HomeಅಂಕಣಗಳುSIRDELHI PROTEST: ಸಿಜೆಪಿಯ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದೆಹಲಿ...

DELHI PROTEST: ಸಿಜೆಪಿಯ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಪೊಲೀಸರು 

- Advertisement -
- Advertisement -

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕರಾದ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಪೊಲೀಸರು ಶನಿವಾರ ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ತಲುಪುವುದನ್ನು ತಡೆಯುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಜೆಪಿ ಆರೋಪಿಸಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದೆ.

ಸಿಜೆಪಿ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಂಬೈಗೆ ತೆರಳಿದ್ದ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು ಶುಕ್ರವಾರ ಅಲ್ಲಿಯೇ ಉಳಿದುಕೊಂಡಿದ್ದರು. ಶನಿವಾರ ಬೆಳಗ್ಗೆ ದೆಹಲಿಗೆ ವಿಮಾನದಲ್ಲಿ ಆಗಮಿಸಿದ ಅವರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸುವುದನ್ನು ತಡೆಯಲು ಪೂರ್ವಯೋಜಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷ ದೂರಿದೆ.

ಮೂವರು ನಾಯಕರನ್ನು ಯಾವುದೇ ಷರತ್ತುಗಳಿಲ್ಲದೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಸಿಜೆಪಿ ಒತ್ತಾಯಿಸಿದೆ. ಪೊಲೀಸರ ಕ್ರಮವು ನಾಗರಿಕರ ಮುಕ್ತ ಸಂಚಾರದ ಹಕ್ಕಿನ ಉಲ್ಲಂಘನೆಯಾಗಿದೆ ಎಂದೂ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.

ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಮತ್ತು ಮತದಾರರ ನೋಂದಣಿಗೆ ಸಂಬಂಧಿಸಿದ ‘ಫಾರ್ಮ್‌–6’ ಬಳಕೆಯ ವಿಚಾರಗಳನ್ನು ಮುಂದಿಟ್ಟುಕೊಂಡು ಸಿಜೆಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಪಕ್ಷ ಪಟ್ಟು ಹಿಡಿದಿದೆ. ಚುನಾವಣಾ ಪ್ರಕ್ರಿಯೆ ಮತ್ತು ಮತದಾರರ ಹಕ್ಕುಗಳಿಗೆ ಸಂಬಂಧಿಸಿದ ಈ ವಿವಾದದ ಕುರಿತು ಪ್ರತಿಭಟನೆ ನಡೆಸಲು ಮುಂದಾಗಿದ್ದ ನಾಯಕರನ್ನು ದೆಹಲಿಗೆ ಬಂದಿಳಿಯುತ್ತಿದ್ದಂತೆಯೇ ವಶಕ್ಕೆ ಪಡೆದಿರುವುದು ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    SIR Protest Delhi: ಜಂತರ್‌ ಮಂಥರ್‌ ಪ್ರತಿಭಟನೆಯ ಕ್ಷಣ ಕ್ಷಣದ ಮಾಹಿತಿ

    SIR ಅಕ್ರಮವನ್ನು ವಿರೋಧಿಸಿ ಸಿಜೆಪಿ ಸೇರಿದಂತೆ ವಿದ್ಯಾರ್ಥಿ ಯುವಜನರು ದೆಹಲಿಯ ಜಂತರ್‌ ಮಂಥರ್‌ ನಲ್ಲಿ ಇಂದು (ಅ.10) ಬೃಹತ್‌ ಪ್ರತಿಭಟನೆಗೆ ಕರೆ ನೀಡಿದೆ. ಈ ಪ್ರತಿಭಟನೆಗೆ ಕೇಂದ್ರ ಸರ್ಕಾರ ನಿರ್ಭಂಧ ವಿಧಿಸಿ, ರೈಲು,...

    ಸಿಜೆಪಿ ಪ್ರತಿಭಟನೆ 2.0: ದೆಹಲಿಯಲ್ಲಿ 25 ಸಾವಿರ ಪೊಲೀಸರು, 300 ಕ್ಯಾಮೆರಾಗಳು, 12 ಬಂಧನ ಕೇಂದ್ರಗಳು; ಇಂಟರ್ನೆಟ್ ಸ್ಥಗಿತ, ರೈಲು-ಮೆಟ್ರೊ ಸಂಚಾರಕ್ಕೂ ನಿರ್ಬಂಧ

    ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಅಕ್ಟೋಬರ್ 10ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ತಡೆಯಲು ದೆಹಲಿ ಪೊಲೀಸರು ರಾಜಧಾನಿಯಾದ್ಯಂತ ಬೃಹತ್ ಭದ್ರತಾ...

    DELHI PROTEST : ಧ್ರುವ್ ರಾಠಿ, ಬೃಂದಾ ಕಾರಟ್, ಕೆಕೆ ಶೈಲಜಾ ಸೇರಿದಂತೆ ನೂರಾರು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

    ಜಂತರ್ ಮಂತರ್‌ ಪ್ರತಿಭಟನೆಗೂ ಮುನ್ನ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ, ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್ ಮತ್ತು ಮಾಜಿ ಸಂಸದೆ ಬೃಂದಾ ಕಾರಟ್, ಕೆ.ಕೆ. ಶೈಲಜಾ...

