Homeಕರ್ನಾಟಕದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

ದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

- Advertisement -
- Advertisement -

ದೆಹಲಿಯಲ್ಲಿ ಕರ್ನಾಟಕದ ಅಲೆಮಾರಿ ಸಮುದಾಯಗಳು ನಡೆಸುತ್ತಿರುವ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ ಮೂಡಿದ್ದು, ಕಾಂಗ್ರೆಸ್‌ ಮುಖಂಡರಾದ ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದವಾಗಿದೆ ಎಂದು ಮೀಸಲಾತಿ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ಶಿಫಾರಸ್ಸಿನಂತೆ ಅಲೆಮಾರಿಗಳು ಶೇ. 1 ಪ್ರತ್ಯೇಕ ಮೀಸಲಾತಿ, ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲು ಕರ್ನಾಟಕ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.

“ಪ್ರಕ್ರಿಯೆಯ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲು ದೀಪಾವಳಿ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಮಯ್ಯ, ರಣ್‌ದೀಪ್‌ ಸುರ್ಜೇವಾಲ, ಬಿ.ಕೆ. ಹರಿಪ್ರಸಾದ್‌ ಮತ್ತು ಹೆಚ್.‌ ಸಿ ಮಹದೇವಪ್ಪನವರ ಸಮ್ಮುಖದಲ್ಲಿ ಅಲೆಮಾರಿ ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲಾಗುವುದು ಎಂಬ ಭರವಸೆ ಸಿಕ್ಕಿದೆ” ಎಂದು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 14 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಅಲೆಮಾರಿ ಸಮುದಾಯದ ಹೋರಾಟ ಇಂದು ಪರಿಹಾರದ ಕಡೆ ಮುಖಮಾಡುವ ಹಂತಕ್ಕೆ ಬಂದು ತಲುಪಿದೆ. ಅಕ್ಟೋಬರ್‌ 2ಕ್ಕೆ ದೆಹಲಿ ತಲುಪಿದ ಅಲೆಮಾರಿ ಸಮುದಾಯದ ಸುಮಾರು 600 ಜನ ಪ್ರತಿನಿಧಿಗಳು ಹಾಗೂ ಕಲಾವಿದರು ದೆಹಲಿಯ ಜಂತರ್‌ ಮಂತರಿನಲ್ಲಿ ಪ್ರತಿಭಟಿಸಿದ್ದಲ್ಲದೆ, ತಮ್ಮ ಪಾರಂಪರಿಕ ವೇಷಭೂಷಣಗಳಿಂದ ಗಮನ ಸೆಳೆದರು. ಕಾಂಗ್ರೆಸ್‌ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು.

ಎಐಸಿಸಿ ಪರವಾಗಿ ಅಲೆಮಾರಿ ನಿಯೋಗವನ್ನು ಭೇಟಿ ಮಾಡಿದ್ದ ಅಭಿಷೇಕ್‌ ದತ್ತ ಅವರು ರಾಹುಲ್‌ ಗಾಂಧಿ ಅವರು ದೇಶದಲ್ಲಿಲ್ಲ, ರಾಷ್ಟ್ರಾಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿದ್ದಾರೆ. ಕರ್ನಾಟಕದ ಅಲೆಮಾರಿಗಳ ಈ ಸಮಸ್ಯೆಯನ್ನು ನಾವು ಅವರ ಗಮನಕ್ಕೆ ತರುತ್ತೇವೆ. ನೀವು ಕರ್ನಾಟಕಕ್ಕೆ ವಾಪಸ್‌ ಹೊರಡಿ ಎಂದು ಕೇಳಿಕೊಂಡಿದ್ದರು. ಆದರೆ, ಅಂದು ಸಂಜೆ ಅಂಬೇಡ್ಕರ್‌ ಭವನದಲ್ಲಿ ನಡೆದ ಅಲೆಮಾರಿ ಸಮುದಾಯದ 59 ಜನಜಾತಿಗಳ ಸಭೆ ಈ ಕುರಿತು ʼಸರ್ಕಾರದ ಕಡೆಯಿಂದ ಸ್ಪಷ್ಟ ತೀರ್ಮಾನ ಹೊರಬರುವ ತನಕ ದೆಹಲಿ ಬಿಡುವ ಮಾತೇ ಇಲ್ಲʼ ಎಂದು ತೀರ್ಮಾನ ತೆಗೆದುಕೊಂಡಿತ್ತು. ಅಂದಿನಿಂದ ದಿ: 15.10.2025 ರವರೆಗೆ ಅಲೆಮಾರಿ ಪ್ರತಿನಿಧಿಗಳ ತಂಡವು ಎಐಸಿಸಿ ಕಚೇರಿಯ ಆವರಣದಲ್ಲಿ ನಿರಂತರ ಧರಣಿ ಸತ್ಯಾಗ್ರವನನ್ನು ಮುಂದುವರೆಸಿತ್ತು. ಕಾಂಗ್ರೆಸ್ ಹೈಕಮಾಂಡ್‌ನ ಅನೇಕ ಮುಖಂಡರುಗಳನ್ನು ಕಂಡು ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಮನವರಿಕೆ ಮಾಡಿಸುವ ಪ್ರಯತ್ನ ನಡೆಸಿತ್ತು.

