Homeಮುಖಪುಟನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

- Advertisement -
- Advertisement -

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ “ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ”ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದು, ಆಡಳಿತರೂಢ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಹುಲ್ ಗಾಂಧಿಗೆ ಈ ಪುಸ್ತಕದ ಕುರಿತು ಮಾತನಾಡಲು ಸ್ಪೀಕರ್ ಅವಕಾಶ ನೀಡುತಿಲ್ಲ. ಸ್ಪೀಕರ್ ನಡೆ ಖಂಡಿಸಿ ಪ್ರತಿಪಕ್ಷಗಳ ಸದಸ್ಯರು ಕಳೆದ 10 ದಿನಗಳಿಂದ ಲೋಕಸಭೆಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಈ ಸಂಬಂಧ 8 ಮಂದಿ ಪ್ರತಿಪಕ್ಷ ಸಂಸದರನ್ನು ಸ್ಪೀಕರ್ ಈಗಾಗಲೇ ಅಮಾನತುಗೊಳಿಸಿದ್ದಾರೆ. ಸ್ಪೀಕರ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಕೂಡ ಮಂಡಿಸಿವೆ.

ವಿವಿಧ ಸಾಮಾಜಿಕ ಜಾಲತಾಣಗಳು ಮತ್ತು ಆನ್‌ಲೈನ್ ಸುದ್ದಿ ವೇದಿಕೆಗಳಲ್ಲಿ ನರವಾಣೆ ಅವರ ಪುಸ್ತಕದ ವಿಷಯಗಳು ಹರಿದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸ್ವಯಂಪ್ರೇರಿತವಾಗಿ ಕ್ರಮ ಕೈಗೊಂಡಿದ್ದಾರೆ. ದೆಹಲಿ ಪೊಲೀಸರ ವಿಶೇಷ ಘಟಕವು ಪ್ರಕರಣದ ತನಿಖೆ ನಡೆಸಲಿದೆ ಎಂದು ವರದಿಯಾಗಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ನರವಾಣೆ ಅವರ ಪುಸ್ತಕದ ಮುದ್ರಣ ಪೂರ್ವ ಪ್ರತಿ ಸಾರ್ವಜನಿಕವಾಗಿ ಹರಿದಾಡುತ್ತಿರುವುದನ್ನು ಪೊಲೀಸರು ಗಮನಿಸಿದ್ದಾರೆ. ವಿವಿಧ ಸಾಮಾಜಿಕ ಜಾಲತಾಣಗಳು ಮತ್ತು ಆನ್‌ಲೈನ್ ಸುದ್ದಿ ವೇದಿಕೆಗಳಲ್ಲಿ ಈ ಪುಸ್ತಕದ ವಿಷಯಗಳು ಪ್ರಸಾರವಾಗುತ್ತಿರುವುದನ್ನು ಪತ್ತೆಹಚ್ಚಿದ ಪೊಲೀಸರು, ಈ ಮಾಹಿತಿಯನ್ನು ಅಧಿಕೃತವಾಗಿ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಪುಸ್ತಕದ ಪ್ರಕಟಣೆಗೆ ಅಗತ್ಯವಾದ ಅನುಮತಿಯನ್ನು ಸಂಬಂಧಿತ ಅಧಿಕಾರಿಗಳಿಂದ ಇನ್ನೂ ಪಡೆಯಬೇಕಾಗಿದೆ ಎಂದು ವರದಿ ಹೇಳಿದೆ.

