Homeಮುಖಪುಟದೆಹಲಿ ವಾಯುಮಾಲಿನ್ಯ: ಸೋಮವಾರದಿಂದ ಶಾಲಾ- ಕಾಲೇಜು ಮತ್ತೆ ಆರಂಭ

ದೆಹಲಿ ವಾಯುಮಾಲಿನ್ಯ: ಸೋಮವಾರದಿಂದ ಶಾಲಾ- ಕಾಲೇಜು ಮತ್ತೆ ಆರಂಭ

- Advertisement -
- Advertisement -

ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯದಿಂದ ಮುಚ್ಚಲಾಗಿದ್ದ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಮತ್ತೆ ನವೆಂಬರ್ 29 ರ ಸೋಮವಾರದಿಂದ ತೆರೆಯಲಿವೆ ಎಂದು ದೆಹಲಿ ಸರ್ಕಾರ ಬುಧವಾರ ತಿಳಿಸಿದೆ.

“ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ನಗರದಲ್ಲಿ ಮತ್ತೆ ತೆರೆಯಲು ಅನುಮತಿ ನೀಡಲಾಗುವುದು. ನವೆಂಬರ್ 29 ಕ್ಕೆ ಸರ್ಕಾರಿ ಕಚೇರಿಗಳ ವರ್ಕ್ ಫ್ರಂ ಹೋಂ ಮುಗಿಯುತ್ತದೆ. ಆದರೆ, ಕಚೇರಿಗೆ ಬರಲು ಎಲ್ಲರೂ ಸಾರ್ವಜನಿಕ ಸಾರಿಗೆಯನ್ನು ಬಳಸಲು ನಾವು ವಿನಂತಿಸುತ್ತೇವೆ” ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ.

ನವೆಂಬರ್ 27 ರಿಂದ ದೆಹಲಿಯಲ್ಲಿ ಅಗತ್ಯವಲ್ಲದ ವಸ್ತುಗಳನ್ನು ಸಾಗಿಸುವ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಟ್ರಕ್‌ಗಳಿಗೆ ಅನುಮತಿ ನೀಡಲಾಗುವುದು. ಅಗತ್ಯವಲ್ಲದ ವಸ್ತುಗಳನ್ನು ಸಾಗಿಸುವ ಡೀಸೆಲ್ ಮತ್ತು ಪೆಟ್ರೋಲ್ ಟ್ರಕ್‌ಗಳ ಪ್ರವೇಶದ ಮೇಲಿನ ನಿಷೇಧ ಡಿಸೆಂಬರ್ 3 ರವರೆಗೆ ಮುಂದುವರಿಯುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ವಾಯು ಮಾಲಿನ್ಯ ತಡೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲು ಸಿದ್ಧ: ದೆಹಲಿ ಸರ್ಕಾರ

ದೆಹಲಿಯ ಏರ್ ಕ್ವಾಲಿಟಿ ಅರ್ಲಿ ವಾರ್ನಿಂಗ್ ಸಿಸ್ಟಮ್ ಪ್ರಕಾರ, ಬುಧವಾರದಂದು ದೆಹಲಿಯ ಗಾಳಿಯ ಗುಣಮಟ್ಟವು ‘ಅತ್ಯಂತ ಕಳಪೆ’ ವಿಭಾಗದಲ್ಲಿರುವ ಸಾಧ್ಯತೆಯಿದೆ.

ನವೆಂಬರ್‍ 15 ರಂದು ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಯಲು  “ಸಂಪೂರ್ಣ ಲಾಕ್‌ಡೌನ್”ನಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧ ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ವಾಯುಮಾಲಿನ್ಯದ ಕುರಿತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗಾಳಿಯ ಗುಣಮಟ್ಟದ ಬಿಕ್ಕಟ್ಟನ್ನು ಎದುರಿಸಲು ಹಲವು ಕ್ರಮಗಳನ್ನು ಜಾರಿಗೊಳಿಸಿದ್ದರು. ಒಂದು ವಾರ ಶಾಲೆಗಳನ್ನು ಮುಚ್ಚುವುದು, ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸುವುದು ಮತ್ತು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಬೇಕು ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...