Homeಮುಖಪುಟಮಹಿಳಾ ಪತ್ರಕರ್ತರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ : ದೆಹಲಿ ಪೊಲೀಸರಿಂದ ದೂರುಗಳ ವಿಚಾರಣೆ ಮುಕ್ತಾಯ

ಮಹಿಳಾ ಪತ್ರಕರ್ತರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ : ದೆಹಲಿ ಪೊಲೀಸರಿಂದ ದೂರುಗಳ ವಿಚಾರಣೆ ಮುಕ್ತಾಯ

- Advertisement -
- Advertisement -

ಅಕ್ಟೋಬರ್‌ನಲ್ಲಿ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಗಳ ವರದಿ ಮಾಡುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮೂವರು ಮಹಿಳಾ ಪತ್ರಕರ್ತರು ಮಾಡಿದ್ದ ಆರೋಪಗಳನ್ನು ದೃಢೀಕರಿಸಲು ಸಾಧ್ಯವಾಗಿಲ್ಲ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾಗಿ ‘ಬಾರ್ ಅಂಡ್ ಬೆಂಚ್’ ಬುಧವಾರ (ನ.18) ವರದಿ ಮಾಡಿದೆ.

ಮೂರು ದೂರುಗಳನ್ನು ಮುಕ್ತಾಯಗೊಳಿಸಲಾಗಿದೆ (ಕ್ಲೋಸ್ ಮಾಡಲಾಗಿದೆ) ಎಂದು ಪೊಲೀಸರು ತಿಳಿಸಿದ್ದಾಗಿ ವರದಿ ಉಲ್ಲೇಖಿಸಿದೆ.

ಅಕ್ಟೋಬರ್ 3ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಅವರನ್ನು ಬಂಧಿಸುತ್ತಿದ್ದ ದೃಶ್ಯವನ್ನು ಚಿತ್ರೀಕರಿಸುತ್ತಿದ್ದಾಗ, ದೆಹಲಿ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ತಮ್ಮನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ (ಲೈಂಗಿಕ ದೌರ್ಜನ್ಯ ಎಸಗಿದ್ದಾರೆ) ಎಂದು ಪತ್ರಕರ್ತೆಯೊಬ್ಬರು ಆರೋಪಿಸಿದ್ದರು. ಈ ಬೆನ್ನಲ್ಲೇ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಭಗತ್ ಅವರು, ಪ್ರತಿಭಟನೆಯ ಸಂದರ್ಭದಲ್ಲಿ ಪತ್ರಕರ್ತೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಪ್ರತಿದೂರು ನೀಡಿದ್ದರು. ಈ ಕುರಿತು ಎಫ್‌ಐಆರ್ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮತ್ತು ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಆಯೋಜಿಸಿದ್ದ ಈ ಪ್ರತಿಭಟನೆಗಳು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದವು.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಮೂವರು ಪತ್ರಕರ್ತೆಯರಲ್ಲಿ ಇಬ್ಬರು ತಮ್ಮ ದೂರುಗಳನ್ನು ಮುಂದುವರಿಸಲು ಬಯಸುವುದಿಲ್ಲ ಎಂದು ತಿಳಿಸಿದ್ದು, ಮೂರನೆಯವರು ಪೊಲೀಸ್ ವಿಚಾರಣೆಗೆ ಹಾಜರಾಗಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಅಲ್ಲದೆ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿರುವುದು ಕಂಡುಬಂದಿಲ್ಲ ಎಂಬುವುದಾಗಿ ತಿಳಿಸಿದ್ದಾರೆ ಎಂದು ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ.

ಜನಸಂದಣಿ ನಿಯಂತ್ರಣ ಕಾರ್ಯಾಚರಣೆಗಳ ಸಮಯದಲ್ಲಿ ಮಹಿಳೆಯರನ್ನು ಕೇವಲ ಮಹಿಳಾ ಪೊಲೀಸ್ ಸಿಬ್ಬಂದಿಯೇ ನಿಭಾಯಿಸಬೇಕು ಎಂಬ ಯಾವುದೇ ಕಟ್ಟುನಿಟ್ಟಿನ ನಿಯಮವಿಲ್ಲ ಎಂಬುವುದಾಗಿ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ತಿಳಿಸಿದೆ.

