Homeಮುಖಪುಟದೆಹಲಿ: ದಲಿತ ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ, ಮ್ಯಾಜಿಸ್ಟೀರಿಯಲ್ ತನಿಖೆಗೆ ಕೇಜ್ರಿವಾಲ್ ಆದೇಶ

ದೆಹಲಿ: ದಲಿತ ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ, ಮ್ಯಾಜಿಸ್ಟೀರಿಯಲ್ ತನಿಖೆಗೆ ಕೇಜ್ರಿವಾಲ್ ಆದೇಶ

- Advertisement -
- Advertisement -

ದೆಹಲಿಯ ಒಂಬತ್ತು ವರ್ಷದ ದಲಿತ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಕರಣವನ್ನು ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗುತ್ತದೆ ಎಂದಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

“ನಮ್ಮ ಮೃತ ಬಾಲಕಿ ಮರಳಿ ಬರಲಾರಳು. ಕುಟುಂಬಕ್ಕೆ ಆಗಿರುವ ಅನ್ಯಾಯ ದುರದೃಷ್ಟಕರ. ಕುಟುಂಬಕ್ಕೆ ಆಗಿರುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ, ಆದರೆ ಸರ್ಕಾರವು ಅವರಿಗೆ 10 ಲಕ್ಷ ರೂಪಾಯಿಗಳನ್ನು ಪರಿಹಾರ ನೀಡುತ್ತಿದೆ. ಜೊತೆಗೆ ಈ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸುತ್ತಿದೆ” ಎಂದು ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಘಟನೆ ನಡೆದ ನೈಋತ್ಯ ದೆಹಲಿಯ ಓಲ್ಡ್ ನಂಗಲ್ ಪ್ರದೇಶದಲ್ಲಿ ಬಾಲಕಿಯ ಪೋಷಕರು ನೂರಾರು ಸ್ಥಳೀಯರೊಂದಿಗೆ ಪ್ರತಿಭಟನೆಯನ್ನು ನಡೆಸುತ್ತಿದ್ದು, ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಕೇಜ್ರಿವಾಲ್ ಪೋಷಕರನ್ನು ಭೇಟಿ ಮಾಡಲು ಬಂದಾಗ, ಪ್ರತಿಭಟನಾಕಾರರು ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

 

ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವುದಕ್ಕೆ ಸರ್ಕಾರವು ಉನ್ನತ ವಕೀಲರನ್ನು ನೇಮಿಸುತ್ತದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

“ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ಅವಶ್ಯಕತೆಯಿದೆ. ಈ ದಿಕ್ಕಿನಲ್ಲಿ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ದೆಹಲಿಯಲ್ಲಿ ಇಂತಹ ಘಟನೆಗಳು ಸಂಭವಿಸಿದರೆ, ಅದು ವಿಶ್ವದಾದ್ಯಂತ ರಾಷ್ಟ್ರ ರಾಜಧಾನಿಯ ಬಗ್ಗೆ ಒಳ್ಳೆಯ ಸಂದೇಶ ನೀಡುವುದಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಘಟನೆಯ ಹಿನ್ನೆಲೆ:  ದೆಹಲಿಯ ಮೋಹನ್ ಲಾಲ್ ಮತ್ತು ಸುನೀತಾ ದೇವಿ ಎಂಬ ದಂಪತಿಗಳು ದಂಪತಿಗಳು 9 ವರ್ಷದ ಮಗಳೊಂದಿಗೆ ಹಳೆಯ ನಂಗಲ್ ಗ್ರಾಮದಲ್ಲಿ ಶ್ಮಶಾನದ ಮುಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ಶ್ಮಶಾನದಲ್ಲಿನ ಕೂಲರ್‌ನಲ್ಲಿ ನೀರು ತರಲು ಅಪ್ರಾಪ್ತ ಬಾಲಕಿ ಹೋಗಿದ್ದಳು. ಆದರೆ ಸಂಜೆ 6 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಅದೇ ಸಮಯಕ್ಕೆ ಶ್ಮಶಾನದಲ್ಲಿನ ಪೂಜಾರಿ ಮತ್ತು ಇತರರು ಸುನೀತಾ ದೇವಿಯವರನ್ನು ಕರೆದು ಅವರ ಮಗಳ ಮೃತದೇಹ ತೋರಿಸಿ ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೆ ಅವರು ಪೋಸ್ಟ್ ಮಾರ್ಟಂ ಮಾಡುತ್ತಾರೆ, ನಿಮ್ಮ ಮಗಳ ದೇಹವನ್ನು ಛಿದ್ರ ಛಿದ್ರ ಮಾಡುತ್ತಾರೆ. ಹಾಗಾಗಿ ಬೇಗನೇ ಶವಸಂಸ್ಕಾರ ಮಾಡೋಣ ಎಂದು ತಾಯಿ ಬಳಿ ಹೆದರಿಸಿದರು. ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಒಪ್ಪಿಗೆ ಪಡೆಯದೇ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸಂತ್ರಸ್ತ ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ತಲುಪುವ ವೇಳೆಗೆ ಮೃತ ಬಾಲಕಿಯ ಸುಟ್ಟ ಕಾಲುಗಳು ಮಾತ್ರ ಸಿಕ್ಕಿವೆ. ಸ್ಥಳೀಯರಿಂದ ಪ್ರತಿಭಟನೆ ನಡೆದ ನಂತರ ಪೊಲೀಸರು FSL ತಂಡವನ್ನು ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೂಜಾರಿ ಸೇರಿದಂತೆ ಇತರ ಮೂವರ ಮೆಲೆ FIR ದಾಖಲಿಸಿ, ಬಂಧಿಸಿದ್ದಾರೆ. ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕರು ದಲಿತ ಬಾಲಕಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ಇದನ್ನೂ ಓದಿ: ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Seriously sad issues recently in up and Delhi..
    But the news editor at the bottom says Mr Rahul Gandhi had deeply condemned against victims..very good support..but why only Rahul Gandhi regrets the issues. As if know one is sad of the issues..
    Do u feel our Indian pm Mr Modi is not sad of the issues and want the victims under bars?
    Hope he also regrets not to repeat the above crimes anywere in India.
    Stop advertising false leaders who made divisions by castes ..for vote bank..instead teaching us Indians from 60 years..politicians failed in educating Indian minds as brothers and sisters..instead planted castizem for democracy.
    Some opposes for all good or bad …targeting personally…even media is as bad as bad politicians.

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...