Homeಮುಖಪುಟಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

- Advertisement -
- Advertisement -

ದೆಹಲಿಯ  ಗೋವಿಂದ್‌ ವಲ್ಲಭ್‌ ಪಂತ್‌ ಆಸ್ಪತ್ರೆ (GIPMER) ತನ್ನ ನರ್ಸ್‌ಗಳು ಮಲಯಾಳಿ ಭಾಷೆಯಲ್ಲಿ ಮಾತನಾಡುವುದನ್ನು ನಿಷೇಧಿಸಿದೆ. ಆಸ್ಪತ್ರೆಯ ಆವರಣದಲ್ಲಿ ಮಲಯಾಳಂ ಬದಲು ಹಿಂದಿಯಲ್ಲಿಯೇ ಮಾತಾಡುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ತನ್ನ ಆರೋಗ್ಯ ಸಿಬ್ಬಂದಿಗೆ ಕಠಿಣವಾದ ಎಚ್ಚರಿಕೆ ಮತ್ತು ನಿರ್ದೇಶನಗಳನ್ನು ನೀಡಿದೆ. ಜೊತೆಗೆ ಹಿಂದಿ ಮತ್ತು ಇಂಗ್ಲೀಷ್‌ ಭಾಷೆಯಲ್ಲಿ ಮಾತನಾಡದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಹೆಚ್ಚಿನ ರೋಗಿಗಳು ಮಲಯಾಳಂ ಭಾಷೆಯನ್ನು ಅರ್ಥ ಮಾಡಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ನರ್ಸ್‌ಗಳು ಮಲಯಾಳಂ ಭಾಷೆಯಲ್ಲಿ ಸಂಭಾಷಣೆಯನ್ನು ನಡೆಸತೊಡಗಿದರೆ ರೋಗಿಗಳಲ್ಲಿ ಅಸಹಾಯಕ ಭಾವನೆ ಹುಟ್ಟುತ್ತದೆ. ಹಾಗಾಗಿ ಮಲಯಾಳಂ ಭಾಷೆಯಲ್ಲಿ ಮಾತನಾಡದಂತೆ ನರ್ಸ್‌ಗಳಿಗೆ ಆದೇಶಿಸಿದ್ದೇವೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ನಾವು 300-350 ನರ್ಸಿಂಗ್‌ ಸಿಬ್ಬಂದಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ನಾವು ಯಾವಾಗಲೂ ಹಿಂದಿಯಲ್ಲಿಯೇ ರೋಗಿಗಳೊಂದಿಗೆ ಸಂಭಾಷಣೆ ನಡೆಸುತ್ತೇವೆ. ನಾವು ಮಲಯಾಳಂ ನಲ್ಲಿ ಮಾತನಾಡಿದರೆ ರೋಗಿಗಳಿಗೆ ಏನೂ ಅರ್ಥವಾಗುವುದಿಲ್ಲವೆಂದೂ ತಿಳಿದಿದೆ. ಆದರೆ ನಾವು ಸಿಬ್ಬಂದಿಗಳು ಪರಸ್ಪರ ಮಾತನಾಡುವಾಗ ಮಲೆಯಾಳಂ ಭಾಷೆಯನ್ನು ಬಳಸುವಂತಿಲ್ಲ ಎಂದು ಈಗ ಆಸ್ಪತ್ರೆ ಹೇಳಿದೆ ಎಂದು ನರ್ಸ್‌ ಒಬ್ಬರು ತಿಳಿಸಿದ್ದಾರೆ.

ದೆಹಲಿಯ ಗೋವಿಂದ್‌ ವಲ್ಲಭ ಪಂತ್‌ ಆಸ್ಪತ್ರೆಯ ಮಲಯಾಳಂ ವಿರೋಧಿ ಧೋರಣೆಗೆ ದೇಶದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಟ್ವಿಟ್ಟರ್‌ ಮುಂತಾದ ಸಾಮಾಜಿಕ ಜಾಲತಾಣಗಳ ಮೂಲಕ ಅನೇಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ದೇಶದಲ್ಲಿ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾದ ಭಾಷೆಯಲ್ಲಿ ಮುಕ್ತವಾಗಿ ಮಾತನಾಡುವ ಹಕ್ಕಿದೆ. ಸಂವಿಧಾನದ ಅನುಚ್ಛೇಧ 19 ರಲ್ಲಿ ಹೇಳಲಾದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಆಸ್ಪತ್ರೆ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಶಶಿ ತರೂರ್‌,  ಥಾಮಸ್‌ ಐಸಾಕ್‌ ಸೇರಿದಂತೆ ದೇಶದ ಅನೇಕ ರಾಜಕೀಯ ನಾಯಕರು ಮತ್ತು ಗಣ್ಯರು ದೆಹಲಿ ಆಸ್ಪತ್ರೆಯ ಹಿಂದಿ ಹೇರಿಕೆಯ ವಿರುದ್ಧ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿ ಆಸ್ಪತ್ರೆಯ ಈ ಕ್ರಮ ಕಂಡನಾರ್ಹ. ಸಂವಿಧಾನಾತ್ಮಕ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನವನ್ನು ಈ ಆಸ್ಪತ್ರೆ ಈ ಕೂಡಲೇ ನಿಲ್ಲಿಸಬೇಕು.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...