Homeಮುಖಪುಟಎಎಪಿ ಪ್ರತಿಭಟನೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

ಎಎಪಿ ಪ್ರತಿಭಟನೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ನಡೆಯುತ್ತಿದ್ದ ಪ್ರತಿಭಟನೆ ವೇಳೆ ವರದಿ ಮಾಡುತ್ತಿದ್ದ ಛಾಯಾಚಿತ್ರ ವರದಿಗಾರರ(ಫೋಟೋ ಜರ್ನಲಿಸ್ಟ್‌) ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಪಟೇಲ್ ಚೌಕ್‌ನಲ್ಲಿ ನಡೆದಿದ್ದು, ಪ್ರತಿಭಟನೆಯನ್ನು ಹೊರ ಜಗತ್ತಿಗೆ ಅರಿಯದಂತೆ ಮಾಡಲು ವ್ಯವಸ್ಥಿತ ಪಿತೂರಿ ನಡೆಸಿರುವ ಆರೋಪ ಕೇಳಿ ಬಂದಿದೆ.

ಪೊಲೀಸರ ಹಲ್ಲೆಯಿಂದ ಹಿಂದೂಸ್ತಾನ್ ಟೈಮ್ಸ್‌ನ ಛಾಯಾಚಿತ್ರ ವರದಿಗಾರ ಸಲ್ಮಾನ್ ಅಲಿ ಅವರ ಎಡ ಮೊಣಕೈ ಮೂಳೆ ಮುರಿತಕ್ಕೆ ಒಳಗಾಗಿದೆ ಎಂದು ತಿಳಿದು ಬಂದಿದೆ.  ದಿ ವರ್ಕಿಂಗ್ ನ್ಯೂಸ್ ಕ್ಯಾಮರಾಮನ್ಸ್ ಅಸೋಸಿಯೇಷನ್ ಬಿಡುಗಡೆ ಮಾಡಿದ ಪೋಟೋದಲ್ಲಿ ಇಂಡಿಯಾ ಟುಡೆಯ ಅರುಣ್ ಠಾಕೂರ್ ಅವರ ಕತ್ತನ್ನು ಪೋಲೀಸ್‌ ಅಧಿಕಾರಿಯೋರ್ವರು ಹಿಡಿದಿರುವುದನ್ನು ತೋರಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಹಲವಾರು ಛಾಯಾಚಿತ್ರಗಳು ಮತ್ತು ವೀಡಿಯೊ ಕ್ಲಿಪ್‌ಗಳು ಕ್ಯಾಮೆರಾಗಳನ್ನು ಹೊತ್ತೊಯ್ಯುತ್ತಿರುವ ಪತ್ರಕರ್ತರಿಗೆ ಹಲವಾರು ಅಧಿಕಾರಿಗಳು ಬೆದರಿಕೆ ಹಾಕುತ್ತಿರುವುದನ್ನು ತೋರಿಸಿದೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಹಲ್ಲೆಯನ್ನು ಖಂಡಿಸಿ ಹೇಳಿಕೆಯನ್ನು ನೀಡಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದ ಉನ್ನತ ಮಟ್ಟದ ಸಮಿತಿಯಿಂದ ತನಿಖೆಗೆ ಒತ್ತಾಯಿಸಿದೆ. ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಬೇಕು. ರಾಜಕೀಯ ಪ್ರತಿಭಟನೆಗಳನ್ನು ವರದಿ ಮಾಡುವುದು ವರದಿಗಾರರು ಮತ್ತು ಫೋಟೋ ಜರ್ನಲಿಸ್ಟ್‌ಗಳ ಕೆಲಸ. ದೆಹಲಿ ಪೊಲೀಸರು ಫೋಟೊ ಜರ್ನಲಿಸ್ಟ್‌ಗಳಿಗೆ ತಮ್ಮ ಕೆಲಸಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿದ್ದಾರೆ. ಪತ್ರಿಕಾ ಸ್ವಾತಂತ್ರ್ಯವು ಮೂಲಭೂತ ಹಕ್ಕಾಗಿದೆ, ಇದನ್ನು ಸುಪ್ರೀಂ ಕೋರ್ಟ್ ಅನೇಕ ಸಂದರ್ಭಗಳಲ್ಲಿ ಒತ್ತಿ ಹೇಳಿದೆ ಎಂದು ಹೇಳಿದ್ದಾರೆ.

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಎಎಪಿ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೇನ್ಸ್ ಮತ್ತು ಶಾಸಕ ಸೋಮನಾಥ್ ಭಾರ್ತಿ ಸೇರಿದಂತೆ ಹಲವು ಎಎಪಿ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ: ನ್ಯಾಯಾಂಗದ ಸಮಗ್ರತೆಗೆ ಧಕ್ಕೆ: 600ಕ್ಕೂ ಹೆಚ್ಚು ವಕೀಲರಿಂದ ಸಿಜೆಐಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...