Homeಮುಖಪುಟಉದ್ಯಮಿಯಿಂದ 2.5 ಲಕ್ಷ ಲಂಚ ಪಡೆದ ದೆಹಲಿ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ ಸಿಬಿಐ

ಉದ್ಯಮಿಯಿಂದ 2.5 ಲಕ್ಷ ಲಂಚ ಪಡೆದ ದೆಹಲಿ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ ಸಿಬಿಐ

- Advertisement -
- Advertisement -

ನವಿ ಮುಂಬೈ ಮೂಲದ ಉದ್ಯಮಿಯೊಬ್ಬರ ಹೆಸರನ್ನು ಪ್ರಕರಣದಿಂದ ತೆರವುಗೊಳಿಸಲು ಹವಾಲಾ ಆಪರೇಟರ್‌ಗಳ ಮೂಲಕ 2.5 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಉದ್ಯಮಿಯಿಂದ 2.5 ಲಕ್ಷ ಲಂ

ಮುಂಬೈ, ತಮಿಳುನಾಡಿನ ಈರೋಡ್ ಮತ್ತು ದೆಹಲಿಯಲ್ಲಿರುವ “ಹಲವು ಹವಾಲಾ ಆಪರೇಟರ್‌ಗಳ” ಮೂಲಕ ಉದ್ಯಮಿಯಿಂದ ಬೇಡಿಕೆಯಿಟ್ಟ ಒಟ್ಟು 14 ಲಕ್ಷ ರೂ.ಗಳಲ್ಲಿ 2.5 ಲಕ್ಷ ರೂ.ಗಳ ಕಂತು ಪಡೆದ ಆರೋಪದ ಮೇಲೆ ದೆಹಲಿಯ ರೋಹಿಣಿಯ ಸೈಬರ್ ಪೊಲೀಸ್ ಠಾಣೆಯಲ್ಲಿ ನಿಯೋಜಿತರಾಗಿರುವ ರಾಹುಲ್ ಮಲಿಕ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಅವರು ತಿಳಿಸಿದ್ದಾರೆ. ಉದ್ಯಮಿ ರಾಹುಲ್‌ ವಿರುದ್ಧದ ದೂರಿನೊಂದಿಗೆ ಸಿಬಿಐ ಅನ್ನು ಸಂಪರ್ಕಿಸಿದ್ದರು.

ಉದ್ಯಮಿಯ ವಿರುದ್ಧದ ಪ್ರಕರಣವೊಂದರ ತನಿಖೆ ನಡೆಸುತ್ತಿದ್ದ ಆರೋಪಿ ರಾಹುಲ್, ತನಿಖೆಗೆ ಸಹಕರಿಸಿದ ಉದ್ಯಮಿಯ ಸೋದರ ಮಾವನಿಗೆ ನೋಟಿಸ್ ನೀಡಿದ್ದರೆಂದು ಹೇಳಲಾಗಿದೆ. ಅವರು ತನಿಖೆಗೆ ಹಾಜರಾಗಿದ್ದಾಗ, ಅವರನ್ನು ಬಂಧಿಸುವುದಾಗಿ ರಾಹುಲ್ ಬೆದರಿಕೆ ಹಾಕಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಮಾರ್ಚ್ 7, 2025 ರಂದು, ಪ್ರಕರಣದ ಆರೋಪಿ ಎಸ್‌ಐ/ಐಒ (ರಾಹುಲ್) ನವಿ ಮುಂಬೈನಲ್ಲಿರುವ ದೂರುದಾರರ ಮನೆಗೆ ಭೇಟಿ ನೀಡಿ, ತನ್ನ ಮತ್ತು ತನ್ನ ಸೋದರ ಮಾವನ ಹೆಸರನ್ನು ಪ್ರಕರಣದಿಂದ ತೆಗೆದುಹಾಕಲು 50 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಹಣವನ್ನು ಪಾವತಿ ಮಾಡದಿದ್ದರೆ ಅವರನ್ನು ಬಂಧಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮರುದಿನ, ರಾಹುಲ್ ಮುಂಬೈನ ಘೋಡ್‌ಬಂದರ್ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ತಮ್ಮನ್ನು ಭೇಟಿಯಾಗಲು ಉದ್ಯಮಿಯನ್ನು ಕೇಳಿಕೊಂಡಿದ್ದರು. ಅಲ್ಲಿ ಅವರು ತಮ್ಮ ಮೊಬೈಲ್‌ನಲ್ಲಿ 16 ಲಕ್ಷ ರೂ.ಗಳನ್ನು ಟೈಪ್ ಮಾಡುವ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಮತ್ತು ಪಾವತಿ ಮಾಡದಿದ್ದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಉದ್ಯಮಿ ತನ್ನ ವಕೀಲರೊಂದಿಗೆ ರೋಹಿಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಕೂಡಾ ಬೆದರಿಕೆಗಳು ಮುಂದುವರೆದಿದ್ದವು ಎಂದು ವರದಿಯಾಗಿದೆ. ಮಾತುಕತೆಯ ನಂತರ ರಾಹುಲ್‌ 14 ಲಕ್ಷ ರೂ.ಗಳ ಲಂಚವನ್ನು ಸ್ವೀಕರಿಸಲು ಒಪ್ಪಿಕೊಂಡಿದ್ದವು. ನಂತರ ಅವರು ಮುಂಬೈನಲ್ಲಿರುವ ಹವಾಲಾ ಆಪರೇಟರ್‌ನ ಸಂಖ್ಯೆಯನ್ನು ಮತ್ತು ಲಂಚವನ್ನು ಪಾವತಿಸಬೇಕಾದ ಹವಾಲಾ ಟೋಕನ್ ಸಂಖ್ಯೆಯ ವಿವರಗಳನ್ನು ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ಅದರ ಪ್ರಕಾರ, ಮಾರ್ಚ್ 19, 2025 ರಂದು, ಸಿಬಿಐ ಅವರಿಗೆ ಬಲೆ ಹೆಣೆದಿದ್ದು ಅವರನ್ನು ಯಶಸ್ವಿಯಾಗಿ ಬಂಧಿಸಿತ್ತು. ಈ ವೇಳೆ ಅವರ ಪರವಾಗಿ ಮುಂಬೈ, ಈರೋಡ್ (ತಮಿಳುನಾಡು) ಮತ್ತು ನವದೆಹಲಿಯಲ್ಲಿ ನೆಲೆಗೊಂಡಿರುವ ವಿವಿಧ ಹವಾಲಾ ಆಪರೇಟರ್‌ಗಳ ಹಂತಗಳ ಮೂಲಕ 2.5 ಲಕ್ಷ ರೂ. ಲಂಚವನ್ನು ಸ್ವೀಕರಿಸಿದ್ದರು” ಎಂದು ಸಿಬಿಐ ಹೇಳಿಕೆ ತಿಳಿಸಿದೆ. ಉದ್ಯಮಿಯಿಂದ 2.5 ಲಕ್ಷ ಲಂ   ಉದ್ಯಮಿಯಿಂದ 2.5 ಲಕ್ಷ ಲಂ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...