Homeಕರ್ನಾಟಕದೆಹಲಿಯಲ್ಲಿ ಮಹಿಳೆಯರಿಗೆ ಮೆಟ್ರೊ ಮತ್ತು ಬಸ್ ಪ್ರಯಾಣ ಫುಲ್ ಫ್ರಿ : ಕೇಜ್ರಿವಾಲ್ 

ದೆಹಲಿಯಲ್ಲಿ ಮಹಿಳೆಯರಿಗೆ ಮೆಟ್ರೊ ಮತ್ತು ಬಸ್ ಪ್ರಯಾಣ ಫುಲ್ ಫ್ರಿ : ಕೇಜ್ರಿವಾಲ್ 

- Advertisement -
- Advertisement -
| ನಾನುಗೌರಿ ಡೆಸ್ಕ್ |
ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ಮತ್ತು ಭದ್ರತೆಯ ದೃಷ್ಟಿಯಿಂದ ಇನ್ನು ಮುಂದೆ ದೆಹಲಿಯಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತವಾಗಿ ಮೆಟ್ರೊ ಮತ್ತು ಬಸ್ ಪ್ರಯಾಣ ಸೇವೆ ಒದಗಿಸಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

 

ನವದೆಹಲಿಯಲ್ಲಿ ಜೂನ್ 1ರ ಶನಿವಾರ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆಯ ಕುರಿತು ಜೂನ್ 3 ರಂದು ಸಾರ್ವಜನಿಕವಾಗಿ ನಿರ್ಧಾರ ಪ್ರಕಟಿಸಲಿದ್ದೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯ ಸಾರಿಗೆ ಸಚಿವರಾದ ಕೈಲಾಸ್ ಗೆಹ್ಲೊಟ್‍ರವರು ಈ ಕುರಿತು ಹಲವಾರು ಸಭೆಗಳನ್ನು ನಡೆಸಿ ಹಲವು ಆಯಾಮಗಳಲ್ಲಿ ಚರ್ಚಿಸಿಯೇ ಈ ನಿರ್ಧಾರಕ್ಕೆ ಬಂದಿದ್ದಾರೆನ್ನಲಾಗಿದೆ

ದೆಹಲಿಯ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಯಾವುದೇ ತೊಂದರೆಗಳಿದ್ದರೂ, ಡೆಲ್ಲಿ ಮೆಟ್ರೊ ದಲ್ಲಿ ಈ ನೀತಿ ಜಾರಿಗೆ ತರುವುದು ಕಷ್ಟ ಎನ್ನಲಾಗುತ್ತಿದೆ. ಏಕೆಂದರೆ ದೆಹಲಿ ಮೆಟ್ರೊಗೆ ದೆಹಲಿ ಸರ್ಕಾರ 50% ಅನುದಾನ ನೀಡಿದರೆ ಇನ್ನುಳಿದ 50% ಅನುದಾನವನ್ನು ಕೇಂದ್ರ ಸರ್ಕಾರ ಒದಗಿಸುತ್ತಿದ್ದು ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.

ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ವಿಚಾರಗಳಿಗೆ ತಿಕ್ಕಾಟವಿರುವುದರಿಂದ ಡೆಲ್ಲಿ ಮೆಟ್ರೊದಲ್ಲಿ ಉಚಿತ ಪ್ರಯಾಣ ನೀತಿ ಜಾರಿಯಾಗುವುದು ಅಷ್ಟು ಸುಲಭವಲ್ಲ ಎನ್ನುವುದು ದೆಹಲಿಯ ಹಿರಿಯ ಅಧಿಕಾರಿಯೊಬ್ಬರ ಅಭಿಪ್ರಾಯವಾಗಿದೆ.

ಹಾಗೆಯೇ ದೆಹಲಿ ಸರ್ಕಾರದ ಜೊತೆ ಮಾತುಕತೆಯಿಲ್ಲದೇ ದೆಹಲಿ ವಿದ್ಯುಚ್ಛಕ್ತಿ ನಿಯಂತ್ರಣ ಪ್ರಾಧಿಕಾರವು (ಡಿಇಆರ್‍ಸಿ) ಕಳೆದ ವರ್ಷ ಫಿಕ್ಸಡ್ ಚಾರ್ಜ್ ಅನ್ನು ಏರಿಕೆ ಮಾಡಿದೆ. ಈ ಕುರಿತು ದೆಹಲಿ ವಿದ್ಯುಚ್ಛಕ್ತಿ ನಿಯಂತ್ರಣ ಪ್ರಾಧಿಕಾರಕ್ಕೆ ಏರಿಕೆಯನ್ನು ಇಳಿಸಿ ಹಳೆಯ ಮಾದರಿಯನ್ನು ಅಳವಡಿಸಬೇಕೆಂದು ಒತ್ತಾಯಿಸಿದ್ದೇವೆ. ಮುಂದಿನ ತಿಂಗಳು ಜಾರಿಗೆ ಬರುವ ಸಂಭವವಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...