ಪ್ರತಿಭಟನೆಯ ಸಮಯದಲ್ಲಿ ಜನಸಂದಣಿ ನಿಯಂತ್ರಣ ಕಾರ್ಯಾಚರಣೆಗಳಲ್ಲಿ ಪುರುಷ ಪೊಲೀಸ್ ಸಿಬ್ಬಂದಿಯ ಉಪಸ್ಥಿತಿ ಅಥವಾ ಪಾಲ್ಗೊಳ್ಳುವಿಕೆಯನ್ನು ಮುಂದಿಟ್ಟುಕೊಂಡು ದುರ್ನಡತೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ವಾದಿಸಿದ್ದಾರೆ.

ಪತ್ರಕರ್ತರು, ವಕೀಲರು ಮತ್ತು ಇತರ ವೃತ್ತಿಪರರ ಕರ್ತವ್ಯ ನಿರ್ವಹಣೆಗೆ ‘ಅಡ್ಡಿಪಡಿಸಬಾರದು’ ಎಂದು ಸುಪ್ರೀಂ ಕೋರ್ಟ್ ಅಕ್ಟೋಬರ್ 11 ರಂದು ದೆಹಲಿ ಪೊಲೀಸರಿಗೆ ನೀಡಿದ್ದ ನಿರ್ದೇಶನವು ರೀಲ್ ಮೇಕರ್ಸ್ ಮತ್ತು ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳಿಗೆ ಅನ್ವಯಿಸುವುದಿಲ್ಲ ಎಂಬುವುದಾಗಿ ಅಫಿಡವಿಟ್‌ನಲ್ಲಿ ವಾದಿಸಲಾಗಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ಯಾವುದೇ ಪತ್ರಕರ್ತರಿಗೆ ತಮ್ಮ ಕರ್ತವ್ಯ ನಿರ್ವಹಿಸಲು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾಗಿ ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ.

ಅಕ್ಟೋಬರ್‌ನಲ್ಲಿ ಗ್ಯಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ, ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಪ್ರತಿಭಟನೆಗಳ ವರದಿ ಮಾಡುತ್ತಿದ್ದ ಹಲವಾರು ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಅಕ್ರಮ ಪ್ರತಿಭಟನಾ ಸ್ಥಳಗಳಿಂದ ಪ್ರತಿಭಟನಾಕಾರರನ್ನು ಚದುರಿಸಲು, ತೆರವುಗೊಳಿಸಲು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಮರುಸ್ಥಾಪಿಸಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

“ಮಾಧ್ಯಮ ಸಿಬ್ಬಂದಿ ತಮ್ಮ ವೃತ್ತಿಪರ ಕರ್ತವ್ಯಗಳನ್ನು ಕಾನೂನುಬದ್ಧವಾಗಿ ನಿರ್ವಹಿಸುವಾಗ ಅವರನ್ನು ವಶಕ್ಕೆ ಪಡೆಯುವ, ನಿರ್ಬಂಧಿಸುವ ಅಥವಾ ಅಡ್ಡಿಪಡಿಸುವ ಉದ್ದೇಶವನ್ನು ಇದು ಹೊಂದಿರಲಿಲ್ಲ ಮತ್ತು ಆ ನಿಟ್ಟಿನಲ್ಲಿ ನಿರ್ದೇಶಿತವಾಗಿರಲಿಲ್ಲ” ಎಂದು ಪೊಲೀಸರು ವಾದಿಸಿದ್ದಾರೆ.







































