Homeಮುಖಪುಟಕೊಲೆ ಆರೋಪಿ ಬಾಕ್ಸರ್ ಸುಶೀಲ್ ಕುಮಾರ್ ಜೊತೆ ದೆಹಲಿ ಪೊಲೀಸರ ಸೆಲ್ಫಿ!: ವಿಚಾರಣೆಗೆ ಆದೇಶ

ಕೊಲೆ ಆರೋಪಿ ಬಾಕ್ಸರ್ ಸುಶೀಲ್ ಕುಮಾರ್ ಜೊತೆ ದೆಹಲಿ ಪೊಲೀಸರ ಸೆಲ್ಫಿ!: ವಿಚಾರಣೆಗೆ ಆದೇಶ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಬಾಕ್ಸರ್ ಸುಶೀಲ್‍ ಕುಮಾರ್ ಜೊತೆಗೆ ದೆಹಲಿ ಪೊಲೀಸರು ಫೋಟೋ-ಸೆಲ್ಫಿ ಸೆಷನ್‍ ನಡೆಸಿದ ಫೋಟೊಗಳು ವೈರಲ್‍ ಆದ ಬಳಿಕ ವಿಚಾರಣೆಗೆ ಆದೇಶ ನೀಡಲಾಗಿದೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಸುಶೀಲ್‍ ಕುಮಾರ್ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಆತನ ಜೊತೆಗೆ ಕರ್ತ್ಯವಲ್ಲಿದ್ದ ಪೊಲೀಸರು ಸೆಲ್ಫಿ ತೆಗೆದುಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಸೆಲೆಬ್ರಿಟಿ ಬಾಕ್ಸರ್ ಜೊತೆ ಫೋಟೊ-ಸೆಲ್ಫಿ ಹುಚ್ಚಿಗೆ ಬಿದ್ದ ಕರ್ತವ್ಯದಲ್ಲಿದ್ದ ಪೊಲೀಸರು, ತೆಗೆದುಕೊಂಡ ಫೋಟೊಗಳನ್ನು ತಮ್ಮ ವ್ಯಾಟ್ಸಾಪ್‍ ಗುಂಪುಗಳಲ್ಲಿ ಹಂಚಿಕೊಂಡು ಸಂಭ್ರಮಿಸಿದರು. ಇದು ಜಾಲತಾಣದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತು. ‘ಸುಶೀಲ್‍ ಅವರನ್ನು ಗಣ್ಯ ಅತಿಥಿ ಎಂಬಂತೆ’ ಹೈಲೈಟ್‍ ಮಾಡಿದ ಈ ಘಟನೆಯನ್ನು ನೂರಾರು ಜನರು ಟೀಕಿಸಿದ ನಂತರ, ಈಗ ಪೊಲೀಸ್‍ ಮುಖ್ಯಸ್ಥರು ವಿಚಾರಣೆಗೆ ಆದೇಶಿಸಿದ್ದಾರೆ.

ದೆಹಲಿ ಪೊಲೀಸರ ವಿಶೇಷ ಘಟಕ ಮತ್ತು 3ನೇ ಬೆಟಾಲಿಯನ್‍ನ ಪೊಲೀಸರು ಸುಶೀಲ್‍ ಕುಮಾರ್ ಅವರನ್ನು ಶುಕ್ರವಾರ ಬೆಳಿಗ್ಗೆ ಮಂಡೋಲಿ ಜೈಲಿನಿಂದ ತಿಹಾರ್ ಜೈಲಿಗೆ ಕರೆದೊಯ್ಯುತ್ತಿದ್ದಾಗ ಅವರೊಂದಿಗೆ ಫೋಟೊಗಳನ್ನು ತೆಗೆದುಕೊಂಡು ಸಂಭ್ರಮಿಸಿದ್ದಾರೆ. ಸೆಲ್ಫಿ ಸೆಷನ್‍ ನಡೆಸಿದ್ದಾರೆ. ನ್ಯಾಯಾಲಯವು ಸುಶೀಲ್‍ ನ್ಯಾಯಾಂಗ ಬಂಧನವನ್ನು ಜುಲೈ 9 ರವರೆಗೆ ವಿಸ್ತರಿಸಿದೆ.

ಚಂತ್ರಾಸಾಲ್‍ ಕ್ರೀಡಾಂಗಣದೊಳಗೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಕುಸ್ತಿಪಟು ಸಾಗರ್ ಧನಕರ್ ಕೊಲೆಗೆ ಸಂಬಂಧಿಸಿದಂತೆ ಸುಶೀಲ್‍ ಅವರನ್ನು ಬಂಧಿಸಲಾಗಿದೆ.

ಡಿಜಿ (ತಿಹಾರ್ ಜೈಲ್‍) ಸಂದೀಪ್ ಗೋಯೆಲ್, “ಸುಶೀಲ್ ಅವರನ್ನು ಮಂಡೋಲಿ ಜೈಲಿನಿಂದ ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಸುಶೀಲ್‌ಗೆ ಸಂಭವನೀಯ ಭದ್ರತಾ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, 3ನೇ ಬೆಟಾಲಿಯನ್‌ನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು” ಎಂದಿದ್ದಾರೆ.

ಮಂಡೋಲಿ ಜೈಲಿಗೆ ತಲುಪಿದ ನಂತರ ಪೊಲೀಸರು ಆರೋಪಿಗಳ ಜೊತೆ ಚಿತ್ರಗಳನ್ನು ಕ್ಲಿಕ್ ಮಾಡಲು ಪ್ರಾರಂಭಿಸಿದರು. 3ನೇ ಬೆಟಾಲಿಯನ್‌ನ ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ಅಪಾಯವಿರುವ ಕೈದಿಗಳ ಚಿತ್ರಗಳನ್ನು ತಮ್ಮ ಹಿರಿಯ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲು ತಿಳಿಸಲಾಗಿತ್ತು. ಆದರೆ, ಶುಕ್ರವಾರ, ತಮ್ಮ ಹಿರಿಯ ಅಧಿಕಾರಿಗಳೊಂದಿಗೆ ಫೋಟೋಗಳನ್ನು ಹಂಚಿಕೊಂಡರು.. ಜೊತೆಗೆ ತಮ್ಮ ಅಧಿಕೃತ ವಾಟ್ಸಾಪ್ ಗುಂಪುಗಳಲ್ಲಿ ಮತ್ತು ಅವರ ಸಂಬಂಧಿಕರೊಂದಿಗೆ ಚಿತ್ರಗಳನ್ನು ಹಂಚಿಕೊಳ್ಳಲು ಪ್ರಾರಂಭಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...