Homeಮುಖಪುಟಮದ್ಯಸೇವನೆಗೆ ವಯೋಮಿತಿ: 25 ರಿಂದ 21ಕ್ಕೆ ಇಳಿಸಿದ ದೆಹಲಿ ಸರ್ಕಾರ

ಮದ್ಯಸೇವನೆಗೆ ವಯೋಮಿತಿ: 25 ರಿಂದ 21ಕ್ಕೆ ಇಳಿಸಿದ ದೆಹಲಿ ಸರ್ಕಾರ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮದ್ಯಸೇವನೆ ಮಾಡಲು ಇದ್ದ ಕಾನೂನುಬದ್ಧ ವಯೋಮಿತಿಯನ್ನು 25 ರಿಂದ 21 ಕ್ಕೆ ಇಳಿಸುವುದಾಗಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸೋಮವಾರ ಘೋಷಿಸಿದ್ದಾರೆ. ಜೊತೆಗೆ ದೆಹಲಿಯಲ್ಲಿ ಯಾವುದೇ ಹೊಸ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದೂ ಹೇಳಿದ್ದಾರೆ.

ದೆಹಲಿಯಲ್ಲಿ ಮದ್ಯಪಾನ ಮಾಡಲು ಇರುವ ಕಾನೂನುಬದ್ಧ ವಯಸ್ಸು ಇನ್ನು ಮುಂದೆ 21 ಆಗಿರುತ್ತದೆ. ದೆಹಲಿಯಲ್ಲಿ ಇನ್ನು ಯಾವುದೇ ಸರ್ಕಾರಿ ಮದ್ಯದಂಗಡಿಗಳು ಇರುವುದಿಲ್ಲ. ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ಹೊಸ ಮದ್ಯದಂಗಡಿಗಳನ್ನು  ಸರ್ಕಾರದಿಂದ ತೆರೆಯಲಾಗುವುದಿಲ್ಲಎಂದು ಸಿಸೋಡಿಯಾ ಹೇಳಿದ್ದಾರೆ.

ದೆಹಲಿಯಲ್ಲಿ ಹೊಸ ಅಬಕಾರಿ ನೀತಿಯಲ್ಲಿ ಮಾಡಿರುವ ಬದಲಾವಣೆಗಳನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ ಅವರು “ಹೊಸ ಅಬಕಾರಿ ನೀತಿಯನ್ನು ಸಚಿವರ ಶಿಫಾರಸುಗಳ ಆಧಾರದ ಮೇಲೆ ಕ್ಯಾಬಿನೆಟ್ ಅಂಗೀಕರಿಸಿದೆ. ಪ್ರಸ್ತುತ ದೆಹಲಿಯಲ್ಲಿ ಶೇಕಡಾ 60 ರಷ್ಟು ಮದ್ಯದಂಗಡಿಗಳನ್ನು ಸರ್ಕಾರ ನಡೆಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲ’ ಪೋಸ್ಟರ್: ಹಿಂದೂ ಯುವ ವಾಹಿನಿ ಸದಸ್ಯರ ಮೇಲೆ FIR

“ಮದ್ಯದ ಅಂಗಡಿಗಳ ಸಮನಾದ ವಿತರಣೆಯನ್ನು ಸರ್ಕಾರ ಖಚಿತಪಡಿಸುತ್ತದೆ. ಇದರಿಂದ ಮದ್ಯ ಮಾಫಿಯಾವನ್ನು ವ್ಯಾಪಾರದಿಂದ ಹೊರಹಾಕಲಾಗುತ್ತದೆ. ಅಬಕಾರಿ ನೀತಿಯ ಸುಧಾರಣೆಗಳ ಬಳಿಕ ಇಲಾಖೆಯಲ್ಲಿ ಶೇಕಡಾ 20 ರಷ್ಟು ಆದಾಯದ ಬೆಳವಣಿಗೆಯನ್ನು ಅಂದಾಜಿಸಲಾಗಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸರ್ಕಾರ ರಚಿಸಿದ ತಜ್ಞರ ಸಮಿತಿಯು ಡಿಸೆಂಬರ್‌ನಲ್ಲಿ ಕಾನೂನುಬದ್ಧ ಮದ್ಯಸೇವನೆ ವಯಸ್ಸನ್ನು 21 ಕ್ಕೆ ಬದಲಾಯಿಸುವಂತೆ ಶಿಫಾರಸು ಮಾಡಿತ್ತು.

ಮುಂಬೈನಂತಹ ಇತರ ನಗರಗಳಲ್ಲಿ, 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಆಲ್ಕೋಹಾಲ್ ಪ್ರಮಾಣ ಜಾಸ್ತಿಯಿರುವ ಮದ್ಯವನ್ನು ಮಾತ್ರ ನಿಷೇಧಿಸಲಾಗಿದೆ, ಆದರೆ ವೈನ್ ಮತ್ತು ಬಿಯರ್ ಸೇವನೆಗೆ 21 ವಯೋಮಿತಿಯವರಿಗೂ ಅನುಮತಿಸಲಾಗಿದೆ. ಪ್ರಮುಖ ಜಾಗತಿಕ ನಗರಗಳಾದ ನ್ಯೂಯಾರ್ಕ್ ಮತ್ತು ಲಂಡನ್ನಲ್ಲಿ, ಮದ್ಯಸೇವನೆ ವಯೋಮೀತಿ ಕ್ರಮವಾಗಿ 21 ಮತ್ತು 18 ಆಗಿದೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...