Homeಮುಖಪುಟದೆಹಲಿ ಸುಗ್ರೀವಾಜ್ಞೆ ಪ್ರಕರಣ: ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಲು ಸುಪ್ರೀಂ ಚಿಂತನೆ

ದೆಹಲಿ ಸುಗ್ರೀವಾಜ್ಞೆ ಪ್ರಕರಣ: ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಲು ಸುಪ್ರೀಂ ಚಿಂತನೆ

- Advertisement -
- Advertisement -

ದೆಹಲಿ ಆಡಳಿತಾತ್ಮಕ ಸೇವೆಗಳ ಮೇಲೆ ನಿಯಂತ್ರಣ ಸಾಧಿಸಲು ಕೇಂದ್ರ ಬಿಜೆಪಿ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ದೆಹಲಿ ಸರ್ಕಾರವು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಈ ವಿಷಯವನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಲು ಇಚ್ಚಿಸುತ್ತೇನೆ ಎಂದು ನೊಟೀಸ್ ಜಾರಿ ಮಾಡಿದೆ.

ಕಳೆದ ವಾರ, ಸುಗ್ರೀವಾಜ್ಞೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಕೇಂದ್ರವು ಈ ವರ್ಷ ಮೇ 19ರಂದು ದೆಹಲಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಕುರಿತು ಸುಗ್ರೀವಾಜ್ಞೆಯನ್ನು ಪ್ರಕಟಿಸಿತು.

ಈ ವಿಷಯದ ಮೇಲೆ ದೆಹಲಿ ಸರ್ಕಾರಕ್ಕೆ ನಿಯಂತ್ರಣವನ್ನು ನೀಡುವುದನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಪ್ರಕರಣವನ್ನು ಜುಲೈ 20ರಂದು ವಿಚಾರಣೆಗೆ ಮುಂದೂಡಲಾಗಿದೆ.

ಪ್ರತಿಪಕ್ಷಗಳು ಇದೀಗ ದೆಹಲಿ ಎಎಪಿ ಪರವಾಗಿ ನಿಂತಿದ್ದು, ಇದೀಗ ಕಾಂಗ್ರೆಸ್ ಪಕ್ಷ ಕೂಡ ಈ ಸುಗ್ರೀವಾಜ್ಞೆಯನ್ನು ವಿರೋಧಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅರವಿಂದ್ ಕೇಜ್ರಿವಾಲ್ ಅವರು ಧನ್ಯವಾದ ಅರ್ಪಿಸಿದ್ದಾರೆ. ”ಆಡಳಿತಾತ್ಮಕ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆಗೆ “ದೆಹಲಿ ಜನರೊಂದಿಗೆ ನಿಂತಿದ್ದಕ್ಕಾಗಿ” ಕಾಂಗ್ರೆಸ್ ಅಧ್ಯಕ್ಷರಿಗೆ ಧನ್ಯವಾದ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಸ್ಪರ್ಧಿಯಾಗಿದ್ದು ಈ ಬಗ್ಗೆ ಕಾಂಗ್ರೆಸ್‌ನ ನಿಲುವಿನ ಬಗ್ಗೆ ಖರ್ಗೆ ಅವರಿಗೆ ಮಾಧ್ಯಮದವರು ಕೇಳಿದಾಗ, ”ಇದು ಕೇವಲ ಒಬ್ಬ ವ್ಯಕ್ತಿಯ (ಕೇಜ್ರಿವಾಲ್) ಬಗ್ಗೆ ಅಲ್ಲ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಹೊಡೆತ ಬಿದ್ದರೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಒಂದಾಗುವುದು ಮತ್ತು ಒಟ್ಟಾಗಿ ಕೆಲಸ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಯಾವುದೇ ವ್ಯಕ್ತಿ ದೇಶಕ್ಕಿಂತ ದೊಡ್ಡವನಲ್ಲ…” ಎಂದು ಉತ್ತರಿಸಿದ್ದಾರೆ.

ಖರ್ಗೆಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ”ದೆಹಲಿಯ ಜನರ ಪರವಾಗಿ ನಿಂತಿದ್ದಕ್ಕಾಗಿ ಖರ್ಗೆ ಜಿ ಅವರಿಗೆ ಧನ್ಯವಾದಗಳು. ಈ ಸುಗ್ರೀವಾಜ್ಞೆಯು ಭಾರತ ವಿರೋಧಿ ಮತ್ತು ರಾಷ್ಟ್ರವಿರೋಧಿಯಾಗಿದೆ. ಹಾಗಾಗಿ ನಾವೆಲ್ಲಾ ಇದರ ವಿರುದ್ಧ ಹೋರಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...