Homeಮುಖಪುಟದೆಹಲಿಯಲ್ಲಿ ಜಲಕ್ಷಾಮ: ಹರಿಯಾಣದಿಂದ ಹೆಚ್ಚುವರಿ ನೀರಿಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

ದೆಹಲಿಯಲ್ಲಿ ಜಲಕ್ಷಾಮ: ಹರಿಯಾಣದಿಂದ ಹೆಚ್ಚುವರಿ ನೀರಿಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

- Advertisement -
- Advertisement -

ದೆಹಲಿಯಲ್ಲಿ ತೀವ್ರ ಜಲಕ್ಷಾಮದ ಹಿನ್ನೆಲೆ ಹರಿಯಾಣದಿಂದ ಹೆಚ್ಚುವರಿ ನೀರು ಹರಿಸುವಂತೆ ಆಗ್ರಹಿಸಿ ಸಚಿವೆ ಅತಿಶಿ ಇಂದಿನಿಂದ (ಜೂನ್ 21) ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ, ಎಎಪಿ ಸಂಸದ ಸಂಜಯ್ ಸಿಂಗ್ ಹಾಗೂ ಸಚಿವ ಸೌರಭ್ ಭಾರದ್ವಾಜ್ ಅವರು ಅತಿಶಿಗೆ ಸಾಥ್‌ ನೀಡಿದ್ದಾರೆ.

ಉಪವಾಸ ಸತ್ಯಾಗ್ರಹ ಪ್ರಾರಂಭಿಸುವ ಮುನ್ನ ಅತಿಶಿ, ಸುನೀತಾ ಕೇಜ್ರಿವಾಲ್, ಸಂಜಯ್ ಸಿಂಗ್ ಮತ್ತು ಇತರರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿಯ ಸಮಾಧಿಗೆ ಗೌರವ ನಮನ ಸಲ್ಲಿಸಿದರು.

ಇಂದು ಮುಂಜಾನೆ, ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಅತಿಶಿ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುವ ಮುನ್ನ ಕೇಜ್ರಿವಾಲ್ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ.

“ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಯ ಬಾಕಿ ನೀರನ್ನು ಬಿಡುಗಡೆ ಮಾಡುತ್ತಿಲ್ಲ. ಅನ್ಯಾಯದ ವಿರುದ್ಧ ಹೋರಾಡಬೇಕಾದರೆ ಸತ್ಯಾಗ್ರಹದ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಎಂದು ಮಹಾತ್ಮ ಗಾಂಧೀಜಿ ಬೋಧಿಸಿದ್ದಾರೆ” ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಅತಿಶಿ ಹೇಳಿದ್ದಾರೆ.

ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಅತಿಶಿ, ರಾಷ್ಟ್ರ ರಾಜಧಾನಿಯಲ್ಲಿ ಉಲ್ಬಣಗೊಂಡಿರುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು ಮಧ್ಯಪ್ರವೇಶಿಸಬೇಕೆಂದು ಕೋರಿದ್ದರು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿರುವ ಅತಿಶಿ “ದೆಹಲಿಯ 28 ಲಕ್ಷ ಜನರು ನೀರಿನ ಕೊರತೆಯಿಂದ ಬಳಲುತ್ತಿದ್ದಾರೆ. ಪ್ರಧಾನಿ ಮೋದಿ ಹರಿಯಾಣ ಅಥವಾ ಬೇರೆ ಎಲ್ಲಿಂದಲಾದರೂ ದೆಹಲಿಯ ಜನತೆಗೆ ನೀರು ತರಬೇಕು” ಎಂದು ಆಗ್ರಹಿಸಿದ್ದಾರೆ.

“ನಿನ್ನೆ ಹರಿಯಾಣ ದೆಹಲಿಗೆ 613 ಎಂಜಿಡಿ ಬದಲು 513 ಎಂಜಿಡಿ ನೀರು ಬಿಡುಗಡೆ ಮಾಡಿದೆ. ಒಂದು ಎಂಜಿಡಿ ಅಂದರೆ ನೀರು 28,500 ಜನರಿಗೆ ಸಾಕಾಗುತ್ತದೆ. ಅಂದರೆ 28 ಲಕ್ಷಕ್ಕೂ ಹೆಚ್ಚು ಜನರ ನೀರನ್ನು ಹರಿಯಾಣ ಬಿಡುಗಡೆ ಮಾಡಲು ಬಾಕಿಯಿದೆ” ಎಂದಿದ್ದಾರೆ.

ಈ ನಡುವೆ, ಆಪಾದಿತ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರೂಸ್ ಅವೆನ್ಯೂ ಕೋರ್ಟ್ ಅರವಿಂದ್ ಕೇಜ್ರಿವಾಲ್‌ಗೆ ನೀಡಿದ್ದ ಜಾಮೀನನ್ನು ದೆಹಲಿ ಹೈಕೋರ್ಟ್ ಶುಕ್ರವಾರ (ಜೂನ್ 21) ತಡೆ ಹಿಡಿದಿದೆ.

“ಹೈಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಳ್ಳುವವರೆಗೆ ಜಾಮೀನಿಗೆ ತಡೆ ನೀಡಲಾಗಿದೆ. ಹೈಕೋರ್ಟ್ ಪ್ರಕರಣವನ್ನು ವಿಚಾರಣೆ ಮಾಡುವವರೆಗೆ ವಿಚಾರಣಾ ನ್ಯಾಯಾಲಯದ (ರೂಸ್ ಅವೆನ್ಯೂ) ಮುಂದೆ ಯಾವುದೇ ಪ್ರಕ್ರಿಯೆಗಳು ನಡೆಯುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ‘ಯುಜಿಸಿ-ನೆಟ್’ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಯಾವಾಗ? ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...