    ಗ್ಯಾನೇಶ್‌ ಕುಮಾರ್ ವಜಾ – ಎಸ್‌ಐಆರ್ ಸಂಪೂರ್ಣ ರದ್ದತಿಗೆ ಆಗ್ರಹ; ಅ.10ರ ದೆಹಲಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ

    ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ವಜಾಗೊಳಿಸಿ, ಎಸ್‌ಐಆರ್ ಸಂಪೂರ್ಣ ರದ್ದು ಮಾಡುವಂತೆ ಅ.10 ರಂದು ಸಿಜೆಪಿ ಕರೆ ನೀಡಿರುವ ದೆಹಲಿ ಹೋರಾಟಕ್ಕೆ 'ಎಸ್‌ಐಆರ್ ವಿರೋಧಿ ಒಕ್ಕೂಟ' ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು,...

    ಎಸ್‌ಐಆರ್ ವಿವಾದ: ಅಕ್ಟೋಬರ್ 10ರಂದು ಮುಂಬೈನಲ್ಲಿ ತುಷಾರ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ; ದೇಶಾದ್ಯಂತ ಹೋರಾಟಕ್ಕೆ ಕರೆ

    ಮುಂಬೈ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಬೇಕೆಂಬ ಆಗ್ರಹದ ನಡುವೆಯೇ, ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್...

    ದೆಹಲಿ ಮೆಟ್ರೋ ನಿಲ್ದಾಣಗಳ ಬಂದ್‌ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್: ‘ನೊಣ ಕೊಲ್ಲಲು ಸುತ್ತಿಗೆ ಬಳಸಲು ಸಾಧ್ಯವಿಲ್ಲ’ ಎಂದ ನ್ಯಾ.ಸೂರ್ಯಕಾಂತ್

    ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆಯಲಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವ ನಿರ್ಧಾರಕ್ಕೆ...

    ಮಧ್ಯಪ್ರದೇಶ: ದೆಹಲಿ ಸಿಜೆಪಿ ಪ್ರತಿಭಟನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಬಲವಂತವಾಗಿ ರೈಲಿನಿಂದ ಕೆಳಗಿಳಿಸಿದ ಪೊಲೀಸರು

    ಅಕ್ಟೋಬರ್ 10 ರಂದು ನಡೆಯಲಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯಲ್ಲಿ ಭಾಗವಹಿಸಲು ನವದೆಹಲಿಗೆ ಪ್ರಯಾಣಿಸುತ್ತಿದ್ದ ಸುಮಾರು 15 ವಿದ್ಯಾರ್ಥಿಗಳನ್ನು ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಇಟಾರ್ಸಿ ಜಂಕ್ಷನ್‌ನಲ್ಲಿ ರೈಲಿನಿಂದ ಬಲವಂತವಾಗಿ ಕೆಳಗಿಳಿಸಲಾಗಿದೆ ಎಂದು...

    ‘ಯುವಕರಿಗೆ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಿ’: ರೈಲು ರದ್ದತಿ, ಪ್ರತಿಭಟನೆಗೆ ನಿರ್ಬಂಧದ ವಿರುದ್ಧ ಅಭಿಜೀತ್ ದೀಪ್ಕೆ ಆಕ್ರೋಶ

    ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ಮುನ್ನವೇ...

    ಎಸ್‌ಐಆರ್ ವಿವಾದ: ಸಂವಿಧಾನ್ ಸದನದಲ್ಲಿ ಮಧ್ಯಾಹ್ನ ‘ಇಂಡಿಯಾ’ ಮೈತ್ರಿಕೂಟದ ಸಭೆ; ರಾತ್ರಿ 8 ಗಂಟೆಗೆ ರಾಷ್ಟ್ರಪತಿಗಳ ಭೇಟಿ

    ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ನಡೆದಿದೆ ಎನ್ನಲಾದ ಅನಿಯಮಿತತೆಗಳ ಕುರಿತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, 'ಇಂಡಿಯಾ' (INDIA) ಮೈತ್ರಿಕೂಟದ ನಾಯಕರು ಇಂದು ರಾತ್ರಿ...

    ಸಿಜೆಪಿ ಪ್ರತಿಭಟನೆ: ದೆಹಲಿಯಲ್ಲಿ ರೈಲು ಸಂಚಾರ ರದ್ದು, ಭಾರೀ ಪ್ರಮಾಣದ ಭದ್ರತಾ ಸಿಬ್ಬಂದಿ ನಿಯೋಜನೆ

    ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಯಾವುದೇ ಗುಂಪು ಸೇರುವುದನ್ನು ಕಾನೂನುಬಾಹಿರವೆಂದು ಘೋಷಿಸಿದ್ದಾರೆ. ಅಕ್ಟೋಬರ್ 10 ರಂದು ಬೆಳಿಗ್ಗೆ 4 ರಿಂದ ಮಧ್ಯಾಹ್ನ 2 ರ...