Homeಮುಖಪುಟಪ್ರಧಾನಿ ಮೋದಿ ಪದವಿ ವಿವರ ಬಹಿರಂಗಪಡಿಸುವ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

ಪ್ರಧಾನಿ ಮೋದಿ ಪದವಿ ವಿವರ ಬಹಿರಂಗಪಡಿಸುವ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಬೇಕೆಂಬ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ದೆಹಲಿ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿದಾರರಿಗೆ ಒದಗಿಸುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದ ಸಿಐಸಿಯ 2017ರ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ (ಡಿಯು) ಸಲ್ಲಿಸಿದ್ದ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಸಚಿನ್ ದತ್ತ ಅವರ ಪೀಠ ಪುರಸ್ಕರಿಸಿದೆ.

“ಸಿಐಸಿ ಆದೇಶವನ್ನು ರದ್ದುಗೊಳಿಸಲಾಗಿದೆ” ಎಂಬುವುದಾಗಿ ಏಕ ಸದಸ್ಯ ನ್ಯಾಯಾಧೀಶರ ಪೀಠ ತೀರ್ಪು ಪ್ರಕಟಿಸುತ್ತಾ ಹೇಳಿದೆ” ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಧಾನಿ ಮೋದಿ ರಾಜ್ಯಶಾಸ್ತ್ರದಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆಂದು ಹೇಳಲಾಗುವ 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) ಕೋರ್ಸ್ ತೇರ್ಗಡೆಯಾದ ವಿದ್ಯಾರ್ಥಿಗಳ ದಾಖಲೆಗಳನ್ನು ಆರ್‌ಟಿಐ ಅರ್ಜಿದಾರರು ಕೋರಿದ್ದರು.

2016ರಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ಮೋದಿಯವರಿಗೆ ತಮ್ಮ ಶೈಕ್ಷಣಿಕ ಪದವಿಗಳ ಬಗ್ಗೆ ಸ್ಪಷ್ಟನೆ ನೀಡಿ ಮತ್ತು ಅವುಗಳನ್ನು ಸಾರ್ವಜನಿಕಗೊಳಿಸಬೇಕು ಎಂದು ಕೇಳಿದ್ದ ನಂತರ ಈ ವಿಷಯವು ಚರ್ಚೆಗೆ ಬಂದಿತ್ತು.

ಪ್ರಧಾನಿ ಮೋದಿ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬಿಎ ರಾಜ್ಯಶಾಸ್ತ್ರ ಕೋರ್ಸ್‌ನಲ್ಲಿ ಪದವಿ ಪಡೆದಿರುವುದಾಗಿ ತಿಳಿಸಿದ್ದರು.

ಅದಕ್ಕೂ ಒಂದು ವರ್ಷದ ಮೊದಲು, ನೀರಜ್ ಶರ್ಮಾ ಎಂಬುವವರು 1978ರಲ್ಲಿ ದೆಹಲಿ ವಿಶ್ವವಿದ್ಯಾಲಯವು ನೀಡಿದ ಎಲ್ಲಾ ಬಿಎ ಪದವಿಗಳ ವಿವರಗಳನ್ನು ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಲು ವಿಶ್ವವಿದ್ಯಾನಿಲಯವು ನಿರಾಕರಿಸಿತ್ತು. ಅದು ‘ಖಾಸಗಿ’ ಮತ್ತು ‘ಸಾರ್ವಜನಿಕ ಹಿತಾಸಕ್ತಿಗೆ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿತ್ತು.

