Homeಮುಖಪುಟದೆಹಲಿ: 'ಖಾನ್' ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

- Advertisement -
- Advertisement -

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ ‘4PM ನ್ಯೂಸ್ ನೆಟ್‌ವರ್ಕ್’ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ ಪೊಲೀಸರು ಹಲ್ಲೆ ನಡೆಸಿ, ಠಾಣೆಯಲ್ಲಿ ಬಂಧಿಸಿಟ್ಟಿದ್ದಾರೆ ಎಂದು ಆರೋಪಿಸಿ ತಡರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗಿದೆ. ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ಎಸ್‌ಎಚ್‌ಒ (SHO) ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾಕೇತ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಭುಗಿಲೆದ್ದಿದೆ.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ (AAP), ಎಐಎಂಐಎಂ (AIMIM), ಎಡಪಕ್ಷಗಳ ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕ ಹಕ್ಕು ಹೋರಾಟಗಾರರು ಭಾಗವಹಿಸಿದ್ದರು. ಸಾಕೇತ್ ಠಾಣೆಯ ಆವರಣದಲ್ಲೇ ಕುಳಿತು ಮಧ್ಯರಾತ್ರಿ 3 ಗಂಟೆಯ ನಂತರವೂ ಧರಣಿ ಮುಂದುವರಿಸಿದ ಪ್ರತಿಭಟನಾಕಾರರು, ಪೋಲಿಸ್ ದೌರ್ಜನ್ಯ ಮತ್ತು ದ್ವೇಷದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಘಟನೆಯ ಹಿನ್ನೆಲೆ

ಗುರುವಾರ ದಕ್ಷಿಣ ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯಲ್ಲಿ ನೂತನ ವಿಭಾಗದ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದ ಈ ಕಾರ್ಯಕ್ರಮವನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ತಮ್ಮ ದೇಹದ ಮೇಲಿರುವ ಗಾಯದ ಕಲೆಗಳನ್ನು ತೋರಿಸಿರುವ ಪತ್ರಕರ್ತೆ ಶಾಹೀನ್ ಖಾನ್ ಹಾಗೂ ನಫೀಸಾ ಖಾನ್, “ನಮ್ಮನ್ನು ಪೊಲೀಸ್ ಠಾಣೆಯ ಪ್ರತ್ಯೇಕ ಕೊಠಡಿಗೆ ಕರೆದೊಯ್ದು ಲಾಠಿಗಳಿಂದ ಹೊಡೆಯಲಾಯಿತು. ದೆಹಲಿ ಸರ್ಕಾರದ ವಿರುದ್ಧ ಪ್ರಶ್ನೆ ಕೇಳಿದ್ದಕ್ಕೆ ಈ ರೀತಿ ದೌರ್ಜನ್ಯ ಎಸಗಲಾಗಿದೆ” ಎಂದು ಕಣ್ಣೀರಿಟ್ಟಿದ್ದಾರೆ.

ಅಷ್ಟೇ ಅಲ್ಲದೆ, “ನಮ್ಮ ಮೊಬೈಲ್ ಕಸಿದುಕೊಂಡ ಪೊಲೀಸರು, ನಮ್ಮ ಹೆಸರಿನಲ್ಲಿ ‘ಖಾನ್’ (ಮುಸ್ಲಿಂ ಗುರುತು) ಎಂದಿರುವುದನ್ನು ನೋಡಿ, ಕೋಮುದ್ವೇಷದ ಮಾತುಗಳನ್ನಾಡುತ್ತಾ ಗಂಭೀರವಾಗಿ ಹಲ್ಲೆ ನಡೆಸಿದರು” ಎಂದು ಪತ್ರಕರ್ತೆಯರು ಆರೋಪ ಮಾಡಿದ್ದಾರೆ.

ಮಾಧ್ಯಮ ಸಂಘಟನೆಗಳಿಂದ ಖಂಡನೆ

ಪ್ರೆಸ್ ಕ್ಲಬ್ ಆಫ್ ಇಂಡಿಯಾ (PCI), ಇಂಡಿಯನ್ ವುಮೆನ್ಸ್ ಪ್ರೆಸ್ ಕಾರ್ಪ್ಸ್ (IWPC), ದೆಹಲಿ ಯೂನಿಯನ್ ಆಫ್ ಜರ್ನಲಿಸ್ಟ್ಸ್ (DUJ) ಸೇರಿದಂತೆ ಪ್ರಮುಖ ಮಾಧ್ಯಮ ಸಂಘಟನೆಗಳು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿವೆ. ಸಾಕೇತ್ ಠಾಣೆಯ ಎಸ್‌ಎಚ್‌ಒ ಸೇರಿದಂತೆ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳಬೇಕು ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ (Suo Motu) ವಿಚಾರಣೆಗೆ ತೆಗೆದುಕೊಳ್ಳಬೇಕೆಂದು ಆಗ್ರಹಿಸಿವೆ.

ಪೊಲೀಸರ ಸ್ಪಷ್ಟನೆ

ಮತ್ತೊಂದೆಡೆ, ದೆಹಲಿ ಪೊಲೀಸರು ಈ ಎಲ್ಲಾ ಆರೋಪಗಳನ್ನು ಅಲ್ಲಗೆಳೆದಿದ್ದಾರೆ. ದಕ್ಷಿಣ ದೆಹಲಿ ಡಿಸಿಪಿ ನೀಡಿರುವ ಸ್ಪಷ್ಟನೆಯಲ್ಲಿ, “ವಿವಿಐಪಿ (VVIP) ಸಂಚಾರ ಮಾರ್ಗದಲ್ಲಿ ಸ್ಕೂಟರ್ ಪಾರ್ಕ್ ಮಾಡಿ ರಸ್ತೆ ತಡೆ ಉಂಟುಮಾಡಿದ್ದರಿಂದ ಮತ್ತು ಪದೇ ಪದೇ ಹೇಳಿದರೂ ವಾಹನ ತೆರವುಗೊಳಿಸದ ಕಾರಣ ಅವರನ್ನು ವಿಚಾರಣೆಗೆ ಠಾಣೆಗೆ ಕರೆತರಲಾಗಿತ್ತು. ಹಲ್ಲೆ ನಡೆಸಲಾಗಿದೆ ಎಂಬ ಆರೋಪಗಳು ಆಧಾರರಹಿತ ಹಾಗೂ ಸತ್ಯಕ್ಕೆ ದೂರವಾದವು” ಎಂದು ಹೇಳಿದ್ದಾರೆ.

ಆದರೆ, “ಕೇವಲ ಪಾರ್ಕಿಂಗ್ ಸಮಸ್ಯೆಗೆ ಮಹಿಳಾ ಪತ್ರಕರ್ತೆಯರ ಮೇಲೆ ಲಾಠಿ ಪ್ರಹಾರ ನಡೆಸುವುದು ಮತ್ತು ಕೋಮು ನಿಂದನೆ ಮಾಡುವುದು ಎಷ್ಟರ ಮಟ್ಟಿಗೆ ಸರಿ?” ಎಂದು ಮಾಧ್ಯಮ ಒಕ್ಕೂಟಗಳು ಮತ್ತು ಹಕ್ಕುಗಳ ಹೋರಾಟಗಾರರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...