ಪೊಲೀಸರ ಪರಿಶೀಲನೆಯ ಸಮಯದಲ್ಲಿ, ಅದೇ ಶೀರ್ಷಿಕೆಯನ್ನು ಹೊಂದಿರುವ ಪುಸ್ತಕದ ಪಿಡಿಎಫ್‌ ಪ್ರತಿ ಕೆಲವು ವೆಬ್‌ಸೈಟ್‌ಗಳಲ್ಲಿ ಲಭ್ಯವಿರುವುದು ಕಂಡುಬಂದಿದೆ. ಈ ಪ್ರತಿಯನ್ನು ಮೇಲ್ನೋಟಕ್ಕೆ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಪ್ರಕಾಶನ ಸಂಸ್ಥೆಯು ಸಿದ್ಧಪಡಿಸಿದಂತೆ ಕಾಣಿಸುತ್ತಿದೆ. ಅಷ್ಟೇ ಅಲ್ಲದೆ, ಕೆಲವು ಆನ್‌ಲೈನ್ ಮಾರುಕಟ್ಟೆ ವೇದಿಕೆಗಳು ಈ ಪುಸ್ತಕದ ಅಂತಿಮ ಮುಖಪುಟವನ್ನು ಪ್ರದರ್ಶಿಸುತ್ತಿದ್ದು, ಆ ಪುಸ್ತಕವು ಈಗಾಗಲೇ ಖರೀದಿಗೆ ಲಭ್ಯವಿದೆ ಎನ್ನುವಂತೆ ಬಿಂಬಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇನ್ನೂ ಅನುಮೋದನೆಗೊಳ್ಳದ ಈ ಪುಸ್ತಕದ ಸೋರಿಕೆ ಅಥವಾ ನಿಯಮಗಳ ಉಲ್ಲಂಘನೆಯ ಕುರಿತು ಸಮಗ್ರ ತನಿಖೆ ನಡೆಸಲು ದೆಹಲಿ ಪೊಲೀಸರ ವಿಶೇಷ ಘಟಕದಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಪ್ರಕಟಣೆಗೂ ಮುನ್ನವೇ ಪುಸ್ತಕದ ಪ್ರತಿಗಳು ಹೇಗೆ ಹೊರಬಂದವು ಎಂಬ ಬಗ್ಗೆ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಸಂಸತ್ತಿನ ಆವರಣದಲ್ಲಿ ಇನ್ನೂ ಪ್ರಕಟವಾಗದ ಈ ಪುಸ್ತಕದ ಭೌತಿಕ ಪ್ರತಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ ಬೆನ್ನಲ್ಲೇ ಈ ಎಫ್‌ಐಆರ್ ದಾಖಲಾಗಿದೆ.

ಫೆಬ್ರವರಿ 2ರಿಂದಲೂ ರಾಹುಲ್ ಗಾಂಧಿಯವರು ನರವಾಣೆ ಅವರ ಪುಸ್ತಕದ ಆಯ್ದ ಭಾಗಗಳನ್ನು ಲೋಕಸಭೆಯಲ್ಲಿ ಉಲ್ಲೇಖಿಸಲು ಪ್ರಯತ್ನಿಸುತ್ತಿದ್ದಾರೆ. 2020ರಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷವನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂಬ ತಮ್ಮ ವಾದವನ್ನು ಪುಷ್ಟೀಕರಿಸಲು ಅವರು ಈ ಪುಸ್ತಕವನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ.

ತಾವು ಕೇವಲ ಈ ಪುಸ್ತಕದ ಆಯ್ದ ಭಾಗಗಳನ್ನು ಪ್ರಕಟಿಸಿದ್ದ ನಿಯತಕಾಲಿಕೆಯ ಲೇಖನವನ್ನಷ್ಟೇ ಉಲ್ಲೇಖಿಸಲು ಉದ್ದೇಶಿಸಿರುವುದಾಗಿ ಅವರು ತಿಳಿಸಿದ್ದಾರೆ. ಆದರೆ, ಅಪ್ರಕಟಿತ ದಾಖಲೆಗಳನ್ನು ಸಂಸತ್ತಿನಲ್ಲಿ ಉಲ್ಲೇಖಿಸುವುದನ್ನು ತಡೆಯುವ ಸಂಸದೀಯ ನಿಯಮಗಳನ್ನು ಮುಂದಿಟ್ಟು, ಸ್ಪೀಕರ್ ಮತ್ತು ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನಿರಾಕರಿಸುತ್ತಿದ್ದಾರೆ.

ಸತತ ಮೂರನೇ ದಿನವೂ ಮಾತನಾಡಲು ಅವಕಾಶ ನಿರಾಕರಿಸಿದ ಬಳಿಕ, ಕಳೆದ ಬುಧವಾರ ರಕ್ಷಣಾ ಸಚಿವಾಲಯದ ಅನುಮೋದನೆಗೆ ಬಾಕಿ ಇರುವ ಪುಸ್ತಕದ ಮುದ್ರಿತ ಪ್ರತಿಯನ್ನು ಸಂಸತ್ತಿನ ಆವರಣಕ್ಕೆ ತಂದು ಮಾಧ್ಯಮಗಳ ಕ್ಯಾಮರಾಗಳ ಮುಂದೆ ರಾಹುಲ್ ಗಾಂಧಿ ಪ್ರದರ್ಶಿಸಿದ್ದರು.

