Homeಮುಖಪುಟಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

- Advertisement -
- Advertisement -

ನಿಷೇಧಿತ ಭಯೋತ್ಪಾದಕ ಸಂಘಟನೆ ‘ಸಿಖ್ಸ್ ಫಾರ್ ಜಸ್ಟೀಸ್’ ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಶಿಫಾರಸು ಮಾಡಿದ್ದಾರೆ

ಎಎಪಿಯು 1993ರ ದೆಹಲಿ ಬಾಂಬ್‌ ಸ್ಪೋಟ ಪ್ರಕರಣದ ಅಪರಾಧಿ ದೇವೇಂದ್ರ ಪಾಲ್ ಭುಲ್ಲರ್ ಬಿಡುಗಡೆಗೆ ಅನುಕೂಲವಾಗುವಂತೆ ಉಗ್ರ ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಅಮರಿಕ ಡಾಲರ್ ಹಣ ಪಡೆದಿದೆ ಎಂಬ ದೂರನ್ನು ಸಕ್ಸೇನಾ ಅವರು ಸ್ವೀಕರಿಸಿದ್ದಾರೆ ಎಂದು ಕೇಂದ್ರ ಗೃಹ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ರಾಜ್ಯಪಾಲರ ಕಾರ್ಯದರ್ಶಿ ತಿಳಿಸಿದ್ದಾರೆ.

ಪತ್ರದಲ್ಲಿ 2014ರಲ್ಲಿ ನ್ಯೂಯಾರ್ಕ್‌ನ ಗುರುದ್ವಾರ ರಿಚ್‌ಮಂಡ್ ಹಿಲ್ಸ್‌ನಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು  ಖಲಿಸ್ತಾನಿ ಪರ ಸಿಖ್ಖರ ನಡುವೆ ರಹಸ್ಯ ಸಭೆ ನಡೆದಿದೆ. ಅರವಿಂದ್ ಕೇಜ್ರಿವಾಲ್ ಅವರು ದೇಣಿಗೆಗೆ ಬದಲಾಗಿ ಭುಲ್ಲರ್ ಬಿಡುಗಡೆಗೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಪತ್ರದ ಪ್ರಕಾರ, ಎಎಪಿ ಕಾರ್ಯಕರ್ತ ಮುನೀಶ್ ಕುಮಾರ್ ರೈಜಾಡಾ ಅವರು ರಿಚ್ಮಂಡ್ ಹಿಲ್ ಗುರುದ್ವಾರದಲ್ಲಿ ಸಿಖ್ ನಾಯಕರನ್ನು ಅರವಿಂದ್ ಕೇಜ್ರಿವಾಲ್ ಭೇಟಿಯಾದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಕೇಜ್ರಿವಾಲ್ ಅವರು ಖಲಿಸ್ತಾನ್ ಪರ ಸಿಖ್ ನಾಯಕರೊಂದಿಗೆ ಗೌಪ್ಯ ಸಭೆ ನಡೆಸಿದರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಇದಲ್ಲದೆ ಕೇಜ್ರಿವಾಲ್ ಅವರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದು ಭುಲ್ಲರ್‌ಗೆ ಕ್ಷಮಾದಾನ ಕೋರಿದ್ದಾರೆ ಎಂದು ಆಪಾದಿಸಲಾಗಿದೆ.

ದೂರುದಾರರು ಸಲ್ಲಿಸಿರುವ ಎಲೆಕ್ಟ್ರಾನಿಕ್ ಸಾಕ್ಷ್ಯಗಳಿಗೆ ವಿಧಿವಿಜ್ಞಾನ ಪ್ರಯೋಗಾಲಯದ ಪರೀಕ್ಷೆ ಸೇರಿದಂತೆ ತನಿಖೆಯ ಅಗತ್ಯವಿದೆ ಎಂದು ಸಕ್ಸೇನಾ ಹೇಳಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆಯಿಂದ ರಾಜಕೀಯ ದೇಣಿಗೆ ಪಡೆದ ಆರೋಪದಲ್ಲಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ದೂರು ಸಲ್ಲಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಕುರಿತು ನಾಳೆ ಸುಪ್ರೀಂಕೋರ್ಟ್‌ ಮಹತ್ವದ ನಿರ್ಧಾರ ಪ್ರಕಟಿಸಲಿದೆ. ಈ ಮಧ್ಯೆ ಈ ಬೆಳವಣಿಗೆ ನಡೆದಿದೆ.

ಇದನ್ನು ಓದಿ: ಸುಳ್ಳು ಸುದ್ದಿ, ದ್ವೇಷ ಹಬ್ಬಿಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ವಿರುದ್ಧ ಚು.ಆಯೋಗಕ್ಕೆ ದೂರು ನೀಡಿದ ನಿಯೋಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಿಬಿಐ, ಜಾರಿ ನಿರ್ದೇಶನಾಲಯವನ್ನು ಮುಚ್ಚಬೇಕು: ಇಂಡಿಯಾ ಮೈತ್ರಿ ಕೂಟದ ಮುಂದೆ ಅಖಿಲೇಶ್ ಯಾದವ್ ಪ್ರಸ್ತಾಪ

0
ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಇಲಾಖೆಗಳು ಅಗತ್ಯವಿಲ್ಲ ಅವುಗಳನ್ನು ಮುಚ್ಚಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದು, ಈ ಬಗ್ಗೆ ಇಂಡಿಯಾ ಮೈತ್ರಿಕೂಟದ ನಾಯಕರ ಮುಂದೆ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ. ಸಿಬಿಐ ಮತ್ತು...