Homeಮುಖಪುಟದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

ದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡು ಬಂದಿದ್ದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಎಎಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮತ ಎಣಿಕೆ ಆರಂಭವಾಗಿ 11.45ರ ವೇಳೆಗೆ ಎಎಪಿ 250 ವಾರ್ಡ್‌ಗಳಲ್ಲಿ 132ರಲ್ಲಿ ಮುನ್ನಡೆ ಸಾಧಿಸಿದೆ. ಆರಂಭದಲ್ಲೇ ಹಲವು ಬಾರಿ ಎಎಪಿಯನ್ನು ಹಿಂದಿಕ್ಕಿದ ಬಿಜೆಪಿ ಈಗ 104 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಚುನಾವಣಾ ಆಯೋಗದಿಂದ 115 ಸ್ಥಾನಗಳ ಫಲಿತಾಂಶ ಹೊರಬಿದ್ದಿದ್ದು, ಎಎಪಿ 67, ಬಿಜೆಪಿ 43, ಕಾಂಗ್ರೆಸ್ 4 ಮತ್ತು ಒಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಗೆಲುವಾಗಿದೆ.

ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಂತೆ ಎಎಪಿ ಸ್ವೀಪ್‌ ಮಾಡುವುದು ಕಷ್ಟಸಾಧ್ಯವಾಗಿದೆ. ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ಎಎಪಿ ನಾಯಕ ರಾಘವ್ ಚಡ್ಡಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಧಾವಿಸಿದ್ದಾರೆ. ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಸೇರಿಕೊಂಡಿದ್ದಾರೆ.

ಎಎಪಿ ಕಚೇರಿಯು ಬೆಳಿಗ್ಗೆಯಿಂದಲೇ ಬಲೂನ್‌ಗಳು ಮತ್ತು ಸಂಭ್ರಮಾಚರಣೆಯ ಪೋಸ್ಟರ್‌ಗಳಿಂದ ಕಂಗೊಳಿಸುತ್ತಿದೆ. ಒಟ್ಟು ನಾಲ್ಕು ಎಕ್ಸಿಟ್ ಪೋಲ್‌ಗಳು 155 ವಾರ್ಡ್‌ಗಳಲ್ಲಿ ಎಎಪಿ ಗೆಲುವು ಸಾಧಿಸುತ್ತದೆ ಎಂದಿವೆ. ಬಿಜೆಪಿಗೆ 84 ಸ್ಥಾನಗಳು, ಕಾಂಗ್ರೆಸ್‌ಗೆ 7 ಸ್ಥಾನಗಳು ಲಭಿಸಲಿವೆ ಎಂದು ಭವಿಷ್ಯ ನುಡಿದಿವೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದ್ದವು.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....