ಈ ಬೆಳವಣಿಗೆಯ ನಂತರ ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, “ಈ ಪುಸ್ತಕ ಇದುವರೆಗೆ ಪ್ರಕಟವೇ ಆಗಿಲ್ಲ ಎಂಬ ಬಗ್ಗೆ ನನಗೆ ವಿಶ್ವಾಸವಿದೆ” ಎಂದು ಹೇಳುವ ಮೂಲಕ ರಾಹುಲ್ ಗಾಂಧಿಯವರ ನಡೆಯನ್ನು ವಿರೋಧಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿ, “ನೋಡಿ, ಸರ್ಕಾರ ಇಲ್ಲ ಎಂದು ಹೇಳುತ್ತಿರುವ ಪುಸ್ತಕ ಇಲ್ಲಿದೆ” ಎಂದಿದ್ದರು. ಅಲ್ಲದೆ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಸದನಕ್ಕೆ ಹಾಜರಾದರೆ ತಾವು ಖುದ್ದಾಗಿ ಈ ಪುಸ್ತಕವನ್ನು ಅವರಿಗೆ ಹಸ್ತಾಂತರಿಸುವುದಾಗಿ ತಿಳಿಸಿದ್ದರು.

ಚೀನಾದೊಂದಿಗಿನ ಸಂಘರ್ಷದ ವೇಳೆ “ಸರ್ಕಾರ ನಮ್ಮನ್ನು ಕೈಬಿಟ್ಟಿತ್ತು, ಏಕಾಂಗಿಯಾಗಿ ಮಾಡಿತ್ತು” ಎಂದು ನರವಾಣೆ ಅವರು ಪುಸ್ತಕದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಇದೇ ಆ ಸತ್ಯ, ಪುಸ್ತಕವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸದಂತೆ ನಮ್ಮನ್ನು ತಡೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದರೆ, ಸರ್ಕಾರ ರಾಹುಲ್ ಗಾಂಧಿಯವರ ಎಲ್ಲಾ ಆರೋಪಗಳನ್ನು ತಿರಸ್ಕರಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಬಿಜೆಪಿ ನಾಯಕರು, ಅಪ್ರಕಟಿತ ಪುಸ್ತಕದ ವಿಷಯಗಳನ್ನು ಉಲ್ಲೇಖಿಸುವುದು ಸಂಸತ್ತಿನ ನಿಯಮಗಳ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದಾರೆ. ಅಲ್ಲದೆ, ಇಂತಹ ಕ್ರಮವು ದೇಶದ ಹಿತಾಸಕ್ತಿಗೆ ಧಕ್ಕೆ ತರುತ್ತದೆ ಮತ್ತು ರಾಷ್ಟ್ರೀಯ ಭದ್ರತೆಗೆ ಹಾನಿಯುಂಟುಮಾಡಬಹುದು ಎಂದಿದ್ದಾರೆ.

ಒಂದು ವೇಳೆ ಪುಸ್ತಕದಲ್ಲಿ ಉಲ್ಲೇಖಿಸಲಾದ ಅಂಶಗಳು ನಿಜವಾಗಿದ್ದರೆ, ಲೇಖಕರು (ಜನರಲ್ ನರವಾಣೆ) ಈವರೆಗೆ ನ್ಯಾಯಾಲಯದ ಮೊರೆ ಏಕೆ ಹೋಗಿಲ್ಲ? ಎಂದು ರಕ್ಷಣಾ ಸಚಿವರು ಪ್ರಶ್ನಿಸಿದ್ದಾರೆ.

ಸ್ಥಳೀಯವಾಗಿ ರಾಹುಲ್ ಗಾಂಧಿಯವರು ಪುಸ್ತಕದ ಮುದ್ರಿತ ಪ್ರತಿಯನ್ನು ಪ್ರದರ್ಶಿಸಿದ್ದರೂ ಸಹ, ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಈವರೆಗೆ ಸಾರ್ವಜನಿಕವಾಗಿ ಖರೀದಿಗೆ ಲಭ್ಯವಾಗಿಲ್ಲ. ಪ್ರಕಾಶನ ಸಂಸ್ಥೆಯಾದ ಪೆಂಗ್ವಿನ್ ರಾಂಡಮ್ ಹೌಸ್ ಈ ಪುಸ್ತಕವನ್ನು ಏಪ್ರಿಲ್ 2024ರಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು ಮತ್ತು 2023ರ ಅಂತ್ಯದ ವೇಳೆಗೆ ಮುಂಗಡ ಕಾಯ್ದಿರಿಸುವಿಕೆಯನ್ನು ಆರಂಭಿಸಿತ್ತು. ಆದರೆ ಪ್ರಸ್ತುತ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ಜಾಲತಾಣಗಳಲ್ಲಿ ಕೂಡ ಈ ಪುಸ್ತಕ ‘ಲಭ್ಯವಿಲ್ಲ’ ಎಂದು ತೋರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...