Homeಮುಖಪುಟದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

ದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಹಿಂಡು ಹಿಂಡಾಗಿ ಸೇರುತ್ತಿದ್ದಾರೆ. ಕಾರ್ ಬೈಕುಗಳಲ್ಲಿ ಬೆಳಗಿನ ಜಾಗವೇ ಬಂದು ಕ್ಯೂ ಹಚ್ಚುತ್ತಿದ್ದಾರೆ. ಏಕೆಂದು ಆಶ್ಚರ್ಯವಾಗುತ್ತಿದೆಯೇ? ಮತ್ಯಾಕೂ ಅಲ್ಲ. 2019-20ನೇ ಸಾಲಿನ ದಾಖಲಾತಿ ಆರಂಭವಾಗಿದ್ದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಉತ್ಸುಕರಾಗಿ ಹೀಗೆ ಸರ್ಕಾರಿ ಶಾಲೆಗಳ ಮುಂದೆ ಜಮಾಯಿಸುತ್ತಿದ್ದಾರೆ.

ಅಷ್ಟು ಮಾತ್ರವಲ್ಲ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ತೆಗೆದುಕೊಂಡಿರುವುದುರ ವಿರುದ್ಧ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ ಕಳೆದ ವರ್ಷ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವುದನ್ನು ಪೋಷಕರಿಗೆ ಮರುಪಾವತಿ ಮಾಡಲು ಆದೇಶಿಸಿದೆ. ಹಾಗಾಗಿ ಖಾಸಗಿ ಶಾಲೆಗಳು ಆ ಶುಲ್ಕವನ್ನು ಈ ವರ್ಷದ ದಾಖಲಾತಿ ಮಾಡಿಕೊಳ್ಳುವಾಗ ಸರಿದೂಗಿಸುವುದಾಗಿ ಘೋಷಿಸಿವೆ. ಇದರಿಂದ ಹಲವಾರು ಪೋಷಕರು ಸಂತಸಗೊಂಡಿದ್ದು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ದೆಹಲಿ ಯಲ್ಲಿ ನಾಲ್ಕು ವರ್ಷದ ಹಿಂದೆ ಆಮ್ ಆದ್ಮಿ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಖಾಸಗಿ ಶಾಲೆಗಳನ್ನು ಹಿಂದಿಕ್ಕಿರುವ ಈ ಶಾಲೆಗಳು ವಿಶ್ವಮಟ್ಟದಲ್ಲಿ ಶ್ಲಾಘನೆಗೆ ಒಳಗಾಗಿವೆ. ಅಲ್ಲಿನ ವಿದ್ಯಾರ್ಥಿಗಳು ನಾಲ್ಕು ವರ್ಷಗಳಲ್ಲಿ ತಮ್ಮ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ದೇಶಕ್ಕೆ ಮಾದರಿಯಾಗಿವೆ. ಈ ಕಾರಣದಿಂದ ಬಹಳಷ್ಟು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಗಿಬೀಳುತ್ತಿದ್ದಾರೆ.

ದೆಹಲಿ ಶಾಲೆಗಳ ವಿಶೇಷವೇನು?

ಸಂತಸದಾಯಕ ಕಲಿಕೆ: 
ದೆಹಲಿಯ ಶಿಕ್ಷಕರನ್ನು ವಿದೇಶಗಳಿಗೂ ಕಳಿಸಿ ತರಬೇತಿ ನೀಡಲಾಗಿದೆ. ಪಠ್ಯಕ್ರಮವನ್ನು ಸುಧಾರಿಸಲಾಗಿದೆ. ಇದರಿಂದ ಮಕ್ಕಳು ಉತ್ಸಾಹದಿಂದ ಕಲಿಯುತ್ತಿದ್ದಾರೆ ಎಂದು ಹೇಳಲಾಗಿದೆ. ಬಿಹಾರ, ಕರ್ನಾಟಕದಿಂದಲೂ ದೆಹಲಿಗೆ ಪ್ರತಿನಿಧಿಗಳನ್ನು ಕಳಿಸಿ ಅಧ್ಯಯನ ಮಾಡಲು ಹಲವು ರಾಜ್ಯಗಳು ಉತ್ಸಾಹಕರಾಗಿದ್ದಾರೆ.

