HomeಮುಖಪುಟPFI ನಿಷೇಧದ ಬೆನ್ನಲ್ಲೆ ಅದರ ನಾಲ್ವರು ಸದಸ್ಯರನ್ನು UAPA ಅಡಿಯಲ್ಲಿ ಬಂಧಿಸಿದ ದೆಹಲಿ ಪೊಲೀಸರು

PFI ನಿಷೇಧದ ಬೆನ್ನಲ್ಲೆ ಅದರ ನಾಲ್ವರು ಸದಸ್ಯರನ್ನು UAPA ಅಡಿಯಲ್ಲಿ ಬಂಧಿಸಿದ ದೆಹಲಿ ಪೊಲೀಸರು

- Advertisement -
- Advertisement -

ಪಾಪ್ಯುಲರ್‌‌ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವನ್ನು ಭಾರತ ಸರ್ಕಾರವು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿ ನಿಷೇಧಿಸಿದ ಕೆಲವು ದಿನಗಳ ನಂತರ, ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ-ತಡೆಗಟ್ಟುವಿಕೆ-ಕಾಯ್ದೆ (ಯುಎಪಿಎ) ಅಡಿಯಲ್ಲಿ ಅದರ ನಾಲ್ವರು ಸದಸ್ಯರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎನ್‌ಐಎ ದೇಶದ ಹಲವು ಭಾಗಗಳಲ್ಲಿ ದಾಳಿ ನಡೆಸಿ ಪಿಎಫ್‌ಐನ ಪ್ರಮುಖ ನಾಯಕರು ಮತ್ತು ಸದಸ್ಯರನ್ನು ಬಂಧಿಸಿದ ನಂತರ ದೆಹಲಿ ಪೊಲೀಸರು ನಡೆಸಿದ ಮೊದಲ ಬಂಧನ ಇದಾಗಿದೆ. ಭಾನುವಾರ ಈ ಬಂಧನ ನಡೆದಿದೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಹೇಳಿದೆ. ದೆಹಲಿ ಪೊಲೀಸರು ಈ ಹಿಂದೆ ಪಿಎಫ್‌ಐ ಜೊತೆಗಿನ ಆರೋಪದ ಮೇಲೆ 32 ಜನರನ್ನು ಬಂಧಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಫ್‌ಐ ಮತ್ತು ಅವರ ಸಹ ಸಂಸ್ಥೆಗಳಾದ ರೆಹಬ್ ಇಂಡಿಯಾ ಫೌಂಡೇಶನ್ (RIF), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AllC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO) ಸೇರಿದಂತೆ ಒಟ್ಟು ಒಂಬತ್ತು ಸಂಘಟನೆಗಳನ್ನು ನಿಷೇಧಿಸಲಾಗಿತ್ತು.

ಶಾಹೀನ್ ಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದ್ದು, ದೆಹಲಿಯಲ್ಲಿರುವ ಪಿಎಫ್‌ಐನ ಮೂರು ಕಚೇರಿಗಳನ್ನು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಸೀಲ್ ಮಾಡಲಾಗಿದೆ. ಪಿಎಫ್‌ಐ ಮತ್ತು ಇತರ ಸಂಘಟನೆಗಳ ಸದಸ್ಯರು “ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರಲು ಪಿತೂರಿ ನಡೆಸುತ್ತಿದ್ದಾರೆ” ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

“ನಿಷೇಧಿತ ಕಾನೂನುಬಾಹಿರ ಸಂಘಟನೆಗಳ ನಾಯಕರು, ಸದಸ್ಯರು ಮತ್ತು ಸಹವರ್ತಿಗಳು ತಮ್ಮ ಕಾನೂನುಬಾಹಿರ ಚಟುವಟಿಕೆಗಳ ಮುಂದುವರಿಸಿದ್ದು, ಕೋಮು ದ್ವೇಷವನ್ನು ಉತ್ತೇಜಿಸುವ ಮೂಲಕ ಸಾರ್ವಜನಿಕ ಸುವ್ಯವಸ್ಥೆಗೆ ಭಾರಿ ಭಂಗವನ್ನು ಉಂಟುಮಾಡಲು ಮತ್ತಷ್ಟು ಪಿತೂರಿ ಮಾಡುತ್ತಿದ್ದಾರೆ. ಈ ಉದ್ದೇಶಕ್ಕಾಗಿ ವಿವಿಧ ಸ್ಥಳಗಳಲ್ಲಿ ಪ್ರಚೋದನೆಯನ್ನು ಹರಡಲು ಬೆಂಬಲಿಗರನ್ನು ಸಜ್ಜುಗೊಳಿಸುತ್ತಿದ್ದಾರೆ” ಎಂದು ಎಫ್‌ಐಆರ್‌ ಉಲ್ಲೇಖಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...