Homeಮುಖಪುಟದೆಹಲಿ: ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ 'ಮರೆತುಬಿಡಿ' ಎಂದ ಪ್ರಾಂಶುಪಾಲರು

ದೆಹಲಿ: ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ ‘ಮರೆತುಬಿಡಿ’ ಎಂದ ಪ್ರಾಂಶುಪಾಲರು

- Advertisement -
- Advertisement -

ತಮಗಾದ ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ‘ಮರೆತುಬಿಡಿ, ಸುಮ್ಮನಿರಿ’ ಎನ್ನುವ ಮೂಲಕ ಪ್ರಕರಣ ಮುಚ್ಚು ಹಾಕಲು ಯತ್ನಿಸಿದ ಘಟನೆ ದೆಹಲಿಯ ಮುನಿಸಿಪಲ್ ಶಾಲೆಯಲ್ಲಿ ಜರುಗಿದೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಆರೋಪಿಸಿದ್ದಾರೆ.

ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುನಿಸಿಪಲ್ ಕಾರ್ಪೊರೇಷನ್ ಆಯುಕ್ತರಿಗೆ ಸಮನ್ಸ ಕಳಿಸಿರುವ ಅವರು, “ಆಯುಕ್ತರು ಹೊಣೆಗಾರಿಕೆಯನ್ನು ಖಚಿತಪಡಿಸಬೇಕು ಮತ್ತು ಪೊಲೀಸರು ಕೂಡಲೇ ಆರೋಪಿಯನ್ನು ಬಂಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಏಪ್ರಿಲ್ 30 ರಂದು ಶಿಕ್ಷಕರು ಬರುವ ಮುನ್ನವೇ ಅಪರಿಚಿತ ವ್ಯಕ್ತಿಯೊಬ್ಬ ತರಗತಿ ಕೊಠಡಿಯೊಳಕ್ಕೆ ಬಂದು ಬಾಗಿಲು ಹಾಕಿ ಇಬ್ಬರು ಹೆಣ್ಣು ಮಕ್ಕಳ ಬಟ್ಟೆ ಬಿಚ್ಚಿಸಿದ್ದಾನೆ. ಅವರ ಮುಂದೆಯೇ ಮೂತ್ರ ವಿಸರ್ಜನೆ ಮಾಡುವ ಮೂಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆ ವಿದ್ಯಾರ್ಥಿಗಳು ಈ ಕುರಿತು ಪ್ರಾಂಶುಪಾಲರ ಬಳಿ ದೂರು ನೀಡಲು ಹೋದರೆ ಅವರು, ಇದನ್ನೆಲ್ಲ ಮರೆತುಬಿಡಿ, ಸುಮ್ಮನೆ ಇರಿ ಎಂದು ಹೇಳುವ ಮೂಲಕ ಉಡಾಫೆಯಾಗಿ ವರ್ತಿಸಿದ್ದಾರೆ ಎಂದು ಸ್ವಾತಿ ಮಾಲಿವಾಲ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಇದೇ ರೀತಿ ಅತ್ಯಾಚಾರದ ವಿರುದ್ಧ ದೂರು ನೀಡಲು ಹೋದ 13 ವರ್ಷದ ಬಾಲಕಿ ಮೇಲೆ ಪೊಲೀಸ್ ಅಧಿಕಾರಿಯೇ ಮತ್ತೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಲಿತ್‌ ಪುರದಲ್ಲಿ ನಡೆದಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಅತ್ಯಾಚಾರದ ದೂರು ನೀಡಲು ಹೋದ 13 ವರ್ಷದ ಬಾಲಕಿ ಮೇಲೆ ಮತ್ತೆ ಪೊಲೀಸ್‌ನಿಂದಲೇ ಅತ್ಯಾಚಾರ ಆರೋಪ

ನಾಲ್ಕು ಜನರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದು ಬಾಲಕಿಯು ತನ್ನ ಸಂಬಂಧಿಕರೊಂದಿಗೆ ದೂರು ನೀಡಲು ಲಲಿತ್‌ಪುರ್ ಪೊಲೀಸ್ ಠಾಣೆಗೆ ಹೋಗಿದ್ದರು. ಆಗ ಅಲ್ಲಿನ ಸ್ಟೇಷನ್ ಹೌಸ್ ಆಫೀಸರ್ ತಿಲಕ್‌ಧಾರಿ ಸರೋಜ್ ಎಂಬಾತ ಮತ್ತೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿಯ ದೂರಿನ ಆಧಾರದಲ್ಲಿ ಆರೋಪಿ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿ, ಆತನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...