ಎಐಸಿಸಿ ಕಡೆಯಿಂದ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ರಾಷ್ಟ್ರೀಯ ಘಟಕಗಳಿಗೆ ಮೇಲುಸ್ತುವಾರಿಗಳಾಗಿರುವ ಕೆ. ರಾಜು ಅವರು ಈ ಮಧ್ಯೆ ಕರ್ನಾಟಕದ ಅನೇಕ ಸಚಿವರುಗಳ ಜೊತೆ ಮಾತುಕತೆ ನಡೆಸಿದರು. ಬಿ.ಕೆ. ಹರಿಪ್ರಸಾದ್‌ ಅವರನ್ನು ಮಧ್ಯಸ್ತಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರ ಹುಡುಕಬೇಕೆಂದು ಕೋರಿದ್ದರು. ನಿನ್ನೆ ಚಂಡೀಘಡದಲ್ಲಿ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿದ್ದ ಬಿ.ಕೆ. ಹರಿಪ್ರಸಾದ ಅವರು ಸಮಸ್ಯೆಯನ್ನು ಬಗೆಹರಿಸಲು ದೆಹಲಿಯ ಎಐಸಿಸಿ ಕಚೇರಿಗೆ ವಾಪಸ್‌ ಬಂದಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಅಲೆಮಾರಿ ಪ್ರತಿನಿಧಿ ತಂಡವನ್ನು ಮಾತುಕತೆಗೆ ಕರೆದಿದ್ದರು. ಅವರೊಡನೆ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಕರ್ನಾಟಕದ ಎಂಎಲ್‌ಸಿ ಆರತಿ ಕೃಷ್ಣ ಅವರು ಸಹ ಇದ್ದರು.

“ದೆಹಲಿಗೆ ಇಂದು ಬರಬೇಕಿದ್ದ ರಾಹುಲ್‌ ಗಾಂಧಿ ಅವರು ಅವರ ತಾಯಿಯವರ ಆರೋಗ್ಯ ಏರುಪೇರಾದ್ದರಿಂದ ಅವರು ಶಿಮ್ಲಾಗೆ ಹೋಗಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವಂತೆ ನಮಗೆ ಸೂಚಿಸಿದ್ದಾರೆ. ತಡಮಾಡದೆ ಪರಿಹಾರದ ಕುರಿತು ಚರ್ಚಿಸೋಣ. ಸಮಸ್ಯೆ ಬಗೆಹರಿಯದಿದ್ದರೆ ರಾಹುಲ್‌ ಗಾಂಧಿ ಅವರ ಜೊತೆ ಸಭೆ ನಿಗದಿ ಮಾಡೋಣ” ಬಿಕೆ ಹರಿಪ್ರಸಾದ್ ತಿಳಿಸಿದ್ದಾರೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಅಲೆಮಾರಿ ಸಮುದಾಯದ ನಿಯೋಗವು ತನ್ನ ಹಕ್ಕೊತ್ತಾಯಗಳಾದ ‘ಎ’ ಗುಂಪಿನಲ್ಲಿ ಶೇ. 1 ಪ್ರತ್ಯೇಕ ಮೀಸಲಾತಿ, 49 ಅಲೆಮಾರಿ ಸಮುದಾಯಗಗಳಿಗೆ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಪರಿಣಾಮಕಾರಿ ಪ್ಯಾಕೇಜ್‌ ಬೇಕು ಎಂಬ ಹಕ್ಕೊತ್ತಾಯಗಳ ಕುರಿತು ಪ್ರಸ್ತಾಪವನ್ನು ಮುಂದಿಟ್ಟರು.