 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಪರಂಕುಂದ್ರಂ ವಿವಾದ | ಹೈಕೋರ್ಟ್ ಆದೇಶಕ್ಕೆ ತಡೆ ನೀಡದಿದ್ದರೆ ಸಾವಿರಾರು ಸರ್ವೆ ಕಂಬಗಳು ಧಾರ್ಮಿಕ ಸ್ವರೂಪ ಪಡೆಯಲಿವೆ : ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಸರ್ಕಾರ ವಾದ

ಮಧುರೈನ ತಿರುಪರಂಕುಂದ್ರಂ ಬೆಟ್ಟದ ಮೇಲಿರುವ ದರ್ಗಾದ ಸಮೀಪದ ಕಲ್ಲಿನ ಸ್ತಂಭದ ಮೇಲೆ ಸಾಂಪ್ರದಾಯಿಕ ಕಾರ್ತಿಕ ದೀಪವನ್ನು ಬೆಳಗಿಸಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ತಮಿಳುನಾಡು ಸರ್ಕಾರ ಬುಧವಾರ (ನ.18)...

ಇಬ್ಬರು ಅತ್ಯಾಚಾರ ಅಪರಾಧಿಗಳಿಗೆ ಜಾಮೀನು : ಕುಟುಂಬ ಸಮೇತ ಗುಜರಾತ್ ತೊರೆದ ಬಿಲ್ಕಿಸ್ ಬಾನು-ವರದಿ

ಅತ್ಯಾಚಾರ, ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ, ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ನಿರ್ಧಾರದಿಂದ 'ಭಯಭೀತರಾದ' ಮತ್ತು 'ಆಘಾತಕ್ಕೊಳಗಾದ' ಬಿಲ್ಕಿಸ್ ಬಾನು ಹಾಗೂ ಅವರ ಕುಟುಂಬಸ್ಥರು ಈ ತಿಂಗಳ...

ಪತ್ರಕರ್ತರು ಬೇರೆ, ರೀಲ್-ಮೇಕರ್‌ಗಳು ಬೇರೆ: ರೀಲ್-ಮೇಕರ್‌ಗಳಿಗೆ ಮಾಧ್ಯಮ ರಕ್ಷಣೆ ಅನ್ವಯಿಸುವುದಿಲ್ಲ: ದೆಹಲಿ ಪೊಲೀಸರಿಂದ ಸುಪ್ರೀಂ ಕೋರ್ಟ್‌ಗೆ ಅಫಿಡೆವಿಟ್

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಪತ್ರಕರ್ತರಿಗೆ ನೀಡಲಾದ ರಕ್ಷಣಾ ಆದೇಶಗಳು ಸಾಮಾಜಿಕ ಜಾಲತಾಣಗಳ ರೀಲ್-ಮೇಕರ್‌ಗಳು ಹಾಗೂ ಕಂಟೆಂಟ್ ಕ್ರಿಯೇಟರ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ...

ಮತ್ತೆ ಉಲ್ಬಣಗೊಂಡ ಸಂಘರ್ಷ : ಕುವೈತ್‌ನ ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ವೈಮಾನಿಕ ದಾಳಿ

ಹೊರ್ಮುಝ್ ಜಲಸಂಧಿಯಲ್ಲಿರುವ ಕೇಶ್ಮ್ ದ್ವೀಪದ (Qeshm Island) ಮೇಲೆ ಅಮೆರಿಕ ದಾಳಿ ನಡೆಸಿದ ನಂತರ, ಕುವೈತ್‌ನಲ್ಲಿರುವ ಅಮೆರಿಕದ ಡ್ರೋನ್ ಮತ್ತು ಕ್ಷಿಪಣಿ ನೆಲೆಗಳನ್ನು ರಾತ್ರೋರಾತ್ರಿ ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ. ಇದು...