ಗುಣಮಟ್ಟದ ಮೂಲಭೂತ ಸೌಲಭ್ಯಗಳು : ಶಾಲೆಗಳಲ್ಲಿ ಸ್ಮಾರ್ಟ್ ತರಗತಿ, ವಿದ್ಯುನ್ಮಾನ ಬಿಳಿ ಫಲಕ, ಆಧುನಿಕ ಕುರ್ಚಿ-ಬೆಂಚು, ಆಧುನಿಕ ಪ್ರಯೋಗಶಾಲೆ, ಸಿಸಿಟಿವಿ ಕಣ್ಗಾವಲು, ಅಂತರ್ರಾಷ್ಟ್ರೀಯ ಮಟ್ಟದ ಆಟದ ಮೈದಾನ, ಪಠ್ಯೇತರ ಚಟುವಟಿಕೆಗೆ ವಿಶೇಷ ಕೊಠಡಿಗಳು, ಪುಸ್ತಕಾಲಯ, ಈಜುಕೊಳ, ಆಡಿಯೋ-ವೀಡಿಯೋ ವ್ಯವಸ್ಥೆಯುಳ್ಳ ಸಭಾಂಗಣ, ಇವೆಲ್ಲವೂ ಇದೆ ಎಂದರೆ ಆಶ್ಚರ್ಯವಲ್ಲವೇ? ಇವೆಲ್ಲದರ ಜೊತೆಗೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ನರ್ಸರಿ (ಶಿಶುವಿಹಾರ), ಪ್ರತಿ ತಿಂಗಳು ಮತ್ತು ವಾರ್ಷಿಕ ಶಿಕ್ಷಕ-ಪೋಷಕರ ಸಭೆಗಳು, ಬೇಸಿಗೆ ಶಿಬಿರ, ಹಿಂದುಳಿದ ಮಕ್ಕಳಿಗೆ ವಿಶೇಷ ಕಲಿಕಾ ಶಿಬಿರವನ್ನೂ ನಡೆಸಲಾಗುತ್ತಿದೆ. ಸರಕಾರಿ ಶಾಲೆಯ ಮಕ್ಕಳು ಇಂದು ತಮ್ಮ ಶಾಲೆಯನ್ನು ಅತ್ಯಂತ ಹೆಮ್ಮೆಯಿಂದ ಬೇರೆ ಮಕ್ಕಳಿಗೆ ತೋರಿಸುತ್ತಾರೆ. ಶಿಕ್ಷಕರಿಗೆ ಸಂಬಳವನ್ನು ಹೆಚ್ಚು ಮಾಡಲಾಗಿದೆ. ಇದರಿಂದ ಶಾಲೆಗಳು ಹೊಸ ಸ್ವರೂಪವನ್ನು ಪಡೆದಿದ್ದು ಪೋಷಕರನ್ನು ಆಕರ್ಷಿಸುತ್ತಿವೆ.

ಖಾಸಗಿ ಶಾಲೆಗಳನ್ನು ಹಿಂದಿಕ್ಕಿದ ಸರ್ಕಾರಿ ಶಾಲೆಗಳು:

ಇತ್ತೀಚೆಗೆ ಪ್ರಕಟಗೊಂಡ ಸಿಬಿಎಸ್‍ಇ ಶಾಲೆಯ 12ನೆಯ ತರಗತಿ (ದ್ವಿತೀಯ ಪಿಯು) ಫಲಿತಾಂಶವು ಸ್ಪಷ್ಟವಾಗಿ ಇದನ್ನು ತೋರಿಸುತ್ತಿದೆ. ಈ ವರ್ಷ ದೆಹಲಿ ಸರಕಾರಿ ಶಾಲೆಯ ಉತ್ತೀರ್ಣ ಫಲಿತಾಂಶ 94.24% ಆಗಿದ್ದು, ರಾಜ್ಯದ ಎಲ್ಲಾ ಶಾಲೆಗಳ ಒಟ್ಟಾರೆ ಫಲಿತಾಂಶ 91.87% ಆಗಿರುತ್ತದೆ. ಸರಕಾರಿ ಶಾಲೆಗೆ ಹೋಲಿಸಿದರೆ ಖಾಸಗಿ ಶಾಲೆಗಳ ಫಲಿತಾಂಶ ಮಾತ್ರ 82.59% ಇರುತ್ತದೆ. ಸರಕಾರಿ ಶಾಲೆಗಳ ಫಲಿತಾಂಶ ಕಳೆದ ನಾಲ್ಕು ವರ್ಷದಿಂದ ಸತತವಾಗಿ ಉತ್ತಮಗೊಳ್ಳುತ್ತಾ ಬಂದಿದ್ದು, 2016ರಲ್ಲಿ 85.9%, 2017ರಲ್ಲಿ 88.2%, 2018ರಲ್ಲಿ 90.6% ರಿಂದ 2019ರಲ್ಲಿ 94.24%ಕ್ಕೆ ಏರಿರುವುದರ ಜೊತೆಗೆ ಇದು ಸರಕಾರಿ ಶಾಲೆಗಳ ಅತ್ಯಂತ ಹೆಚ್ಚಿನ ದಾಖಲೆಯ ಫಲಿತಾಂಶವಾಗಿದೆ