ಬಿ.ಕೆ. ಹರಿಪ್ರಸಾದ್‌ ಅವರು ಅಲ್ಲಿಂದಲೇ ಕೆ. ರಾಜು, ಗುರುದೀಪ್‌ ಸಪ್ಪಾಲ್‌, ವೇಣುಗೋಪಾಲ್‌, ಸುರ್ಜೆವಾಲ್‌ ಜಿ ಹಾಗೂ ಹೆಚ್.‌ ಸಿ. ಮಹದೇವಪ್ಪ ಅವರೊಡನೆ ದೂರವಾಣಿ ಮೂಲಕ ಕೂಲಂಕುಷವಾಗಿ ಚರ್ಚಿಸಿದರು. ಚರ್ಚೆಯ ಅಂತಿಮ ಫಲಿತಾಂಶವಾಗಿ, ಅಲೆಮಾರಿ ಸಮುದಾಯಕ್ಕೆ ಶೇ. 1 ಪ್ರತ್ಯೇಕ ಮೀಸಲಾತಿ ನೀಡಲು ಕರ್ನಾಟಕ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ. ಇದರ ಪ್ರಕ್ರಿಯೆ ಹೇಗೆ ಎಂಬ ಕುರಿತು ಮಾತ್ರ ಸಭೆಯಲ್ಲಿ ಚರ್ಚಿಸಿಕೊಳ್ಳಬೇಕಿದೆ. ವಿಶೇಷ ಪ್ಯಾಕೇಜ್‌ ಮತ್ತು 49 ಅಲೆಮಾರಿ ಸಮುದಾಯಗಗಳಿಗೆ ಮಾತ್ರ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನೂ ಮಾಡಲು ಸರ್ಕಾರ ಬದ್ಧವಿದೆ ಎಂದು ತಿಳಿದುಬಂದಿದೆ.’

