ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ಬಿಜೆಪಿ ನಕಲಿ ಮತದಾರರನ್ನು ಬಳಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಆರೋಪಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ. ದೆಹಲಿ & ಮಹಾರಾಷ್ಟ್ರ ಚುನಾವಣೆಯಲ್ಲಿ
ಬಿಜೆಪಿ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ವ್ಯಕ್ತಿಗಳನ್ನು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗೆ ಸೇರಿಸಲು ಅಸೋಸಿಯೇಷನ್ ಆಫ್ ಬಿಲಿಯನ್ ಮೈಂಡ್ಸ್ ಮತ್ತು ಇಂಡಿಯಾ 360 ಎಂಬ ಎರಡು ಸಂಸ್ಥೆಗಳನ್ನು ನೇಮಿಸಿಕೊಂಡಿದೆ ಎಂದು ಅವರು ಇದೇ ವೇಳೆ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, “ಈಗ ಬೆಕ್ಕು ಚೀಲದಿಂದ ಹೊರಬಂದಿದೆ. ಚುನಾವಣಾ ಆಯೋಗದ ಆಶೀರ್ವಾದದೊಂದಿಗೆ ಬಿಜೆಪಿ ಮತದಾರರ ಪಟ್ಟಿಯನ್ನು ಹೀಗೆಯೇ ತಿದ್ದುಪಡಿ ಮಾಡಿ ನಿರ್ವಹಿಸುತ್ತಿದೆ. ಇದು ಈಗ ಬಹಿರಂಗಗೊಂಡಿದೆ. ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರನ್ನು ಸೇರಿಸುವುದನ್ನು ನಿಲ್ಲಿಸುವುದು ನಿಮ್ಮ ಜವಾಬ್ದಾರಿ.” ಎಂದು ಅವರು ಹೇಳಿದ್ದಾರೆ.
2026 ರಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಈ ಮತದಾರರ ತಿದ್ದುಪಡಿಯನ್ನು ನಡೆಸಲು ತಾನು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದ್ದಾರೆ. ದೆಹಲಿ & ಮಹಾರಾಷ್ಟ್ರ ಚುನಾವಣೆಯಲ್ಲಿ
“ಬಿಜೆಪಿ ತನ್ನ ದುಷ್ಟ ಯೋಜನೆಗಳಲ್ಲಿ ಯಶಸ್ವಿಯಾದರೆ ಅದು ಬಂಗಾಳದ ಸಂಸ್ಕೃತಿಯ ಅಂತ್ಯವಾದಂತೆ. ನಾವು ಅತಿಥಿಗಳನ್ನು ಗೌರವಿಸುತ್ತೇವೆ, ಆದರೆ ಹೊರಗಿನವರು ಬಂಗಾಳವನ್ನು ಆಕ್ರಮಿಸಿಕೊಳ್ಳಲು ನಾವು ಬಿಡುವುದಿಲ್ಲ. ಇದು ದೆಹಲಿ ಅಥವಾ ಮಹಾರಾಷ್ಟ್ರವಲ್ಲ. ಈ ಕೃತ್ಯವನ್ನು ಚುನಾವಣಾ ಆಯೋಗದ ಆಶೀರ್ವಾದದಿಂದ ಮಾಡಲಾಗುತ್ತಿದೆ.” ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.
ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗಳನ್ನು ಗೆದ್ದ ನಂತರ ಬಿಜೆಪಿ ಪಶ್ಚಿಮ ಬಂಗಾಳದ ಮೇಲೆ ಕಣ್ಣಿಟ್ಟಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದು, ಆದರೆ ತಮ್ಮ ಪಕ್ಷವು ಅದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸುತ್ತದೆ ಎಂದು ಹೇಳಿದ್ದಾರೆ. “ಮತ್ತೊಮ್ಮೆ, ‘ಖೇಲಾ ಹೋಬೆ’ [ಆಟಗಳನ್ನು ಆಡಲಾಗುತ್ತದೆ]. ಈ ಬಾರಿ ನಾನು ಕಾರ್ಯಕರ್ತರನ್ನು ಹೆಚ್ಚು ಶ್ರಮವಹಿಸಿ ಕೆಲಸ ಮಾಡಲು ಕೇಳಿಕೊಳ್ಳುತ್ತೇನೆ.” ಎಂದು ಅವರು ಹೇಳಿದ್ದಾರೆ.
ಆತುರಾತುರದಿಂದ ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸುವ ಮೂಲಕ ಬಿಜೆಪಿ ದೇಶದಲ್ಲಿ ಚುನಾವಣಾ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಹೊಸ ಕಾನೂನಿನಡಿಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಿರ್ಧರಿಸುವವರೆಗೆ ನೇಮಕಾತಿಯನ್ನು ಮುಂದೂಡುವಂತೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಕೇಳಿದ್ದರು. ಅದಾಗ್ಯೂ, ಆಯ್ಕೆ ಸಮಿತಿಯ ಸಭೆಯ ಕೆಲವೇ ಗಂಟೆಗಳಲ್ಲಿ ಜ್ಞಾನೇಶ್ ಕುಮಾರ್ ಅವರ ನೇಮಮ ಮಾಡಿತ್ತು.


