸ್ವತಂತ್ರರು ಎಂದು ನ್ಯಾಯಾಲಯ ಹೇಳಿದೆ. ಪಿಐಎಲ್‌ ಊಹೆಗಳ ಮೇಲೆ ಸಲ್ಲಿಸಲಾಗಿದೆ ಎಂದು ಅದನ್ನು ತಿರಸ್ಕರಿಸಿದೆ.

ಇದನ್ನೂ ಓದಿ : ಸಿಬಿಐನಿಂದ ಕೊಚ್ಚರ್ ದಂಪತಿಯ ಬಂಧನ: ‘ಅಧಿಕಾರದ ದುರುಪಯೋಗ’ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...