ಇವೆಲ್ಲವುಗಳ ಕುರಿತು ಕುಲಂಕುಷವಾಗಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಎಐಸಿಸಿ ಕಡೆಯಿಂದ ಬಿ.ಕೆ. ಹರಿಪ್ರಸಾದ್‌, ಕೆ. ರಾಜು ಹಾಗೂ ಸುರ್ಜೆವಾಲರು ಸಹ ಇರುವಂತೆ ಕರ್ನಾಟಕ ಸರ್ಕಾರದ ಜೊತೆ ದೀಪಾವಳಿ ನಂತರದ ಮೊದಲ ವಾರದಲ್ಲೇ ಸಭೆ ನಿಗದಿ ಮಾಡಲಾಗುತ್ತದೆ. ಸಭೆ ವ್ಯವಸ್ಥೆ ಮಾಡುವ ಹೊಣೆಗಾರಿಕೆ ಬಿ.ಕೆ. ಹರಿಪ್ರಸಾದ್‌ ಅವರದಾಗಿರುತ್ತದೆ. ನಿಯೋಗದ ಜೊತೆ ದೂರವಾಣಿ ಮೂಲಕ ಮಾತನಾಡಿದ ಎಚ್.‌ಸಿ. ಮಹದೇವಪ್ಪನವರು ದಯವಿಟ್ಟು ವಾಪಾಸ್‌ ಬನ್ನಿ, ಖಂಡಿತ ಅಲೆಮಾರಿ ಸಮುದಾಯಗಳ ಸಮಸ್ಯೆ ಬಗೆಹರಿಸಿಕೊಡುತ್ತೇವೆ ಎಂದು ಕೇಳಿಕೊಂಡರು ಎಂದು ಅಲೆಮಾರಿ ಹೋರಾಟಗಾರರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಧರಣಿಯನ್ನು ಅಂತ್ಯಗೊಳಿಸಿ ಕರ್ನಾಟಕಕ್ಕೆ ವಾಪಾಸ್‌ ಆಗಲು ಕರ್ನಾಟಕ ಅಸ್ಪ್ರಷ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ತೀರ್ಮಾನಿಸಿದೆ. ಕೊಟ್ಟ ಮಾತಿನಂತೆ ಕರ್ನಾಟಕ ಸರ್ಕಾರ ಹಾಗೂ ಎಐಸಿಸಿ ಮುಖಂಡರು ನಡೆದುಕೊಳ್ಳುತ್ತಾರೆ ಎಂದು ವಿಶ್ವಾಸಿಸುತ್ತೇವೆ. ಒಂದು ವೇಳೆ ನಮ್ಮ ನಿರೀಕ್ಷೆ ಮತ್ತೆ ಹುಸಿಯಾದರೆ ಮತ್ತೆ ದೆಹಲಿಗೆ ಬರುವುದು ಖಚಿತ ಎಂದು ಸ್ಪಷ್ಟಪಡಿಸಲು ಬಯಸುತ್ತಿದ್ದೇವೆ. ಸಮುದಾಯದ ನೋವನ್ನು ಕೇಳಿಸಿಕೊಳ್ಳಲು ರಾಹುಲ್‌ ಗಾಂಧಿ ಅವರು ಭೇಟಿಗೆ ಸಮಯ ನೀಡಲೇಬೇಕು ಎಂದು ಸಹ ಮತ್ತೊಮ್ಮೆ ಒತ್ತಾಯಿಸಲು ಬಯಸುತ್ತೇವೆ ಎಂದು ಹೋರಾಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ನಡೆದ ಮಾತುಕತೆಯಲ್ಲಿ ಅಲೆಮಾರಿ ಸಮುದಾಯ ಪರವಾಗಿ ಅದರ ಮುಖಂಡರುಗಳಾದ ಎ.ಎಸ್.‌ ಪ್ರಭಾಕರ್‌, ಮಂಜುನಾಥ್‌ ದಾಯತ್ಕರ್, ಬಸವರಾಜ್‌ ನಾರಾಯಣಕರ್, ಚಾವಡಿ ಲೋಕೇಶ್‌, ಮಂಡ್ಯ ರಾಜಣ್ಣ, ಸಂದೀಪ್‌ ಕುಮಾರ್‌ ದಾಸರ್‌, ಶರಣಪ್ಪ ಚನ್ನದಾಸರ್‌, ಸಿಂದೋಳು ಸಮುದಾಯದ ಹನುಮಂತು ಮುಂತಾದವರು ಭಾಗವಹಿಸಿದ್ದರು. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕರಾದ ಕರಿಯಪ್ಪ ಗುಡಿಮನಿ, ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್‌ ಶ್ರೀಧರ್‌ ಹಾಗೂ ಎದ್ದೇಳು ಕರ್ನಾಟಕದ ತಾರಾ ರಾವ್‌ ಅವರು ಸಹ ಈ ಚರ್ಚೆಗಳಲ್ಲಿ ಸಕ್ರಿಯ ಪಾತ್ರ ನಿರ್ವಹಿಸಿದರು.

ಆರ್‌ಎಸ್‌ಎಸ್‌ ಹಿಂದುತ್ವದ ಪರಿಧಿಯಲ್ಲಿ ಪರಿಶಿಷ್ಟರಿಗೆ ಸ್ಥಾನವಿಲ್ಲ: ಸಚಿವ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...