ದೇವಸ್ಥಾನಗಳಲ್ಲಿ ಪ್ರಾಣಿ ಬಲಿ ನಿಷೇಧ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್; ಕಾಯ್ದೆ ತಿದ್ದುಪಡಿ ಮನವಿಗೆ ಸಿಗದ ಮನ್ನಣೆ

ದೇವಸ್ಥಾನಗಳು ಸೇರಿದಂತೆ ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಪ್ರಾಣಿಗಳನ್ನು ಬಲಿ ನೀಡುವುದನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸುಪ್ರೀಂ ಕೋರ್ಟ್ ಬುಧವಾರ (ನವೆಂಬರ್ 18) ವಜಾಗೊಳಿಸಿದೆ ಎಂದು ‘ಬಾರ್...

‘ಆಕಾಶವೇನೂ ಕಳಚಿಬೀಳುವುದಿಲ್ಲ, ಅವರು ಮಧ್ಯಂತರ ಜಾಮೀನಿನ ಮೇಲೆಯೇ ಇರಲಿ’: ಆಜಮ್ ಖಾನ್ ಜಾಮೀನಿಗೆ ತುರ್ತು ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ! ಇಡಿಗೆ ಮತ್ತೆ ಹಿನ್ನಡೆ

ಜಾರಿ ನಿರ್ದೇಶನಾಲಯ (ED) ನಡೆಸಿದ ಬಂಧನ ಪ್ರಕ್ರಿಯೆಯನ್ನು ‘ಪ್ರೇರಿತ ಮತ್ತು ದುರುದ್ದೇಶಪೂರಿತ’ ಎಂದು ಕಟುವಾಗಿ ಟೀಕಿಸಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಸಚಿವ ಆಜಮ್ ಖಾನ್ ಅವರಿಗೆ...

2024ರ ಚುನಾವಣೆ | 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತ ಚಲಾಯಿಸಿದ್ದಾರೆ ಎಂಬ ದಾಖಲೆಯೇ ಚುನಾವಣಾ ಆಯೋಗದ ಬಳಿಯಿಲ್ಲ : ‘ದಿ ರಿಪೋರ್ಟರ್ಸ್ ಕಲೆಕ್ಟಿವ್’ ವರದಿ

2024ರಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ಒಟ್ಟು 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದರ...

‘Shall we move?’: ಮನಿಲಾ ಕ್ವಾಡ್ ಶೃಂಗಸಭೆಯಲ್ಲಿ ಟ್ರಂಪ್‌ರ ಮಾತು ಮುಗಿಸಲು ಹೆಣಗಾಡಿದ ಮೋದಿ; ವೈರಲ್ ಆದ ಮುಜುಗರದ ಕ್ಷಣ

ಫಿಲಿಪೈನ್ಸ್‌ನ ರಾಜಧಾನಿ ಮನಿಲಾದಲ್ಲಿ ನವೆಂಬರ್ 17ರಂದು ನಡೆದ ಕ್ವಾಡ್  ನಾಯಕರ ಶೃಂಗಸಭೆಯ ಫೋಟೋ-ಆಪ್ ಒಂದು ಅನಿರೀಕ್ಷಿತ ಮತ್ತು ಅಸಹಜ ಮುಜುಗರದ ದೃಶ್ಯಕ್ಕೆ ಸಾಕ್ಷಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿಗದಿತ ಫೋಟೋ...

ಸಿಜೆಐ ಅವಹೇಳನ ಆರೋಪ : ವಕೀಲನಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವೆಂಬರ್ 16ರಂದು ಬಹಿರಂಗ ನ್ಯಾಯಾಲಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ವಕೀಲರಿಗೆ ಸುಪ್ರೀಂ ಕೋರ್ಟ್ ಇಂದು (ನವೆಂಬರ್ 18) ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ವಕೀಲರ ವಿರುದ್ಧ ಕ್ರಿಮಿನಲ್...

SIR ನಿರ್ಧಾರಗಳ ಕುರಿತು 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಇಂಡಿಯಾ ಒಕ್ಕೂಟ ಅರ್ಜಿ : ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ 'ಇಂಡಿಯಾ' ಒಕ್ಕೂಟದ ನಾಯಕರು, ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್...