ಡಿಸೆಂಬರ್ 2016 ರಲ್ಲಿ, ಶರ್ಮಾ ವಿಶ್ವವಿದ್ಯಾಲಯದ ಪ್ರತಿಕ್ರಿಯೆಯ ವಿರುದ್ಧ ಸಿಐಸಿಗೆ ಅರ್ಜಿ ಸಲ್ಲಿಸಿದ್ದರು. ಮಾಹಿತಿ ಆಯುಕ್ತ ಪ್ರೊ. ಎಂ. ಆಚಾರ್ಯುಲು ಅವರು 1978ರಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ವಿಷಯದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪಟ್ಟಿಯನ್ನು ಹೊಂದಿರುವ ರಿಜಿಸ್ಟರ್ ಅನ್ನು ಸಾರ್ವಜನಿಕಗೊಳಿಸುವಂತೆ ದೆಹಲಿ ವಿವಿಗೆ ನಿರ್ದೇಶನ ನೀಡಿದ್ದರು.

ಜನವರಿ 23,2017 ರಂದು ದೆಹಲಿ ವಿವಿ ಸಿಐಸಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ಸಂಬಂಧ ವಿವಿ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು “ಸಿಐಸಿ ಆದೇಶವು ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ. ದೇಶದ ವಿವಿಗಳ ಕೋಟ್ಯಂತರ ವಿದ್ಯಾರ್ಥಿಗಳ ಪದವಿ ವಿವರಗಳು ವಿಶ್ವಾಸಾರ್ಹ ವಿಷಯವಾಗಿದೆ” ಎಂದಿದ್ದರು.

‘ತಿಳಿದುಕೊಳ್ಳುವ ಹಕ್ಕು ಅನಿಯಂತ್ರಿತ ಹಕ್ಕಲ್ಲ. ಆರ್‌ಟಿಐ ಕಾಯ್ದೆಯಡಿಯಲ್ಲಿ ವೈಯಕ್ತಿಕ ಮಾಹಿತಿ ಕೇಳಲು ಅವಕಾಶವಿಲ್ಲ. ಅಧಿಕಾರಿಗಳನ್ನು ಬೆದರಿಸಲು ಆರ್‌ಟಿಐ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.

‘ಸಾರ್ವಜನಿಕ ಕುತೂಹಲ (Interest to the Public) ಮತ್ತು ‘ಸಾರ್ವಜನಿಕ ಹಿತಾಸಕ್ತಿ’ ( Public Interest) ಎನ್ನುವುದು ಎರಡೂ ಒಂದೇ ಅಲ್ಲ. ಹಾಗಾಗಿ, ಮಾಹಿತಿ ಹಕ್ಕು ಕಾಯ್ದೆಯಡಿ ಕೇವಲ ಕುತೂಹಲಕ್ಕಾಗಿ ಮೋದಿಯವರ ಪದವಿ ವಿವರ ಕೇಳಲು ಸಾಧ್ಯವಿಲ್ಲ ಎಂದಿದ್ದರು.

ಆರ್‌ಟಿಐ ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಸಂಜಯ್ ಹೆಗ್ಡೆ, ವಿದ್ಯಾರ್ಥಿಗಳ ಪದವಿ ವಿವರಗಳನ್ನು ವಿಶ್ವಾಸಾರ್ಹ ವಿಷಯ ಎಂಬ ದೆಹಲಿ ವಿವಿಯ ವಾದವನ್ನು ಪ್ರಶ್ನಿಸಿದ್ದರು.

ಮಾಹಿತಿ ಬಹಿರಂಗಪಡಿಸುವಿಕೆಯು ಸಾರ್ವಜನಿಕವಾಗಿ ಒಳಿತನ್ನು ಉಂಟುಮಾಡುತ್ತದೆಯೇ ಅಥವಾ ಹಾನಿಯನ್ನುಂಟುಮಾಡುತ್ತದೆಯೇ ಎಂದು ಮಾಹಿತಿ ಅಧಿಕಾರಿ ನೋಡಬೇಕು ಎಂದು ಎಂದಿದ್ದರು.

ವಾದ ಆಲಿಸಿದ್ದ ನ್ಯಾಯಾಲಯ ಜನವರಿ 2017ರಲ್ಲಿ ಅರ್ಜಿದಾರ ಶರ್ಮಾ ಅವರಿಗೆ ನೋಟಿಸ್ ನೀಡಿ ಆದೇಶ ಕಾಯ್ದಿರಿಸಿತ್ತು.

ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...