ಇದರ ಹಿಂದೆ ಸರಕಾರದ ಯೋಚನೆ, ಯೋಜನೆ ಮತ್ತು ಎಲ್ಲಾ ಪಾಲುದಾರರ ಪರಿಶ್ರಮವೂ ಇದೆ. ದೇಶದಲ್ಲಿ ಸಾರ್ವಜನಿಕ ಶಿಕ್ಷಣಕ್ಕೆ ಅತ್ಯಂತ ಹೆಚ್ಚಿನ ಅನುದಾನ ತನ್ನ ವಾರ್ಷಿಕ ವೆಚ್ಚದ 26% ದೆಹಲಿ ಸರಕಾರ ತನ್ನ ಮುಂಗಡಪತ್ರದಲ್ಲಿ ನೀಡುತ್ತಿದೆ. ಬೇರೆ ಯಾವ ರಾಜ್ಯವೂ ಇಷ್ಟು ಹೆಚ್ಚಿನ ಹಣ ಸಾರ್ವಜನಿಕ ಶಿಕ್ಷಣಕ್ಕೆ ವಿನಿಯೋಗಿಸುತ್ತಿಲ್ಲ. ಭಾರತ ಸರಕಾರ ತನ್ನ ವಾರ್ಷಿಕ ಮುಂಗಡಪತ್ರದ 3% ಸಹ ಶಿಕ್ಷಣಕ್ಕೆ ಖರ್ಚು ಮಾಡುತ್ತಿಲ್ಲ. ಕರ್ನಾಟಕ (ಮತ್ತು ಇತರ ರಾಜ್ಯಗಳು) ಸಾವಿರಾರು ಸರಕಾರಿ ಕನ್ನಡ ಶಾಲೆಗಳನ್ನು ಪ್ರತಿ ವರ್ಷ ಮುಚ್ಚುತ್ತಿದ್ದರೆ ದೆಹಲಿ ಮಾತ್ರ ಹೊಸ ಶಾಲೆಗಳನ್ನು ತೆರೆಯುತ್ತಿದೆ.

ಉಳಿದ ರಾಜ್ಯಗಳು ಇದನ್ನು ಅನುಸರಿಸಬೇಕಿದೆ

ಕೇರಳ ರಾಜ್ಯ ಹೊರತುಪಡಿಸಿ ಉಳಿದೆಲ್ಲೆಡೆ ಸಾರ್ವಜನಿಕ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿತವಾಗುವಂತೆ ಸರ್ಕಾರಗಳು ಕ್ರಮ ತೆಗೆದುಕೊಳ್ಳುತ್ತಿವೆ. ಇದು ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳ ದುಪ್ಪಟ್ಟು ಶುಲ್ಕ ಕಟ್ಟುವ ಅನಿವಾರ್ಯತೆಗೆ ಸಿಕ್ಕಿಬೀಳುತ್ತಿದ್ದಾರೆ. ದೆಹಲಿ ಮಾದರಿಯನ್ನು ಉಳಿದ ರಾಜ್ಯಗಳು ಅಳವಡಿಸಿಕೊಂಡಲ್ಲಿ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದಾಗಿದೆ. ಕರ್ನಾಟಕದ ಪಕ್ಷೇತರ ಶಾಸಕರೊಬ್ಬರು ಶಿಕ್ಷಣ ಸಚಿವರಾದ ಕೂಡಲೇ ದೆಹಲಿ ಮಾದರಿ ಜಾರಿಗೆ ತರುವುದಾಗಿ ಘೋಷಿಸಿದರು. ಕೆಲವೇ ದಿನಗಳಲ್ಲಿ ರಾಜಿನಾಮೆ ಕೊಟ್ಟು ಮುಂಬೈಗೆ ಹಾರಿರುವುದು ದುರಂತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...