Homeಚಳವಳಿದೆಹಲಿ: ಆರೋಗ್ಯ ಸಚಿವರೊಂದಿಗೆ ಮಾತುಕತೆ ಬಳಿಕ 14 ದಿನಗಳ ಪ್ರತಿಭಟನೆ ಅಂತ್ಯಗೊಳಿಸಲಿರುವ ಕಿರಿಯ ವೈದ್ಯರು

ದೆಹಲಿ: ಆರೋಗ್ಯ ಸಚಿವರೊಂದಿಗೆ ಮಾತುಕತೆ ಬಳಿಕ 14 ದಿನಗಳ ಪ್ರತಿಭಟನೆ ಅಂತ್ಯಗೊಳಿಸಲಿರುವ ಕಿರಿಯ ವೈದ್ಯರು

- Advertisement -
- Advertisement -

ನೀಟ್‌ ಸ್ನಾತಕೋತ್ತರ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು ತಮ್ಮ 14 ದಿನಗಳ ಧರಣಿ ಹಿಂಪಡೆಯಲು ನಿರ್ಧರಿಸಿದ್ದಾರೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ದೆಹಲಿ ಪೊಲೀಸರೊಂದಿಗೆ ಸಭೆ ನಡೆಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (FORDA)​​ ತಿಳಿಸಿದೆ.

ಜನವರಿ 6 ರ ಮುಂದಿನ ವಿಚಾರಣೆಗೆ ಮೊದಲು ಸಮಿತಿಯ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ಆರೋಗ್ಯ ಸಚಿವಾಲಯ ಒಪ್ಪಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ವೈದ್ಯರ ವಿರುದ್ಧ ಯಾವುದೇ ಶಿಸ್ತು ಕ್ರಮವನ್ನು ಅಧಿಕಾರಿಗಳು ತೆಗೆದುಕೊಳ್ಳುವುದಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ವೈದ್ಯರ ಸಂಘಟನೆ ತಿಳಿಸಿದೆ

“ಆರೋಗ್ಯ ಸಚಿವಾಲಯದ ಸಮಿತಿಯ ವರದಿಯನ್ನು ಜನವರಿ 6, 2022 ರ ಮೊದಲು ಸುಪ್ರೀಂ ಕೋರ್ಟ್‌ಗೆ ಸಲ್ಲಿಸುತ್ತದೆ. ಜನವರಿ 6, 2022 ರಂದು ನ್ಯಾಯಾಲಯದ ವಿಚಾರಣೆಯ ನಂತರ NEET-PG 2021 ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸುತ್ತದೆ. ಡಿಸೆಂಬರ್ 27 ರಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ಹಲ್ಲೆಗೆ ವಿಷಾದಿಸುತ್ತೇವೆ. ನವೆಂಬರ್ 27 ರಂದು ಪ್ರಾರಂಭವಾದ ಪ್ರತಿಭಟನೆಯಲ್ಲಿ ಭಾಗವಹಿಸಿದ ಯಾವುದೇ ವೈದ್ಯರ ವಿರುದ್ಧ ಅಧಿಕಾರಿಗಳು ಯಾವುದೇ ಶಿಸ್ತು ಕ್ರಮವನ್ನು ತೆಗೆದುಕೊಳ್ಳುವುದಿಲ್ಲ” ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ದೆಹಲಿ ಪೊಲೀಸ್ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ವೈದ್ಯರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ಕಾನೂನು ಪ್ರಕ್ರಿಯೆಗಳ ಪ್ರಕಾರ ನೋಡಿಕೊಳ್ಳಲಾಗುವುದು ಎಂದು ವೈದ್ಯ ಸಂಘಕ್ಕೆ ಭರವಸೆ ನೀಡಲಾಗಿದೆ ಎಂದು ತಿಳಿಸಿದೆ.

ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಒಂದು ವರ್ಷದಿಂದ ನೇಮಕಾತಿ ತಡೆಹಿಡಿಯಲಾಗಿದೆ ಎಂದು ವೈದ್ಯರು ಆರೋಪಿಸಿದ್ದಾರೆ.


ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...