Homeಮುಖಪುಟಟೂಲ್‌ಕಿಟ್ ಪ್ರಕರಣ: ಬೆಂಗಳೂರಿನ ವಿದ್ಯಾರ್ಥಿನಿಯನ್ನು ಬಂಧಿಸಿದ ದೆಹಲಿ ಪೊಲೀಸರು

ಟೂಲ್‌ಕಿಟ್ ಪ್ರಕರಣ: ಬೆಂಗಳೂರಿನ ವಿದ್ಯಾರ್ಥಿನಿಯನ್ನು ಬಂಧಿಸಿದ ದೆಹಲಿ ಪೊಲೀಸರು

- Advertisement -
- Advertisement -

ರೈತ ಪ್ರತಿಭಟನೆ ಕುರಿತು ಜಾಗತಿಕ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ‘ಟೂಲ್‌ಕಿಟ್‌’ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 21 ವರ್ಷದ ಹವಾಮಾನ ಕಾರ್ಯಕರ್ತೆಯೊಬ್ಬರನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬಂಧಿತ ಯುವತಿಯನ್ನು ದಿಶಾ ರವಿ ಎಂದು ಗುರುತಿಸಲಾಗಿದ್ದು, ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ಫ್ರೈಡೇಸ್ ಫಾರ್ ಫ್ಯೂಚರ್ ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಟೂಲ್‌ ಕಿಟ್ ವಿಚಾರದಲ್ಲಿ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ಸರಿಯೇ?

ಜನವರಿ 26 ರ ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಈ ಟೂಲ್‌ಕಿಟ್‌ನ ಪಾತ್ರವಿದೆ ಎಂದು ಪೊಲೀಸರು ಆಪಾದಿಸಿದ್ದಾರೆ. ವಿಶೇಷ ಸಿಪಿ (ಅಪರಾಧ ಶಾಖೆ) ಪ್ರವೀರ್ ರಂಜನ್, ಪ್ರಾಥಮಿಕ ವಿಚಾರಣೆಯಲ್ಲಿ ವಿವಾದಿತ ಟೂಲ್‌ಕಿಟ್ ಅನ್ನು “ಖಲಿಸ್ತಾನಿ ಪರ ಸಂಸ್ಥೆ” ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ರಚಿಸಿದೆ ಎಂದು ಸೂಚಿಸಿದೆ ಎಂದು ಹೇಳಿದ್ದಾರೆ.

ಫ್ರೈಡೆ ಫಾರ್‌ ಫ್ಯೂಚರ್‌‌ ಎಂಬುವುದು ಅಂತಾರಾಷ್ಟ್ರೀಯ ಚಳವಳಿಯಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳು ಶುಕ್ರವಾರದಂದು ತರಗತಿಯನ್ನು ಬಹಿಷ್ಕರಿಸಿ ಹವಾಮಾನ ಬದಲಾವಣೆಗಳ ವಿರುದ್ಧ ರಾಜಕಾರಣಿಗಳು ಮಾತನಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಾರೆ. ಗ್ರೇಟಾ ಥನ್ಬರ್ಗ್ ಸ್ವೀಡಿಷ್ ಸಂಸತ್ತಿನ ಹೊರಗೆ ಪ್ರತಿಭಟಿಸಿದ ನಂತರ ಇದು ವ್ಯಾಪಕ ಜನಪ್ರಿಯತೆಯನ್ನು ಗಳಿಸಿತು.

ಫೆಬ್ರವರಿ 4 ರಂದು ವಿವಾದಿತ ಟೂಲ್‌ಕಿಟ್‌ ತಯಾರಿಸಿದವರ ವಿರುದ್ದ ದೆಹಲಿ ಸೈಬರ್‌‌‌-ಕ್ರೈಮ್‌ ಸೆಲ್ ಪೊಲೀಸರು‌, ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದರು.

ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ’ ಎಂದ ಮಮತಾ ಬ್ಯಾನರ್ಜಿ ವಿರುದ್ಧ ಕ್ರಮಕ್ಕೆ ವಕೀಲರ ಗುಂಪು...

0
‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ' ಎಂದು ಹೈಕೋರ್ಟ್‌ ವಿರುದ್ಧ ಟೀಕೆಯನ್ನು ಮಾಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಬೇಕೆಂದು ವಕೀಲರ ಗುಂಪು ಗುರುವಾರ ಕಲ್ಕತ್ತಾ ಹೈಕೋರ್ಟ್‌ಗೆ ಒತ್ತಾಯಿಸಿದೆ. ಶಾಲಾ...