ಆಕ್ಸಿಜನ್ ಕೊರತೆಯಿಂದಾಗಿ ಬಳಲುತ್ತಿದ್ದ ದೆಹಲಿಯ ಹಲವು ಆಸ್ಪತ್ರೆಗಳು ನಿನ್ನೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದ ನಂತರ ಆಕ್ಸಿಜನ್ ಪೂರೈಕೆ ಪಡೆದಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.
ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆ, ಗುರು ತೇಗ್ ಬಹದ್ದೂರ್ ಆಸ್ಪತ್ರೆ, ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಿಗೆ ನಿನ್ನೆ ತಡರಾತ್ರಿ ಆಕ್ಸಿಜನ್ ಪೂರೈಕೆಯಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆರೋಗ್ಯ ಸಚಿವ ಸತ್ಯಂದರ್ ಜೈನ್ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯುಂಟಾಗಿದೆ. ದೆಹಲಿ ಪಾಲಿನ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ಇತರ ದೊಡ್ಡ ರಾಜ್ಯಗಳಿಗೆ ತಿರುಗಿಸುತ್ತಿದೆ. ದೇಶದ ರಾಜಧಾನಿಯಲ್ಲಿ ಆಕ್ಸಿಜನ್ ತುರ್ತುಪರಿಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದ್ದರು.
ತದನಂತರ ದೆಹಲಿ ಹೈಕೋರ್ಟ್ ಈ ಕುರಿತು ವಿಚಾರಣೆ ನಡೆಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ನೀವು ಹೇಳುತ್ತೀರಾ? ಕೈಗಾರಿಕೆಗಳು ಕಾಯಬಹುದೇ ಹೊರತು ರೋಗಿಗಳಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.
ಕೇಂದ್ರ ಸರ್ಕಾರವು ಕಬ್ಬಿಣ ಮತ್ತು ಪೆಟ್ರೋಲಿಯಂ ಕಂಪನಿಗಳಿಗೆ ಒದಗಿಸುವ ಆಕ್ಸಿಜನ್ ಅನ್ನು ಮೊಟಕುಗೊಳಿಸಬೇಕು. ಅದನ್ನು ಕೂಡಲೇ ಅಗತ್ಯವಿರುವ ಆಸ್ಪತ್ರೆಗಳಿಗೆ ತಿರುಗಿಸಬೇಕು. ನಾವು ಸರ್ವನಾಶದ ಸಂದರ್ಭದಲ್ಲಿದ್ದೀವಿ. ಈ ಸಮಯದಲ್ಲಿ ಆರ್ಥಿಕ ಲಾಭಕ್ಕಿಂತ ಮಾನವ ಜೀವಗಳಿಗೆ ಬೆಲೆ ಕೊಡಬೇಕು. ಕಾರ್ಖಾನೆಗಳು ಬೇಕಾದರೆ ಕಾಯುತ್ತವೆ ಆದರೆ ರೋಗಗಳು ಕಾಯಲಾಗುವುದಿಲ್ಲ ಎಂದು ವಿಪಿನ್ ಸಂಘಿ ಮತ್ತು ರೇಖಾ ಪಲ್ಲಿಅವರಿದ್ದ ಪೀಠ ಹೇಳಿತ್ತು.
ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್



good decition from sc