Homeಮುಖಪುಟಬಿಜೆಪಿ ಮುಖಂಡರ ತಿರುಚಿ‌ದ ಟ್ವೀಟ್ ಅವಲಂಬಿಸಿ ಪೊಲೀಸರಿಂದ ಎಫ್‌ಐಆರ್‌ ದಾಖಲು: ಉಮರ್ ಖಾಲಿದ್ ವಕೀಲರ...

ಬಿಜೆಪಿ ಮುಖಂಡರ ತಿರುಚಿ‌ದ ಟ್ವೀಟ್ ಅವಲಂಬಿಸಿ ಪೊಲೀಸರಿಂದ ಎಫ್‌ಐಆರ್‌ ದಾಖಲು: ಉಮರ್ ಖಾಲಿದ್ ವಕೀಲರ ಹೇಳಿಕೆ

- Advertisement -
- Advertisement -

ಭಾರತೀಯ ಜನತಾ ಪಕ್ಷದ ಮುಖಂಡರೊಬ್ಬರು ಟ್ವೀಟ್ ಮಾಡಿದ್ದ ತಿರುಚಿ‌ದ ವಿಡಿಯೊ ಕ್ಲಿಪ್ ಮತ್ತು ಅದನ್ನು ಪ್ರಸಾರ ಮಾಡಿದ ಸುದ್ದಿ ವಾಹಿನಿಗಳ ವಿಡಿಯೊಗಳನ್ನು ಅವಲಂಬಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಹೋರಾಟಗಾರ ಉಮರ್ ಖಾಲಿದ್ ಪರ ವಕೀಲರು ಸೋಮವಾರ ದೆಹಲಿ ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದಾರೆ.

ದೆಹಲಿ ಗಲಭೆ, ಹಿಂಸಾಚಾರ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿ ದಾಖಲಿಸಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಉಮರ್‌ ಖಾಲಿದ್ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ಈ ಮಾಹಿತಿ ಬಹಿರಂಗವಾಗಿದೆ.

“ರಿಪಬ್ಲಿಕ್ ಟಿವಿ ಮತ್ತು ನ್ಯೂಸ್ 18 ವಿಡಿಯೋ ಹೊರತುಪಡಿಸಿ ಸ್ಪಷ್ಟವಾಗಿ ದೆಹಲಿ ಪೊಲೀಸರ ಬಳಿ ಏನೂ ಇಲ್ಲ” ಎಂದು ಖಾಲಿದ್ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ತ್ರಿದೀಪ್ ಪೈಸ್ ವಾದಿಸಿದ್ದಾರೆ.

“ಚಾನೆಲ್‌ಗಳಲ್ಲಿ ಪ್ರಸಾರ ಮಾಡಿದ ಉಮರ್ ಖಾಲಿದ್ ಭಾಷಣದ ಒರಿಜಿನಲ್ ತುಣುಕನ್ನು ಕೋರಿ ನ್ಯೂಸ್ 18 ಮತ್ತು ರಿಪಬ್ಲಿಕ್ ಟಿವಿಗೆ ಬರೆದಿದ್ದು, ಇದಕ್ಕೆ ಪ್ರತಿಕ್ರಿಯೆಯಾಗಿ, ನ್ಯೂಸ್ 18 ತನ್ನಲ್ಲಿ ಭಾಷಣದ ಒರಿಜಿನಲ್ ತುಣುಕುಗಳು ಇಲ್ಲ. ವಿಡಿಯೊ ಭಾರತೀಯ ಜನತಾ ಪಕ್ಷದ ನಾಯಕನ ಟ್ವೀಟ್‌ನಿಂದ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ” ಎಂದು ವಕೀಲ ತ್ರಿದೀಪ್ ಪೈಸ್ ಹೇಳಿದ್ದಾರೆ.

ಇದನ್ನೂ ಓದಿ: ಯುಎಪಿಎ ಅಡಿಯಲ್ಲಿ ಬಂಧಿತ ಹೋರಾಟಗಾರ ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ

ಇನ್ನು ರಿಪಬ್ಲಿಕ್ ಟಿವಿ, ಈ ವಿಡಿಯೋ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರ ಟ್ವೀಟ್‌ನಿಂದ ಪಡೆದಿದ್ದು ಎಂದು ರಿಪಬ್ಲಿಕ್ ಟಿವಿ ಹೇಳಿದೆ ಎಂದು ಪೈಸ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಎರಡು ಸುದ್ದಿ ವಾಹಿನಿಗಳು ರಾಜಕಾರಣಿಗಳ ಟ್ವೀಟ್‌ಗಳಿಂದ ವಿಡಿಯೋ ತೆಗೆದುಕೊಂಡು ತಮ್ಮ ಸುದ್ದಿ ಮಾಡಿವೆ ಎಂದು ವಾದಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ ವಕೀಲ ತ್ರಿದೀಪ್ ಪೈಸ್, ಉಮರ್ ಖಾಲಿದ್ ಅವರ ಇಡೀ ಭಾಷಣವನ್ನು ನ್ಯಾಯಾಲಯದ ಮುಂದೆ ಇಟ್ಟಿದ್ದು, ಖಾಲಿದ್ ಹಿಂಸೆಗೆ ಕರೆ ನೀಡಿಲ್ಲ. ಅವರು ದೇಶದ ಪರವಾಗಿ ಮಾತನಾಡಿದ್ದಾರೆ.  ಪೊಲೀಸರು ಸಂಪೂರ್ಣವಾಗಿ ಭಾಷಣವನ್ನು ಕೇಳಿಲ್ಲ. ಆದರೆ ತಿರುಚಿದ, ಬೇರೆ ಸಂದರ್ಭದ ಹೇಳಿಕೆ ಆಧರಿಸಿ FIR ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಉಮರ್ ಖಾಲಿದ್ ಅವರನ್ನು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿದೆ. ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಖಾಲಿದ್‌ಗೆ ಜಾಮೀನು ನೀಡಲಾಗಿದೆ. ಪ್ರಸ್ತುತ ಪ್ರಕರಣದ ಉಮರ್ ಖಾಲಿದ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಲಾಗಿದೆ.

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿ 24, 2020 ರಂದು ಗಲಭೆ ಭುಗಿಲೆದ್ದಿತು. ಇದರಲ್ಲಿ ಕನಿಷ್ಠ 53 ಸಾವನ್ನಪ್ಪಿದ್ದರು. 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಹಿಂಸಾಚಾರಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು 750 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. 250 ಕ್ಕೂ ಅಧಿಕ ಚಾರ್ಜ್ ಶೀಟ್‌ಗಳನ್ನು ಸಲ್ಲಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...