Homeಚಳವಳಿಗೆದ್ದ ಅನ್ನದಾತನ ಹಠ: ಟ್ರಾಕ್ಟರ್‌ ರ್‍ಯಾಲಿಗೆ ದೆಹಲಿ ಪೊಲೀಸರ ಅನುಮತಿ

ಗೆದ್ದ ಅನ್ನದಾತನ ಹಠ: ಟ್ರಾಕ್ಟರ್‌ ರ್‍ಯಾಲಿಗೆ ದೆಹಲಿ ಪೊಲೀಸರ ಅನುಮತಿ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ, ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ದೆಹಲಿ ಪೊಲೀಸರು ಕೊನೆಗೂ ಅನುಮತಿ ನೀಡಿದ್ದಾರೆ. ರೈತರಿಗೆ ದೆಹಲಿಗೆ ಪ್ರವೇಶಿಸಲು ಮತ್ತು ಪ್ರತಿ ಮಾರ್ಗದಲ್ಲಿ 100 ಕಿ.ಮೀ ದೂರ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ರೈತ ಮುಖಂಡ ದರ್ಶನ್ ಪಾಲ್ ಶನಿವಾರ ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರೊಂದಿಗೆ ಇದುವರೆಗೂ 11 ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ನಡೆಸಿದೆ. ಆದರೆ ಈ ಮಾತುಕತೆಗಳಲ್ಲಿ ಕೇಂದ್ರ ಸರ್ಕಾರ ರೈತರ ಪ್ರಮುಖ ಬೇಡಿಕೆಗಳನ್ನು ಒಪ್ಪಿಕೊಂಡಿಲ್ಲ. ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ಒಪ್ಪಿಕೊಂಡರಷ್ಟೇ ಹೋರಾಟ ಕೊನೆಗೊಳಿಸುವುದಾಗಿ ರೈತರು ಈಗಾಗಲೇ ಘೋಷಿಸಿದ್ದಾರೆ.

ಇದನ್ನೂ ಓದಿ: 11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ಒಂಬತ್ತನೇ ಸುತ್ತಿನ ಮಾತುಕತೆ ವಿಫಲವಾದಾಗ ರೈತರು ಗಣರಾಜ್ಯೋತ್ಸವ ದಿನದಂದು ಟ್ರಾಕ್ಟರ್‌ ರ್‍ಯಾಲಿ ಮುಖಾಂತರ ದೆಹಲಿ ಪ್ರವೇಶಿಸಲಿದ್ದೇವೆ ಎಂದು ಹೇಳಿದ್ದರು. ಈ ರ್‍ಯಾಲಿಯ ವಿರುದ್ದ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಸುಪ್ರೀಂಕೋರ್ಟ್‌ಗೆ ತೆರಳಿ ರ್‍ಯಾಲಿಯನ್ನು ತಡೆಹಿಡಿಯುವಂತೆ ಮನವಿ ಸಲ್ಲಿಸಿದ್ದರು. ಅದರೆ ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿ, ದೆಹಲಿಗೆ ಪ್ರವೇಶದ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಬೇಕು, ನಮ್ಮ ಮಧ್ಯಪ್ರವೇಶ ಅಸಾಧ್ಯ ಎಂದು ಹೇಳಿತ್ತು.

ಇದಾದ ನಂತರ ದೆಹಲಿ ಪೊಲೀಸರು, ರ್‍ಯಾಲಿ ಮುಖಾಂತರ ದೆಹಲಿಗೆ ಪ್ರವೇಶಿಸದಿರಿ ಎಂದು ರೈತರನ್ನು ಮನವೊಲಿಸಲು ಪ್ರಯತ್ನಿಸಿದ್ದರಾದರೂ ರೈತರು ಮಾತ್ರ ನಾವು ದೆಹಲಿಗೆ ಪ್ರವೇಶಿಸಿಯೆ ಸಿದ್ದ ಎಂದು ಹೇಳಿದ್ದರು. ನಮ್ಮದು ಶಾಂತಿಯುತ ಪ್ರತಿಭಟನೆ, ಅದನ್ನು ನಡೆಸಿಯೆ ತೀರುತ್ತೇವೆ ಎಂದು ಘೋಷಿಸಿದ್ದರು. ಇದೀಗ ದೆಹಲಿ ಪೊಲೀಸರೆ ರ್‍ಯಾಲಿಗೆ ಅನುಮತಿ ನೀಡಿದ್ದಾರೆ.

ಇದನ್ನೂ ಓದಿ: ನಾನುಗೌರಿ.ಕಾಮ್ ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...