Homeಮುಖಪುಟದೆಹಲಿಯಲ್ಲಿ 25% ಕಡಿಮೆಯಾದ ಮಾಲಿನ್ಯ : ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಕೇಜ್ರಿವಾಲ್

ದೆಹಲಿಯಲ್ಲಿ 25% ಕಡಿಮೆಯಾದ ಮಾಲಿನ್ಯ : ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಕೇಜ್ರಿವಾಲ್

- Advertisement -
- Advertisement -

ಕಳೆದ ಮೂರು ವರ್ಷಗಳಲ್ಲಿ ದೆಹಲಿಯಲ್ಲಿ ಮಾಲಿನ್ಯವು ಶೇಕಡಾ 25 ರಷ್ಟು ಕಡಿಮೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ನಗರದಲ್ಲಿನ ಮಾಲಿನ್ಯ ಮಟ್ಟವನ್ನು ತಗ್ಗಿಸುವ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಮತ್ತು ಪುರಸಭೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

“ದೆಹಲಿಯಲ್ಲಿ ಮಾಲಿನ್ಯ ಕಡಿಮೆಯಾಗಲು ಪ್ರಾರಂಭಿಸಿದೆ. ಕಳೆದ ಮೂರು ವರ್ಷಗಳಲ್ಲಿ ನಗರದಲ್ಲಿ ಮಾಲಿನ್ಯ ಗಮನಾರ್ಹವಾಗಿ ಕಡಿಮೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಇಡೀ ವಿಶ್ವ ಮತ್ತು ದೇಶಗಳ ಇತರ ನಗರಗಳಲ್ಲಿ ಮಾಲಿನ್ಯ ಹೆಚ್ಚುತ್ತಿರುವಾಗ ಅದು ದೆಹಲಿಯಲ್ಲಿ ಕ್ಷೀಣಿಸುತ್ತಿದೆ ಎಂದಿರುವ ಕೇಜ್ರಿವಾಲ್, “2012 ರಿಂದ 2014 ರವರೆಗೆ ಪಿಎಂ 2.5 ಮಾಲಿನ್ಯ 154 ಆಗಿತ್ತು. 2016 ರಿಂದ 2018 ರವರೆಗೆ ಅದು ಕಡಿಮೆಯಾಗಿದ್ದು 115 ಕ್ಕೆ ಇಳಿದಿದ್ದು ಮಾಲಿನ್ಯವು ಶೇಕಡಾ 25 ರಷ್ಟು ಕಡಿಮೆಯಾಗಿದೆ” ಎಂದು ತಿಳಿಸಿದ್ದಾರೆ.

ಪೂರ್ವ ಮತ್ತು ಪಶ್ಚಿಮ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದಾಗಿ, ದೆಹಲಿಗೆ ಪ್ರವೇಶಿಸುವ ಲಾರಿಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡುಬಂದಿರುವುದರಿಂದ ನಗರದಲ್ಲಿನ ಮಾಲಿನ್ಯ ಮಟ್ಟವನ್ನು ತಗ್ಗಿಸಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಪೂರ್ವ ಮತ್ತು ಪಶ್ಚಿಮ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ” ನಿರ್ಮಾಣವು ಮಾಲಿನ್ಯದ ಕುಸಿತಕ್ಕೆ ಒಂದು ಪ್ರಮುಖ ಕಾರಣವಾಗಿದೆ. ಇದಲ್ಲದೆ ಪರಿಸರ ಪರಿಹಾರ ಶುಲ್ಕವನ್ನು ವಿಧಿಸಲಾಯಿತು. ಆದ್ದರಿಂದ, ದೆಹಲಿಯ ಹೊರಗೆ ಟ್ರಕ್‌ಗಳು ರಸ್ತೆಗಳನ್ನು ಬಳಸಲು ಪ್ರಾರಂಭಿಸಿದವು. ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಿಂದಾಗಿ ದೆಹಲಿಗೆ ಪ್ರವೇಶಿಸುವ ಟ್ರಕ್‌ಗಳ ಸಂಖ್ಯೆ ತಲಾ ಶೇ. 30 ರಷ್ಟು ಕಡಿಮೆಯಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಜನರ ಪರವಾಗಿ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ...

0
ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು...