Homeಚಳವಳಿರೈತರ ಹತ್ಯಾಕಾಂಡ: ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

ರೈತರ ಹತ್ಯಾಕಾಂಡ: ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

’ಪೊಲೀಸರು ನಮ್ಮ ಖಾಸಗಿ ಭಾಗಗಳಿಗೆ ಪದೇ ಪದೇ ಹೊಡೆದು ಹಲ್ಲೆ ನಡೆಸಿದ್ದಾರೆ’ ಎಂದು ಹಲ್ಲೆಗೊಳಗಾದ ವಿದ್ಯಾರ್ಥಿನಿಯರು ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ವಿರೋಧಿಸಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಶನ್ (AISA) ವಿದ್ಯಾರ್ಥಿಗಳು ಭಾನುವಾರ (ಅಕ್ಟೋಬರ್ 10) ಗೃಹ ಸಚಿವ ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಇಬ್ಬರು ವಿದ್ಯಾರ್ಥಿನಿಯರ ಮೇಲೆ ದೆಹಲಿ ಪೊಲೀಸ್ ಸಿಬ್ಬಂದಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಮಂಗಳವಾರ ಗೃಹ ಸಚಿವ ಅಮಿತ್ ಶಾ ನಿವಾಸದ ಬಳಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾಗ ಇಬ್ಬರು ಮಹಿಳಾ ವಿದ್ಯಾರ್ಥಿನಿಯರ ಮೇಲೆ ದೆಹಲಿ ಪೊಲೀಸರ ಮಹಿಳಾ ಕಾನ್‌ಸ್ಟೇಬಲ್‌ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ತಮ್ಮ ದೇಹದ ಖಾಸಗಿ ಭಾಗಗಳಿಗೆ ಪದೇ ಪದೇ ಒದೆಯುತ್ತಿದ್ದರು ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಲ್ಲೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. “15 ರಿಂದ 17 ವಿದ್ಯಾರ್ಥಿಗಳನ್ನು ಹೊಂದಿದ್ದ ಪ್ರತಿಭಟನೆಯು ಮಧ್ಯಾಹ್ನ 1 ಗಂಟೆಗೆ ಆರಂಭವಾಯಿತು. ವಿದ್ಯಾರ್ಥಿಗಳು “ನಿರಾಯುಧರಾಗಿ, ಶಾಂತಿಯುತವಾಗಿ ಪ್ಲೆಕಾರ್ಡ್‌ಗಳು ಮತ್ತು ಪೋಸ್ಟರ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು” ಎಂದಿದ್ದಾರೆ.

ಇದನ್ನೂ ಓದಿ: ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ಪ್ರತಿಭಟನಾ ಸ್ಥಳದಲ್ಲಿ ಆರಂಭದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳು ಇರಲಿಲ್ಲ. ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಕ್ರೂರವಾಗಿ ನಡೆಸಿಕೊಂಡು ಬಳಿಕ ಬಸ್‌ನಲ್ಲಿ ಬಂಧಿಸಲಾಯಿತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಯುವಕರ ಮೇಲೆ ಪೊಲೀಸರು ನಡೆಸುತ್ತಿದ್ದ ಹಲ್ಲೆಯನ್ನು ರೆಕಾರ್ಡ್ ಮಾಡುತ್ತಿದ್ದ ವೇಳೆ ಪೊಲೀಸರು ತಮ್ಮ ಪೋನ್‌ಗಳನ್ನು ಕಸಿದುಕೊಂಡಿದ್ದಾರೆ. ಬಳಿಕ ಮಹಿಳಾ ಪೊಲೀಸರು ಬಂದು ತಮ್ಮನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದ್ದಾರೆ.

AISA ತನ್ನ ಟ್ವಿಟರ್‌ ಖಾತೆಯಲ್ಲಿ ಹಲ್ಲೆ ಕುರಿತು ಹಲವು ವಿಡಿಯೊ, ಫೋಟೋಗಳನ್ನು ಹಂಚಿಕೊಂಡಿದೆ. ಅದರಲ್ಲಿ ಹಲ್ಲೆಗೊಳಗಾದ ವಿದ್ಯಾರ್ಥಿನಿಯರು ಅಳುತ್ತಾ, ತಮ್ಮ ಖಾಸಗಿ ಭಾಗಗಳಿಗೆ ಪೊಲೀಸರು ಪದೇ ಪದೇ ಒದೆಯುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

Image

ಎಐಎಸ್‌ಎ ತನ್ನ ಹೇಳಿಕೆಯಲ್ಲಿ, “ಮಹಿಳಾ ಪ್ರತಿಭಟನಾಕಾರರ ಮೇಲೆ ಹಲ್ಲೆ ಮಾಡುವಂತೆ ಸ್ಥಳದಲ್ಲಿದ್ದ ಸಿಬ್ಬಂದಿಗೆ ಸ್ಪಷ್ಟವಾಗಿ ಸೂಚಿಸಿದ ಎಸಿಪಿ ಚಾಣಕ್ಯಪುರಿ ಪ್ರಜ್ಞಾ ಆನಂದ್ ಅವರನ್ನು ವಜಾಗೊಳಿಸಬೇಕು. ಲೈಂಗಿಕ ದೌರ್ಜನ್ಯ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು” ಎಂದು ಒತ್ತಾಯಿಸಿದೆ.

ಎಸಿಪಿ ಚಾಣಕ್ಯಪುರಿ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದು, ಆರೋಪಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ ಎಂದು ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಗೃಹ ಸಚಿವರ ನಿವಾಸದ ಹೊರಗೆ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ 12 ಪ್ರತಿಭಟನಾಕಾರರನ್ನು ಬಂಧಿಸಲಾಯಿತು ಮತ್ತು ನಂತರ ಬಿಡುಗಡೆ ಮಾಡಲಾಯಿತು” ಎಂದು ಮಾಹಿತಿ  ನೀಡಿದ್ದಾರೆ.

ಘಟನೆಯನ್ನು ಖಂಡಿಸಿರುವ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ, “ಅಕ್ಟೋಬರ್ 10 ರಂದು ದೆಹಲಿಯಲ್ಲಿರುವ ಗೃಹ ಸಚಿವ ಅಮಿತ್ ಶಾ ನಿವಾಸದ ಹೊರಗೆ ಲಖಿಂಪುರ್ ಖೇರಿ ಹತ್ಯಾಕಾಂಡದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ದೆಹಲಿ ಪೊಲೀಸರು ನಡೆಸಿರು ಭೀಕರ ಲೈಂಗಿಕ ದೌರ್ಜನ್ಯವನ್ನು SKM ತೀವ್ರವಾಗಿ ಖಂಡಿಸುತ್ತದೆ” ಎಂದಿದೆ.

“ಎಸಿಪಿ ಚಾಣಕ್ಯಪುರಿಯನ್ನು ವಜಾಗೊಳಿಸಬೇಕು. ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಎಂಬ ವಿದ್ಯಾರ್ಥಿಗಳ ಬೇಡಿಕೆಗೆ ಎಸ್‌ಕೆಎಂ ಬೆಂಬಲಿಸುತ್ತದೆ” ಎಂದು ಹೇಳಿದೆ.

ಘಟನೆಯನ್ನು ಖಂಡಿಸಿ, ಎಐಎಸ್ಎ ಅಶೋಕ ರಸ್ತೆಯಲ್ಲಿರುವ ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಹೊರಗೆ ಬುಧವಾರ ಪ್ರತಿಭಟನೆಗೆ ಕರೆ ನೀಡಿದೆ.


ಇದನ್ನೂ ಓದಿ: ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...