Homeಮುಖಪುಟಅರುಂಧತಿ ರಾಯ್, ಶೇಖ್ ಶೌಕತ್ ವಿರುದ್ಧ UAPAಯಡಿ ಪ್ರಕರಣ ದಾಖಲಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ

ಅರುಂಧತಿ ರಾಯ್, ಶೇಖ್ ಶೌಕತ್ ವಿರುದ್ಧ UAPAಯಡಿ ಪ್ರಕರಣ ದಾಖಲಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967ರ ಸೆಕ್ಷನ್ 13ರಡಿಯಲ್ಲಿ ಲೇಖಕಿ ಅರುಂಧತಿ ರಾಯ್ ಹಾಗೂ ಕಾಶ್ಮೀರ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಕಾನೂನು ಪ್ರಾಧ್ಯಾಪಕರಾಗಿದ್ದ ಡಾ. ಶೇಖ್ ಶೌಕತ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅನುಮತಿ ನೀಡಿದ್ದಾರೆ.

2010ರಲ್ಲಿ  ‘ಆಝಾದಿ – ದಿ ಓನ್ಲಿ ವೇ’ ತಲೆಬರಹದಲ್ಲಿ ಕಮಿಟಿ ಫಾರ್ ದಿ ರಿಲೀಸ್ ಆಫ್ ಪೊಲಿಟಿಕಲ್ ಪ್ರಿಸನರ್ಸ್ ಸಂಘಟನೆಯು ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಲಾಗಿದೆ ಎಂದು ಹಲವಾರು ಮಂದಿಯ ವಿರುದ್ಧ ಸುಶೀಲ್ ಪಂಡಿತ್ ದೂರು ದಾಖಲಿಸಿದ್ದರು.

ಕಳೆದ ವರ್ಷ ಲೇಖಕಿ ಅರುಂಧತಿ ರಾಯ್ ಮತ್ತು ಡಾ. ಶೇಖ್ ಶೌಕತ್ ವಿರುದ್ಧ ಇದೇ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ/153ಬಿ ಹಾಗೂ 505ರ ಅಡಿ ವಿಚಾರಣೆಗೊಳಪಡಿಸಲು ಅಪರಾಧ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 196ರ ಅಡಿ ಲೆಫ್ಟಿನೆಂಟ್ ಗವರ್ನರ್ ಅನುಮತಿ ನೀಡಿದ್ದರು.

14 ವರ್ಷ ಹಳೆಯ ಪ್ರಕರಣ:
ಸುಶೀಲ್ ಪಂಡಿತ್ ನೀಡಿದ ದೂರಿನ ಹಿನ್ನೆಲೆ ದೆಹಲಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ರಾಯ್ ಮತ್ತು ಡಾ. ಹುಸೇನ್ ವಿರುದ್ಧ ಅಕ್ಟೋಬರ್ 2010ರಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಮತ್ತು ದೆಹಲಿ ವಿಶ್ವವಿದ್ಯಾಲಯದ ಉಪನ್ಯಾಸಕ ಸೈಯದ್ ಅಬ್ದುಲ್ ರಹಮಾನ್ ಗೀಲಾನಿ ಇಬ್ಬರೂ ವಿಚಾರಣೆಯ ಅವಧಿಯಲ್ಲಿ ಸಾವನ್ನಪ್ಪಿದ್ದಾರೆ.
https://twitter.com/the_hindu/status/1801604611549045014
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...