Homeಮುಖಪುಟಪ್ರಚೋದನಕಾರಿ ಭಾಷಣ ಪ್ರಕರಣ: ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ರಾಜ್ಯಪಾಲರಿಂದ ಅನುಮೋದನೆ

ಪ್ರಚೋದನಕಾರಿ ಭಾಷಣ ಪ್ರಕರಣ: ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ರಾಜ್ಯಪಾಲರಿಂದ ಅನುಮೋದನೆ

- Advertisement -
- Advertisement -

2010ರಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ಲೇಖಕಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಶೇಖ್ ಶೋಕತ್ ಹುಸೇನ್ ಅವರನ್ನು ವಿಚಾರಣೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಮಂಗಳವಾರ ಅನುಮತಿ ನೀಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ರಾಯ್ ಮತ್ತು ಹುಸೇನ್ ವಿರುದ್ಧ ಐಪಿಸಿ ಸೆಕ್ಷನ್ 153A, 153B ಮತ್ತು 505 ರ ಅಡಿಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ಸೆಕ್ಷನ್ 153A ಎಂದರೆ ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಪೂರ್ವಾಗ್ರಹ ಪಡಿಸುವ ಕಾರ್ಯಗಳನ್ನು ಮಾಡುವುದಾಗಿದೆ. ಸೆಕ್ಷನ್ 153B ಎಂದರೆ ಆಪಾದನೆಗಳು, ರಾಷ್ಟ್ರೀಯ-ಏಕೀಕರಣಕ್ಕೆ ಪ್ರತಿಕೂಲವಾದ ಪ್ರತಿಪಾದನೆಗಳನ್ನೊಳಗೊಂಡಿದೆ. ಸೆಕ್ಷನ್ 505 ಶಾಂತಿಯ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ವ್ಯವಹರಿಸುತ್ತದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 196ರ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಇದು ದ್ವೇಷ ಭಾಷಣ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ, ದ್ವೇಷದ ಅಪರಾಧಗಳು, ದೇಶದ್ರೋಹ, ಮತ್ತು ದ್ವೇಷವನ್ನು ಉತ್ತೇಜಿಸುವ ಅಪರಾಧಗಳಲ್ಲಿ ಕಾನೂನು ಕ್ರಮ ಜರುಗಿಸುವ ಪ್ರಕರಣವಾಗಿದೆ.

ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಎಂದು ಗುರುತಿಸಲಾದ ಸುಶೀಲ್ ಪಂಡಿತ್ ಅವರು ಅಕ್ಟೋಬರ್ 28, 2010 ರಂದು ಸಲ್ಲಿಸಿದ ದೂರಿನ ಆಧಾರದ ಮೇಲೆ ರಾಯ್ ಮತ್ತು ಹುಸೇನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅಕ್ಟೋಬರ್ 21, 2010 ರಂದು ”ಆಜಾದಿ – ಏಕೈಕ ಮಾರ್ಗ” ಎಂಬ ಬ್ಯಾನರ್ ಅಡಿಯಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ವಿವಿಧ ಭಾಷಣಕಾರರು ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ಪಂಡಿತ್ ಆರೋಪಿಸಿದ್ದಾರೆ.

ಈ ಸಮಾವೇಶದಲ್ಲಿ ”ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಿಸುವ ಬಗ್ಗೆ ಚರ್ಚಿಸಲಾಗಿದೆ, ಇದು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರಬಹುದು” ಎಂದು ಅವರು ಆರೋಪಿಸಿದ್ದಾರೆ.

”ಕಾಶ್ಮೀರವು ಎಂದಿಗೂ ಭಾರತದ ಭಾಗವಾಗಿರಲಿಲ್ಲ, ಅದು ಭಾರತೀಯ ಸೇನೆಯಿಂದ ಬಲವಂತವಾಗಿ ಆಕ್ರಮಿಸಿಕೊಂಡಿದೆ ಮತ್ತು ಭಾರತದಿಂದ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಸ್ವತಂತ್ರಗೊಳಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು” ಎಂದು ರಾಯ್ ಹೇಳಿರುವುದಾಗಿ ಪಂಡಿತ್ ದೂರಿದ್ದಾರೆ.

ಅವರ ದೂರಿನಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಸಯ್ಯದ್ ಅಲಿ ಶಾ ಗಿಲಾನಿ ಮತ್ತು ದೆಹಲಿ ವಿಶ್ವವಿದ್ಯಾಲಯದ ಉಪನ್ಯಾಸಕ ಸೈಯದ್ ಅಬ್ದುಲ್ ರಹಮಾನ್ ಗಿಲಾನಿ ಅವರ ಹೆಸರೂ ಇದೆ, ಅವರು ಇಬ್ಬರೂ ಇದೀಗ ಜೀವಂತವಾಗಿಲ್ಲ.

ರಾಯ್ ಮತ್ತು ಹುಸೇನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 13 ರ ಅಡಿಯಲ್ಲಿ ದೆಹಲಿ ಪೊಲೀಸರು ಅನುಮತಿ ಕೋರಿದ್ದಾರೆ. ಆದರೆ ಅವರ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯ ಹಿಜಾಬ್ ಹರಿದು ಹಾಕಿದ್ದ ಶಿಕ್ಷಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...